Huawei P40 pro: ಬರಲಿದೆ ಐದು ಕ್ಯಾಮೆರಾಗಳನ್ನು ಹೊಂದಿರುವ ಸ್ಮಾರ್ಟ್‌ಫೋನ್‌!


ಚೀನಾ ಮೂಲದ ಹುವಾವೇ ಕಂಪೆನಿ ಈಗಾಗ್ಲೆ ತನ್ನ ವೈವಿಧ್ಯ ಬಗೆಯ ಸ್ಮಾರ್ಟ್‌ಫೋನ್‌ಗಳಿಂದ ಟೆಕ್‌ ಮಾರುಕಟ್ಟೆಯಲ್ಲಿ ಸೈ ಎನಿಸಿಕೊಂಡಿದೆ. ಪ್ರತಿ ಆವೃತ್ತಿಯಲ್ಲೂ ಹೊಸ ಮಾದರಿಯ ಫೀಚರ್ಸ್‌ಗಳನ್ನ ಪರಿಚಯಿಸುವ ಹುವಾವೇ ಇದೀಗ ಹುವಾವೇ P40 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಲು ಸಜ್ಜಾಗಿದೆ. ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್‌ ಆಗಿರೋ ಹುವಾವೇ P40ಪ್ರೊ ಸ್ಮಾರ್ಟ್‌ಫೋನ್‌ನ ಕ್ಯಾಮೆರಾ ಸೆಟ್‌ಆಪ್‌ ಫೀಚರ್ಸ್‌ಗಳೇನು ಅನ್ನೊದು ಆನ್‌ಲೈನ್‌ ನಲ್ಲಿ ಲೀಕ್‌ ಆಗಿದೆ.

ಹೌದು, ಹುವಾವೇ P40 ಪ್ರೊ ಸ್ಮಾರ್ಟ್‌ಫೋನ್‌ನ ಕ್ಯಾಮೆರಾ ಫೀಚರ್ಸ್‌ ಆನ್‌ಲೈನ್‌ನಲ್ಲಿ ಲೀಕ್‌ ಆಗಿದ್ದು, ಲೀಕ್‌ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ಪೆಂಟಾ ಕ್ಯಾಮೆರಾ ಸೆಟ್‌ಆಪ್‌ ಹೊಂದಿರಲಿದೆ ಅನ್ನೊದು ಸ್ಮಾರ್ಟ್‌ಫೋನ್‌ ಪ್ರಿಯರ ನಿರೀಕ್ಷೆ ಇನ್ನು ಹೆಚ್ಚಾಗುವಂತೆ ಮಾಡಿದೆ. ಅಲ್ಲದೆ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾ ಸೆಟ್‌ಆಪ್‌ ಹೊಂದಿರಲಿದೆ ಎಂದು ಹೇಳಲಾಗ್ತಿದ್ದು, ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಸೌಂಡ್‌ ಮಾಡೋ ಸೂಚನೆ ನೀಡಿದೆ.

ಸದ್ಯ ಲೀಕ್‌ ಮಾಹಿತಿ ಪ್ರಕಾರ ಹುವಾವೇ P40 ಪ್ರೊ ಪಂಚ್‌ಹೋಲ್‌ ಡಿಸ್‌ಪ್ಲೇ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು ಎರಡು ಸೆಲ್ಫಿ ಕ್ಯಾಮೆರಾ ಹಾಗೂ ಹಿಂಭಾಗದಲ್ಲಿ ಐದು ಕ್ಯಾಮೆರಾಗಳನ್ನ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಪೆಂಟಾ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಎರಡನೇ ಕ್ಯಾಮೆರಾ 20ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ ವೈಡ್ ಕ್ಯಾಮೆರಾ, ಮೂರನೇ ಕ್ಯಾಮೆರಾ 12ಮೆಗಾ ಪಿಕ್ಸೆಲ್‌ ಪೆರಿಸ್ಕೋಪ್ ಟೆಲಿಫೋಟೋ ಲೆನ್ಸ್, ನಾಲ್ಕು ಮತ್ತು ಐದನೇ ಕ್ಯಾಮೆರಾ ಮ್ಯಾಕ್ರೋ ಲೆನ್ಸ್ ಮತ್ತು ಪ್ಲೈಟ್‌ ಸೆನ್ಸಾರ್‌ ಹೊಂದಿದೆ ಎಂದು ಹೇಳಲಾಗ್ತಿದೆ. ಜೊತೆಗೆ 32 ಎಂಪಿ +2 ಎಂಪಿ ಡ್ಯುಯಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿರಲಿದೆ.

