ಫ್ಲಿಪ್‌ಕಾರ್ಟ್‌ನಲ್ಲಿ ಇಂದು ಹಾನರ್ 9X ಪ್ರೊ ಸ್ಮಾರ್ಟ್‌ಫೋನ್‌ ವಿಶೇಷ ಸೇಲ್!


ಜನಪ್ರಿಯ ಸ್ಮಾರ್ಟ್‌ಫೋನ್‌ ಕಂಪನಿಗಳಲ್ಲಿ ಒಂದಾದ ಹಾನರ್ ಈಗಾಗಲೇ ದೇಶಿಯ ಮಾರುಕಟ್ಟೆಯಲ್ಲಿ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್ ಪರಿಚಯಿಸಿದೆ ಗುರುತಿಸಿಕೊಂಡಿದೆ. ಆ ಪೈಕಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹಾನರ್ 9X ಪ್ರೊ ಸ್ಮಾರ್ಟ್‌ಫೋನ್‌ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನಿನ ಸೆಕೆಂಡ್ ಸೇಲ್ ಇಂದು ಮಧ್ಯಾಹ್ನ 12ರಿಂದ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಪ್ರಾರಂಭವಾಗಲಿದೆ.

Advertisement

ಫ್ಲಿಪ್‌ಕಾರ್ಟ್‌ ತಾಣದಲ್ಲಿ ಇಂದು ಹಾನರ್ 9X ಪ್ರೊ ಸ್ಮಾರ್ಟ್‌ಫೋನ್‌ ವಿಶೇಷ ಸೇಲ್ ಆರಂಭವಾಗಲಿದ್ದು, ಪೂರ್ವ-ನೋಂದಾಯಿತ (pre-registered) ಬಳಕೆದಾರರು ಖರೀದಿಸಬಹುದಾಗಿದೆ. ಈ ಫೋನ್ ಹುವಾವೆ ಮೊಬೈಲ್ ಸರ್ವೀಸ್‌ನ ಫೋನಾಗಿದ್ದು, ಗೂಗಲ್ ಪ್ಲೇ ಸ್ಟೋರ್ ಬದಲಿಗೆ ಹುವಾವೆ ಆಪ್‌ ಗ್ಯಾಲರಿ ಒಳಗೊಂಡಿರಲಿದೆ. ಈ ಫೋನ್ 6GB RAM + 256GB ವೇರಿಯಂಟ್ ಬೆಲೆಯು 17,999ರೂ, ಆಗಿದೆ. ಆದರೆ ಕಂಪನಿ 3,000ರೂ.ಗಳ ವಿಶೇಷ ರಿಯಾಯಿತಿ ಘೋಷಿಸಿದ್ದು, 14,999ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಹಾನರ್‌ 9X ಪ್ರೊ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

Advertisement
ಡಿಸ್‌ಪ್ಲೇ ಡಿಸೈನ್

ಹಾನರ್ 9X ಪ್ರೊ ಸ್ಮಾರ್ಟ್‌ಫೋನ್‌ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.59-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಐಪಿಎಸ್ ಡಿಸ್‌ಪ್ಲೇ ವಿನ್ಯಾಸ ಹೊಂದಿದ್ದು, 19.5: 9 ರಚನೆಯ ಅನುಪಾತವನ್ನ ಒಳಗೊಂಡಿದೆ. ಇದಲ್ಲದೆ ಸ್ಕ್ರೀನ್-ಟು-ಬಾಡಿ 92% ಅನುಪಾತವನ್ನು ಹೊಂದಿದೆ. ವೀಡಿಯೋ ಕರೆಗಳು ಹಾಗೂ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಸಹ ಹೊಂದಿದೆ,

ಪ್ರೊಸೆಸರ್‌ ಕಾರ್ಯ

ಹಾನರ್ 9X ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕಿರಿನ್ 810 SoC ಪ್ರೊಸೆಸರ್‌ ಅನ್ನು ಹೊಂದಿದೆ, ಅಲ್ಲದೆ ಆಂಡ್ರಾಯ್ಡ್‌9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 6GB RAM ಮತ್ತು 256GB ಆಂತರಿಕ ಸಂಗ್ರಹಣಾ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ನಲ್ಲಿ ಜಿಪಿಯು ಟರ್ಬೊ 3.0 ತಂತ್ರಜ್ಞಾನವೂ ಇದೆ.

ಟ್ರಿಪಲ್ ಕ್ಯಾಮೆರಾ

ಹಾನರ್ 9X ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಎಂಪಿ ಸೋನಿ ಐಎಂಎಕ್ಸ್ 582 ಸೆನ್ಸಾರ್‌, ಎರಡನೇ ಕ್ಯಾಮೆರಾ 8ಎಂಪಿ ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದ್ದು, 120 ಡಿಗ್ರಿ ಹೊಂದಿದೆ ಫೀಲ್ಡ್-ಆಫ್-ವ್ಯೂ ಅನ್ನು ಒಳಗೊಂಡಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 1ಎಂಪಿ ಸೆನ್ಸಾರ್‌ ಸಾಮರ್ಥ್ಯದ ಪಾಪ್-ಅಪ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಹಾನರ್ 9X ಪ್ರೊ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಒಂದೇ ಚಾರ್ಜ್‌ನಲ್ಲಿ ಒಂದು ದಿನದವರೆಗೆ ಪವರ್‌ ಬಾಳಿಕೆ ಇರುತ್ತದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ USB ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಸೈಡ್-ಮೌಂಟೆಡ್ ಫಿಂಗರ್‌ ಪ್ರಿಂಟ್‌ ಸೆನ್ಸಾರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಹಾನರ್ 9X ಪ್ರೊ ಸ್ಮಾರ್ಟ್‌ಫೋನ್‌ ಬೆಲೆಯು 17,999 ರೂ.ಆಗಿದ್ದು, ಇಂದಿನ (ಮೇ.28) ವಿಶೇಷ ಸೇಲ್‌ನಲ್ಲಿ 14,999ರೂ.ಗಳಿಗೆ ಲಭ್ಯವಾಗಲಿದೆ. ಪೂರ್ವ ನೋಂದಾಯಿತ ಬಳಕೆದಾರು ಈ ಫೋನ್ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮಿಡ್ನೈಟ್ ಬ್ಲ್ಯಾಕ್ ಮತ್ತು ಫ್ಯಾಂಟಮ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಬ್ಯವಾಗಲಿದೆ.

Best Mobiles in India

English Summary

Honor 9X Pro will be available at a discounted price. The company is offering a discount of Rs 3,000 as well as no-cost EMI option for up to six months.