ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
ಪ್ರಸ್ತುತ ಸ್ಮಾರ್ಟ್‌ಫೋನ್ ಖರೀದಿಸುವಾಗ ಬಹುತೇಕ ಎಲ್ಲರ ಅದ್ಯತೆ ವೇಗದ ಪ್ರೊಸೆಸರ್, ಅತ್ಯುತ್ತಮ ಕ್ಯಾಮೆರಾ, ಬಿಗ್ ಬ್ಯಾಟರಿ ಸೌಲಭ್ಯ ಇರಬೇಕು ಎಂದು ಬಯಸುತ್ತಾರೆ. ಹಾಗೆಯೇ 5G ನೆಟ್‌ವರ್ಕ್ ಸೌಲಭ್ಯ ಪಡೆದಿರಬೇಕು ಎಂದು ಸಹ ನಿರೀಕ್ಷಿಸುತ್ತಾರೆ. ಮಾರುಕಟ್ಟೆಯಲ್ಲಿ ಬಜೆಟ್ ದರದಲ್ಲಿ ಹಲವು ಬ್ರಾಂಡ್‌ಗಳು 5G ಫೋನ್ ಅನ್ನು ಪರಿಚಯಿಸಿವೆ.
ಹೌದು, ದೇಶಿಯ ಮೊಬೈಲ್ ಮಾರುಕಟ್ಟೆಯಲ್ಲಿ 5G ಸ್ಮಾರ್ಟ್‌ಫೋನ್‌ಗಳಿಗೆ ಸದ್ಯ ಫುಲ್ ಡಿಮ್ಯಾಂಡ್ ಇದೆ ಎನ್ನಬಹುದು. ಅದರಲ್ಲಿಯೂ ಬಜೆಟ್ ಬೆಲೆಯಲ್ಲಿ ಲಭ್ಯ ಇರುವ ಫೋನ್‌ಗಳು ಅಧಿಕ ಬೇಡಿಕೆ ಪಡೆದಿವೆ. 5G ಸೌಲಭ್ಯದ ಜೊತೆಗೆ ಇತರೆ ಆಕರ್ಷಕ ಫೀಚರ್ಸ್ ಪಡೆದಿರುವ ಫೋನ್‌ಗಳು ಗ್ರಾಹಕರ ಮನ ಗೆಲ್ಲುವಲ್ಲಿ ಸಫಲ ಆಗುತ್ತವೆ. ಹಾಗಾದರೇ ಸದ್ಯ ಬಜೆಟ್ ಬೆಲೆಯಲ್ಲಿ ಲಭ್ಯವಿರುವ ಬೆಸ್ಟ್ 5G ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ T3 5G ಮೊಬೈಲ್
ವಿವೋ T3 5G ಫೋನ್ 6.67 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್ ಬಲ ಪಡೆದಿದ್ದು. ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಇದೆ.
ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದ್ದು, 50 ಮೆಗಾ ಪಿಕ್ಸೆಲ್ ಸೆನ್ಸಾರ್ ಮುಖ್ಯ ಕ್ಯಾಮೆರಾ ಪಡೆದಿದ್ದು, 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಅಲ್ಲದೇ ಈ ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಕುಡಾ ಇದೆ. ಇದು 5G ಸೌಲಭ್ಯ ಸಹ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಮೊಬೈಲ್
ಸ್ಯಾಮ್‌ಸಂಗ್‌ನ ಈ ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ V ಸೂಪರ್ AMOLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದಲ್ಲದೇ ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಕಾರ್ಯ ಮಾಡಲಿದೆ.
ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿದೆ. ಅಲ್ಲದೇ ಇದು 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದು 25W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಪೊಕೊ X6 ನಿಯೋ ಮೊಬೈಲ್
ಪೊಕೊದ ಈ ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಪಡೆದಿದೆ. ಹಾಗೆಯೇ ಮೀಡಿಯಾಟೆಕ್ ಡೈಮೆನ್ಸಿಟಿ 6100+ (6 nm) ಪ್ರೊಸೆಸರ್ ಇದ್ದು, ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಪಡೆದಿದೆ.
ಅಲ್ಲದೇ ಇದು ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಪಡೆದಿದೆ.

ರೆಡ್ಮಿ 13C 5G ಮೊಬೈಲ್
ರೆಡ್ಮಿ 13C 5G ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇನ್ನು ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್ ಸೌಲಭ್ಯ ಒಳಗೊಂಡಿದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು. 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದು 5G ಸೌಲಭ್ಯ ಸಹ ಪಡೆದಿದೆ.


Click it and Unblock the Notifications








