Home
ಸುದ್ದಿಜಾಲ

32MP ಸೆಲ್ಫಿ ಕ್ಯಾಮೆರಾ ಸೌಲಭ್ಯದ ಈ ಮೊಬೈಲ್‌ಗೆ ಈಗ ಭರ್ಜರಿ ಡಿಸ್ಕೌಂಟ್‌!

ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಬಿಗ್ ಬಚತ್‌ ಸೇಲ್‌ ಘೋಷಿಸಿದ್ದು, ಇದೀಗ ಲೈವ್‌ ಆಗಿದೆ. ಈ ಮಾರಾಟದಲ್ಲಿ ಆಯ್ದ ಕೆಲವು ಮೊಬೈಲ್‌ಗಳು ಆಕರ್ಷಕ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಆಗಲಿವೆ. ಇದರಲ್ಲದೇ ಬ್ಯಾಂಕ್‌ ಆಫರ್‌ ಹಾಗೂ ಇತರೆ ಡಿಸ್ಕೌಂಟ್‌ ಪ್ರಯೋಜನಗಳು ಕೂಡಾ ಖರೀದಿದಾರರಿಗೆ ಲಭ್ಯವಾಗಲಿವೆ. ಈ ಸೇಲ್‌ನಲ್ಲಿ ಮೊಟೊರೊಲಾ ಸಂಸ್ಥೆಯು ಮೊಟೊರೊಲಾ ಎಡ್ಜ್‌ 50 ಫ್ಯೂಜನ್‌ ಮೊಬೈಲ್‌ ಸಖತ್‌ ಡಿಸ್ಕೌಂಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಫ್ಲಾಟ್‌ಫಾರ್ಮ್‌ನಲ್ಲಿ ಮೊಟೊರೊಲಾ ಎಡ್ಜ್‌ 50 ಫ್ಯೂಜನ್‌ (Motorola Edge 50 Fusion) ಫೋನ್‌ ಶೇ. 11% ರಷ್ಟು ನೇರ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 8 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಆಫರ್‌ನಲ್ಲಿ 22,999ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್‌ ಸಹ ಪಡೆಯಬಹುದಾಗಿದೆ.

32MP ಸೆಲ್ಫಿ ಕ್ಯಾಮೆರಾ ಸೌಲಭ್ಯದ ಈ ಮೊಬೈಲ್‌ಗೆ ಈಗ ಭರ್ಜರಿ ಡಿಸ್ಕೌಂಟ್‌!

ಅಂದಹಾಗೆ ಈ ಫೋನ್‌ 8GB + 128GB ಹಾಗೂ 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಈ ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದರ ಜೊತೆಗೆ 68W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯವನ್ನು ಒಳಗೊಂಡಿದೆ. ಇನ್ನುಳಿದಂತೆ ಮೊಟೊರೊಲಾ ಎಡ್ಜ್‌ 50 ಫ್ಯೂಜನ್‌ ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಮೊಟೊರೊಲಾ ಎಡ್ಜ್‌ 50 ಫ್ಯೂಜನ್‌ - ಫೀಚರ್ಸ್‌

ಮೊಟೊರೊಲಾ ಎಡ್ಜ್‌ 50 ಫ್ಯೂಜನ್‌ ಫೋನ್‌ 6.7 ಇಂಚಿನ 3D ಕರ್ವ್ಡ್‌ pOLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇಯು 2400 × 1080p ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. ಅಲ್ಲದೇ ಈ ಫೋನಿನ 1600 ನಿಟ್ಸ್‌ ಪೀಕ್ ಬ್ರೈಟ್ನೆಸ್‌, 144Hz ರಿಫ್ರೆಶ್‌ ರೇಟ್‌ ಸೌಲಭ್ಯ ಜೊತೆಗೆ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಸೌಲಭ್ಯ ಸಹ ಕಾಣಬಹುದಾಗಿದೆ

ಮೊಟೊರೊಲಾ ಎಡ್ಜ್‌ 50 ಫ್ಯೂಜನ್‌ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್‌ ಸ್ನಾಪ್ಡ್ರಾಗನ್ 7s ಜೆನ್ 3 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಇದೆ. ಅಲ್ಲದೇ ಈ ಫೋನ್‌ 8GB + 128GB ಹಾಗೂ 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದೆ.

ಮೊಟೊರೊಲಾ ಎಡ್ಜ್‌ 50 ಫ್ಯೂಜನ್‌ ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇನ್ನು ಎರಡನೇ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ನ 2x ಟೆಲಿಫೋಟೋ ಲೆನ್ಸ್‌ ಸೌಲಭ್ಯ ಒಳಗೊಂಡಿದೆ. ಇನ್ನು ಈ ಫೋನಿನ ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ.

ಮೊಟೊರೊಲಾ ಎಡ್ಜ್‌ 50 ಫ್ಯೂಜನ್‌ ಮೊಬೈಲ್‌ 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 68W ಟರ್ಬೋ ಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಹಾಗೆಯೇ ಇದು ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್ ಅನ್‌ಲಾಕ್ ಆಯ್ಕೆಗಳು ಹಾಗೂ ಡಾಲ್ಬಿ ಅಟ್ಮಾಸ್ ಆಡಿಯೋ ಸೌಲಭ್ಯ ಸಹ ಇದೆ. ಇದರೊಂದಿಗೆ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್ - C ಪೋರ್ಟ್ ಆಯ್ಕೆಗಳು ಸಹ ಇದೆ.

Best Mobiles in India

English summary
Motorola Edge 50 Fusion Now at Unbeatable Discount on Flipkart India. check out offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+