Home
ಸುದ್ದಿಜಾಲ

ನ.21ಕ್ಕೆ OPPO Find X8 ಸರಣಿ ಬಿಡುಗಡೆ; ಒಂದಲ್ಲ, ಎರಡು ಹೊಸ ಫೋನ್.. ವಿಶೇಷತೆಗಳೇನು?

ದಿ ವೇಟ್ ಈಸ್ ಓವರ್..! ಒಪ್ಪೋ (Oppo) ತನ್ನ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಶೀಘ್ರವೇ ಎರಡು ಹೊಸ ಒಪ್ಪೋ ಮೊಬೈಲ್‌ಗಳು ಬಿಡುಗಡೆಯಾಗಲಿವೆ. ಹೌದು, ಕಂಪನಿಯು ತನ್ನ ಬಹುನಿರೀಕ್ಷಿತ ಫೈಂಡ್ X8 (OPPO Find X8) ಸರಣಿಯ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ. ಇದರಲ್ಲಿ ಒಪ್ಪೋ ಫೈಂಡ್ X8 (OPPO Find X8) ಮತ್ತು ಒಪ್ಪೋ ಫೈಂಡ್ X8 ಪ್ರೊ (OPPO Find X8 Pro) ಫೋನ್‌ಗಳು ಮಾರುಕಟ್ಟೆಗೆ ಲಗ್ಗೆ ಇಡಲಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಕಂಪನಿಯು ಈಗಾಗಲೇ ಚೀನಾದಲ್ಲಿ OPPO Find X8 ಸರಣಿಯನ್ನು ಪ್ರಾರಂಭಿಸಿದೆ. ಇದೀಗ, ಹೊಸ ಒಪ್ಪೋ ಫೈಂಡ್ X8 ಮತ್ತು ಒಪ್ಪೋ ಫೈಂಡ್ X8 ಪ್ರೊ ಮೊಬೈಲ್‌ಗಳನ್ನು ನವೆಂಬರ್ 21 ರಂದು ಭಾರತದಲ್ಲಿ ಬಿಡುಗಡೆ ಮಾಡುತ್ತಿದೆ. ಜೊತೆಗೆ, ಹೊಸ ColorOS 15 ಅನ್ನು ಪರಿಚಯಿಸುತ್ತಿದೆ. ಕಂಪನಿಯು ತನ್ನ ವೆಬ್‌ಸೈಟ್‌ನಲ್ಲಿ ಮುಂಗಡ ಬುಕಿಂಗ್ ಪುಟವನ್ನು ಲೈವ್ ಮಾಡಿದೆ. ಈ ಫೋನ್‌ಗಳು ಮೀಡಿಯಾ ಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್ ಹೊಂದಿವೆ. ಇದರೊಂದಿಗೆ ಆಂಡ್ರಾಯ್ಡ್ 15 ಆಧಾರಿತ ColorOS 15ನಲ್ಲಿ ಕೆಲಸ ನಿರ್ವಹಿಸಲಿವೆ.

ನ.21ಕ್ಕೆ OPPO Find X8 ಸರಣಿ ಬಿಡುಗಡೆ; ಒಂದಲ್ಲ, ಎರಡು ಹೊಸ ಫೋನ್.. ಬೆಲೆ ನೋಡಿ

ಒಪ್ಪೋ ಫೈಂಡ್ X8 ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಒಪ್ಪೋ ಫೈಂಡ್ X8 ಫೋನ್ 6.59 ಇಂಚಿನ ಓಎಲ್‌ಇಡಿ ಫ್ಲಾಟ್ ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರ, 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು ಡಾಲ್ಬಿ ವಿಷನ್ ಬೆಂಬಲ ಪಡೆದಿದೆ. ಜೊತೆಗೆ, ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ತಂತ್ರಜ್ಞಾನ ಸಹ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಕಂಪನಿಯು ಒಪ್ಪೋ ಫೈಂಡ್ X8 ಮೊಬೈಲ್ ಅನ್ನು ಮೀಡಿಯಾ ಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್‌ನಲ್ಲಿ ಬಿಡುಗಡೆ ಮಾಡಿದೆ. ಇದು ಆಂಡ್ರಾಯ್ಡ್‌ 15 ಆಧಾರಿತ ColorOS 15 ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಫೋನ್ 16GB RAM ಮತ್ತು 1TB ಇಂಟರ್ನಲ್ ಸ್ಟೋರೇಜ್‌ ಹೊಂದಿದೆ.

