ಹೊಸ ರೆಡ್ಮಿ 5G ಫೋನ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ; ಈ ಆಫರ್ ಕಳ್ಕೋಬೇಡಿ!
ಅಮೆಜಾನ್, ಫ್ಲಿಪ್‌ಕಾರ್ಟ್ ಸೇರಿದಂತೆ ಇತರೆ ಆನ್‌ಲೈನ್ ಇ ಕಾಮರ್ಸ್ ವೆಬ್‌ಸೈಟ್‌ಗಳು ಸ್ಪೆಷಲ್ ಮಾರಾಟ ಮೇಳ ಆಯೋಜಿಸುವ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯುವ ಪ್ರಯತ್ನ ನಡೆಸುತ್ತವೆ. ಹಾಗೆಯೇ ಇತ್ತೀಚಿಗೆ ಮೊಬೈಲ್ ಬ್ರ್ಯಾಂಡ್‌ಗಳು ಸಹ ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾರಾಟ ಮೇಲ ಆಯೋಜಿಸುವ ಮೂಲಕ ತಮ್ಮ ಫೋನ್‌ಗಳಿಗೆ ನೇರವಾಗಿ ಭರ್ಜರಿ ಡಿಸ್ಕೌಂಟ್ ಒದಗಿಸುತ್ತಿವೆ. ಇದೀಗ ಶಿಯೋಮಿಯು ಸೂಪರ್ ಸೇವರ್ ಸೇಲ್ ಆಯೋಜಿಸಿದ್ದು, ರೆಡ್ಮಿ ಮೊಬೈಲ್‌ಗಳಿಗೆ ಬಿಗ್ ರಿಯಾಯಿತಿ ಘೋಷಿಸಿದೆ.
ಹೌದು, ಶಿಯೋಮಿ ಕಂಪನಿಯು ತನ್ನ ವೆಬ್‌ಸೈಟ್‌ನಲ್ಲಿ ಶಿಯೋಮಿ ಸೂಪರ್ ಸೇವರ್ ಸೇಲ್ ( Xiaomi Super Saver Sale ) ಮಾರಾಟ ಆಯೋಜಿಸಿದ್ದು, ಈ ಸೇಲ್‌ನಲ್ಲಿ ಆಯ್ದ ಉತ್ಪನ್ನಗಳು ಬಿಗ್ ಡಿಸ್ಕೌಂಟ್ ಪಡೆದುಕೊಂಡಿವೆ. ಆ ಪೈಕಿ ರೆಡ್ಮಿ 13C 5G (Redmi 13C 5G) ಮೊಬೈಲ್ ಅತ್ಯುತ್ತಮ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನ್ ಶೇ. 25% ಡಿಸ್ಕೌಂಟ್ ಪಡೆದಿದ್ದು, ಈಗ 10,499ರೂ. ಗಳಿಗೆ ಖರೀದಿ ಮಾಡಬಹುದಾಗಿದೆ.

ಇನ್ನು ರೆಡ್ಮಿ ಈ ಮೊಬೈಲ್ 6GB RAM + 128GB ಹಾಗೂ 8GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್ ಪಡೆದಿದ್ದು, ಜೊತೆಗೆ 5,000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ರೆಡ್ಮಿ 13C 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ 13C 5G ಫೀಚರ್ಸ್
ರೆಡ್ಮಿ 13 5G ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲ ಪಡೆದಿದೆ. ಇದರೊಂದಿಗೆ ಡಿಸ್‌ಪ್ಲೇಯು 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದ್ದು, 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ರೆಡ್ಮಿ 13 5G ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್ನಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಸಪೋರ್ಟ್ ನೊಂದಿಗೆ ರನ್ ಆಗಲಿದೆ. ಹಾಗೆಯೇ 6 GB RAM + 128 GB ಹಾಗೂ 8 GB RAM + 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯ. ಇದರೊಂದಿಗೆ ಮೆಮೊರಿ ಕಾರ್ಡ್ ಬೆಂಬಲದ ಜೊತೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.
ರೆಡ್ಮಿ 13 5G ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದ್ದು. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ರೆಡ್ಮಿ 13 5G ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಈ ಮೊಬೈಲ್ 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡಾ ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5 ಎಂಎಂ ಆಡಿಯೊ ಜಾಕ್, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್ C ಚಾರ್ಜಿಂಗ್ ಸಪೋರ್ಟ್ ಒದಗಿಸುತ್ತದೆ.


Click it and Unblock the Notifications








