ಭಾರತದಲ್ಲಿ ಮೊಟೊ G9 ಪವರ್ ಸ್ಮಾರ್ಟ್‌ಫೋನ್ ಲಾಂಚ್! ಬೆಲೆ ಎಷ್ಟು?
ಮೊಟೊರೊಲಾ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಮೊಟೊರೊಲಾ ಇದೀಗ ಮೊಟೋ G9 ಪವರ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.8 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಇದು 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಹೌದು, ಲೆನೊವೊ ಒಡೆತನದ ಮೊಟೊರೊಲಾ ಭಾರತದಲ್ಲಿ ತನ್ನ ಹೊಸ ಮೊಟೋ G 9 ಪವರ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋಣ್ ಐಪಿ 52-ರೇಟೆಡ್ ವಾಟರ್-ರಿಪಲ್ಲೆಂಟ್ ಬಿಲ್ಡ್ ಅನ್ನು ಸಹ ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ಡಿಸ್‌ಪ್ಲೇ ಹೇಗಿದೆ?
ಮೊಟೊ G 9 ಪವರ್ ಸ್ಮಾರ್ಟ್‌ಫೋನ್ 720x1,640 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8-ಇಂಚಿನ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20.5: 9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ 83.1% ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಬಳಸಿ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ
ಮೊಟೊ G 9 ಪವರ್ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಮೋಟೋ G 9 ಪವರ್ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು 20W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE , ವೈ-ಫೈ, ಬ್ಲೂಟೂತ್ ವಿ 5.0, ಜಿಪಿಎಸ್ , ಎನ್‌ಎಫ್‌ಸಿ, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಮೋಟೋ G 9 ಪವರ್ ಸ್ಮಾರ್ಟ್‌ಫೋನ್ ಬೆಲೆಯನ್ನು ಸಿಂಗಲ್ 4GB RAM + 128GB ಸ್ಟೋರೇಜ್ ರೂಪಾಂತರಕ್ಕೆ 11,999 ರೂ.ನಿಗದಿಪಡಿಸಲಾಗಿದೆ. ಇನ್ನು ಈ ಫೋನ್ ಎಲೆಕ್ಟ್ರಿಕ್ ವೈಲೆಟ್ ಮತ್ತು ಮೆಟಾಲಿಕ್ ಸೇಜ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ. ಇದು ಡಿಸೆಂಬರ್ 15 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ.


Click it and Unblock the Notifications