ಕ್ಯಾಮೆರಾ ಸೆಟಪ್

ಒಪ್ಪೋ ಫೈಂಡ್ X8 ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ JN5 ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಫೋನ್ 32 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಕಂಪನಿಯು ಒಪ್ಪೋ ಫೈಂಡ್ X8 ಸ್ಮಾರ್ಟ್‌ಫೋನ್‌ ಅನ್ನು 5630mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಿದೆ. ಇದನ್ನು ಚಾರ್ಜ್‌ ಮಾಡಲು, 80W ವೈರ್ಡ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯ ಕಲ್ಪಿಸಲಾಗಿದೆ ಇದರೊಂದಿಗೆ 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಸಹ ಲಭ್ಯವಿದೆ.

ಇತರೆ ವೈಶಿಷ್ಟ್ಯಗಳು

ಈ ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ. ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP68/69 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸ್ಪೀಕರ್‌ಗಳು, ವೈ ಫೈ 7, ಬ್ಲೂಟೂತ್ 5.4, ಯುಎಸ್‌ಬಿ ಸಿ, ಎನ್‌ಎಫ್‌ಸಿ, ಕ್ರಿಸ್ಟಲ್ ಶೀಲ್ಡ್ ಗ್ಲಾಸ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ನ.21ಕ್ಕೆ OPPO Find X8 ಸರಣಿ ಬಿಡುಗಡೆ; ಒಂದಲ್ಲ, ಎರಡು ಹೊಸ ಫೋನ್.. ಬೆಲೆ ನೋಡಿ

ಒಪ್ಪೋ ಫೈಂಡ್ X8 ಪ್ರೊ ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಒಪ್ಪೋ ಫೈಂಡ್ X8 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ ಮೈಕ್ರೋ ಕ್ವಾಡ್ ಕರ್ವ್ಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರ, 4500 ನಿಟ್ಸ್ ಬ್ರೈಟ್‌ನೆಸ್ ಮತ್ತು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ತಂತ್ರಜ್ಞಾನವನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಮುಂಬರುವ ಒಪ್ಪೋ ಫೈಂಡ್ X8 ಪ್ರೊ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್‌ 15 ಆಧಾರಿತ ColorOS 15 ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಈ ಸ್ಮಾರ್ಟ್‌ಫೋನ್ 16GB RAM ಮತ್ತು 1TB ಸ್ಟೋರೇಜ್ ಹೊಂದಿದೆ.

ಕ್ಯಾಮೆರಾ ಸೆಟಪ್

ಒಪ್ಪೋ ಫೈಂಡ್ X8 ಪ್ರೊ ಫೋನ್ ಹೈಪರ್‌ಟೋನ್ ಕ್ವಾಡ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ JN5 ಅಲ್ಟ್ರಾ ವೈಡ್ ಆಂಗಲ್ ಕ್ಯಾಮೆರಾ, 50 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಮತ್ತು 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಹೊಂದಿದೆ. ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಈ ಒಪ್ಪೋ ಮೊಬೈಲ್ 5,910mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್, 80W ವೈರ್ಡ್, 50W ವೈರ್‌ಲೆಸ್ ಮತ್ತು 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

Best Mobiles in India

English summary
OPPO Find X8 and Find X8 Pro Set to Launch on November 21 in India; know specs and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+