Home
ಸುದ್ದಿಜಾಲ

ಇತ್ತೀಚಿನ ಈ ಹೊಸ 5G ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ; ವಾವ್‌ ಎನಿಸುವ ಆಫರ್‌!

ರಿಯಲ್‌ಮಿ ಮೊಬೈಲ್‌ ಸಂಸ್ಥೆಯು ಭಿನ್ನ ಮೊಬೈಲ್‌ಗಳ ಮೂಲಕ ಈಗಾಗಲೇ ದೇಶದ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಸಂಸ್ಥೆಯ ಬಜೆಟ್‌ ದರದ ಫೋನ್‌ಗಳು ಹೆಚ್ಚಿನ ಸದ್ದು ಮಾಡಿದ್ದು, ಗ್ರಾಹಕರನ್ನು ಸೆಳೆದಿವೆ. ಇದೀಗ ರಿಯಲ್‌ಮಿ P1 Speed 5G ( Realme P1 Speed 5G ) ಮೊಬೈಲ್‌ ಆಕರ್ಷಕ ಫೀಚರ್ಸ್‌ ಜೊತೆಗೆ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸೌಲಭ್ಯದ AI ಕ್ಯಾಮೆರಾ ಅನ್ನು ಪಡೆದುಕೊಂಡಿದ್ದು, ಸದ್ಯ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದೆ.

ಹೌದು, ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ನಲ್ಲಿ ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ P1 Speed 5G ( Realme P1 Speed 5G ) ಫೋನ್‌ ಶೇ. 14% ರಷ್ಟು ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನಿನ 8 GB RAM + 128 GB ಸ್ಟೋರೇಜ್‌ನ ವೇರಿಯಂಟ್‌ ಅನ್ನು ಗ್ರಾಹಕರು 17,999ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿ ಮಾಡಬಹುದು. ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ.

ಇತ್ತೀಚಿನ ಈ ಹೊಸ 5G ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ; ವಾವ್‌ ಎನಿಸುವ ಆಫರ್‌!

ಅದೇ ರೀತಿ ಈ ಇತ್ತೀಚಿನ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಸಾಮರ್ಥ್ಯ ಪಡೆದಿದೆ. ಇದರ ಜೊತೆಗೆ 8GB + 128GB ಹಾಗೂ 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ ಬ್ನನಿರಿ. ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮಾಹಿತಿ

ರಿಯಲ್‌ಮಿ P1 ಸ್ಪೀಡ್‌ 5G ಸ್ಮಾರ್ಟ್‌ಫೋನ್‌ 6.67 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2400 ×1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದ್ದು, ರೇನ್ ವಾಟರ್‌ ಸ್ಮಾರ್ಟ್‌ ಟಚ್‌ ಹಾಗೂ ಪಾಂಡಾ ಗ್ಲಾಸ್‌ ಪ್ರೊಕೆಕ್ಷನ್‌ ಸೌಲಭ್ಯ ಒಳಗೊಂಡಿದೆ.

ಪ್ರೊಸೆಸರ್‌ ಸ್ಪೀಡ್‌ ಏನು

ರಿಯಲ್‌ಮಿ P1 ಸ್ಪೀಡ್‌ 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್‌ ಪವರ್‌ ಪಡೆದಿದ್ದು, ಜೊತೆಗೆ ಇದು ಮಾಲಿ-G615 MC2 GPU ಹೊಂದಿದೆ. ಇದು ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ 8GB RAM / 12GB ಮತ್ತು 128GB RAM / 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ.

ಕ್ಯಾಮೆರಾ ಸೆನ್ಸಾರ್‌ ಎಷ್ಟು

ರಿಯಲ್‌ಮಿ P1 ಸ್ಪೀಡ್‌ 5G ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ AI ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2MP ಸೆನ್ಸಾರ್‌ ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮರಾವನ್ನು ನೀಡಲಾಗಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಮಾಹಿತಿ

ರಿಯಲ್‌ಮಿ P1 ಸ್ಪೀಡ್‌ 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 45W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಅಲ್ಲದೇ ಇದು ಬ್ಲೂಟೂತ್ 5.4, ಬೀಡೌ, GPS, GLONASS, ಗೆಲಿಲಿಯೋ, QZSS, USB ಟೈಪ್-ಸಿ ಆಯ್ಕೆಗಳನ್ನು ಕೂಡಾ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್‌ ವೇರಿಯಂಟ್‌ ಹಾಗೂ 12GB + 256GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಪಡೆದಿದೆ.

Best Mobiles in India

English summary
Major Price Cut on Realme P1 Speed 5G on Flipkart Website in India. Know more details here. ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ನಲ್ಲಿ ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ P1 Speed 5G ( Realme P1 Speed 5G ) ಫೋನ್‌ ಶೇ. 14% ರಷ್ಟು ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನಿನ 8 GB RAM + 128 GB ಸ್ಟೋರೇಜ್‌ನ ವೇರಿಯಂಟ್‌ ಅನ್ನು ಗ್ರಾಹಕರು 17,999ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿ ಮಾಡಬಹುದು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+