ಇನ್ನು ಈ ಕ್ಯಾಮೆರಾಗಳು ಫೋಕಲ್ ಉದ್ದವನ್ನು 18mm ನಿಂದ 240mm ವರೆಗೆ ಒಳಗೊಂಡಿದೆ, ಇದರ ಪ್ರಕಾರ ಅಲ್ಟ್ರಾ ವೈಡ್-ಆಂಗಲ್ ಕ್ಯಾಮೆರಾ ಫೋಕಲ್ 18mm ಉದ್ದವನ್ನು ಹಾಗೂ ಟೆಲಿಫೋಟೋ ಲೆನ್ಸ್ ಕ್ಯಾಮೆರಾ 240mm ಉದ್ದವನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಗಳು 13x ಕ್ಕಿಂತ ಹೆಚ್ಚಿನ ಪ್ರಮಾಣ ಜೂಮ್ ಸೆನ್ಸಾರ್‌ ಅನ್ನು ಹೊಂದಿವೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಕ್ಯಾಮೆರಾಗಳು 5x ಆಪ್ಟಿಕಲ್ ಜೂಮ್ ಮತ್ತು 10x ಲೋಸ್‌ಲೆಸ್‌ ಜೂಮ್ ಅನ್ನು ಬೆಂಬಲಿಸುತ್ತವೆ.

ಹುವಾವೇ p40 ಪ್ರೊ ಸ್ಮಾರ್ಟ್‌ಫೋನ್‌ನ ಕ್ಯಾಮೆರಾ ಮಾದರಿಯಲ್ಲಿ ಡಿಜಿಟಲ್ ಜೂಮ್, 10 ಎಕ್ಸ್ ಆಪ್ಟಿಕಲ್ ಜೂಮ್, ಆಟೋ ಫ್ಲ್ಯಾಶ್, ಫೇಸ್ ಡಿಟೆಕ್ಷನ್, ಫಿಚರ್ಸ್‌ಗಳನ್ನ ಒಳಗೊಂಡಿವೆ. ಇನ್ನು ಈ ಸ್ಮಾರ್ಟ್‌ಫೋನ್‌ 5500 mAh ಬ್ಯಾಟರಿ ಪ್ಯಾಕ್‌ಆಪ್‌ ಹೊಂದಿರಲಿದೆ ಎಂದು ಹೇಳಲಾಗ್ತಿದ್ದು, ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್, ಜಿಪಿಎಸ್,

ಯುಎಸ್ಬಿ ಟೈಪ್-ಸಿ ಪೋರ್ಟ್, ಸಿಮ್ ಟ್ರೇ ಮತ್ತು ಸ್ಪೀಕರ್ ಹೊಂದಿರಲಿವೆ ಎಂದು ಅಂದಾಜಿಸಲಾಗಿದೆ. ಇದೇ ಮಾರ್ಚ್‌ ತಿಂಗಳಲ್ಲಿ ಮಾರುಕಟ್ಟೆಗೆ ಬರುವ ನಿರೀಕ್ಷೆ ಇದೆ.

Most Read Articles
Best Mobiles in India
Read More About: huawei mobile battery smartphone

Have a great day!
Read more...

English Summary

Huawei P40 Pro is one of the most anticipated flagship smartphones of this year. While it is not likely to get Google applications, the device will show Huawei’s prowess in the hardware department. While the device has leaked in the form of renders, we now have the most definitive look at the device yet.