OPPO: ಬರ್ತಿದೆ ಜಬರ್ದಸ್ತ್ ಫೋನ್; 32MP ಸೆಲ್ಫಿ ಕ್ಯಾಮೆರಾ.. 256GB ಸ್ಟೋರೇಜ್.. ಇಷ್ಟೊಂದಾ ಬೆಲೆ?
ಒಪ್ಪೋ ಫೋನ್‌ಗಳಿಗೆ ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದೆ. ಕಂಪನಿಯು ತನ್ನ ಗ್ರಾಹಕರನ್ನು ಸೆಳೆಯಲು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಲೇ ಇರುತ್ತದೆ. ಇದೀಗ, ಹೊಸ ಒಪ್ಪೋ ಫೈಂಡ್ ಎಕ್ಸ್ 8 (OPPO Find X8) ಮೊಬೈಲ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಮುಂಬರುವ ಫೋನಿನ ಮೈಕ್ರೋಸೈಟ್ ಲೈವ್ ಆಗಿದೆ. ಈ ಮೂಲಕ ಫೋನಿನ ಪ್ರಮುಖ ವೈಶಿಷ್ಟ್ಯಗಳನ್ನು ಬಹಿರಂಗಪಡಿಸಲಾಗಿದೆ. ಬನ್ನಿ, ಒಪ್ಪೋ ಫೈಂಡ್ ಎಕ್ಸ್ 8 ಯಾವೆಲ್ಲಾ ವಿಶೇಷತೆಗಳನ್ನು ಹೊಂದಿರಲಿದೆ ಎನ್ನುವುದನ್ನು ತಿಳಿಯೋಣ.
ಕಂಪನಿಯು ಕಳೆದ ತಿಂಗಳು ಚೀನಾದಲ್ಲಿ ಒಪ್ಪೋ ಫೈಂಡ್ ಎಕ್ಸ್ 8 ಮತ್ತು ಒಪ್ಪೋ ಫೈಂಡ್ ಎಕ್ಸ್ 8 ಪ್ರೊ ಅನ್ನು ಲಾಂಚ್ ಮಾಡಲಾಗಿದೆ. ಎರಡೂ ಫೋನ್‌ಗಳು ಭಾರತೀಯ ಮಾರುಕಟ್ಟೆಗೆ ಬರುವುದು ಖಚಿತವಾಗಿದೆ. ಶೀಘ್ರದಲ್ಲೇ ಬಿಡುಗಡೆ ದಿನಾಂಕ ಘೋಷಿಸಲಾಗುತ್ತದೆ. ಗೀಕ್‌ಬೆಂಚ್‌ನಲ್ಲಿ ಒಪ್ಪೋ ಫೈಂಡ್ ಎಕ್ಸ್ 8 ಫೋನ್ ಮಾಡೆಲ್ ಸಂಖ್ಯೆ CPH2651 ನೊಂದಿಗೆ ಕಾಣಿಸಿಕೊಂಡಿದೆ. ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್ ಹೊಂದಿರಲಿದೆ. ಜೊತೆಗೆ, ಆಂಡ್ರಾಯ್ಡ್ 15 ಆಧಾರಿತ ColorOS 15ನಲ್ಲಿ ಕೆಲಸ ಮಾಡಲಿದೆ.

ಒಪ್ಪೋ ಫೈಂಡ್ X8 ಸರಣಿಯ ಬೆಲೆ
ಒಪ್ಪೋ ಫೈಂಡ್ X8 ಬೆಲೆ = 49,500 ರೂ.
ಒಪ್ಪೋ ಫೈಂಡ್ X8 ಪ್ರೊ ಬೆಲೆ = 64,900 ರೂ.
ಚೀನಾದಲ್ಲಿ ಒಪ್ಪೋ ಫೈಂಡ್ X8 ಮತ್ತು ಒಪ್ಪೋ ಫೈಂಡ್ X8 ಪ್ರೊ ಅನ್ನು 12GB RAM ಮತ್ತು 16GB RAM ನೊಂದಿಗೆ ಪರಿಚಯಿಸಲಾಗಿದೆ. ಫೋನಿನಲ್ಲಿ 256GB ಮತ್ತು 1TB ಸ್ಟೋರೇಜ್ ಲಭ್ಯವಿದೆ. ಒಪ್ಪೋ ಫೈಂಡ್ X8 ಆರಂಭಿಕ ಬೆಲೆ 49,500 ರೂ. ಆಗಿದೆ. ಒಪ್ಪೋ ಫೈಂಡ್ X8 ಪ್ರೊ ಅನ್ನು 64,900 ರೂ.ಗೆ ಪರಿಚಯಿಸಲಾಗಿದೆ. ಎರಡೂ ಫೋನ್‌ಗಳನ್ನು ಭಾರತದಲ್ಲಿ ಕಡಿಮೆ ಬೆಲೆಗೆ ಬಿಡುಗಡೆ ಮಾಡಲಾಗುತ್ತದೆ.
ಒಪ್ಪೋ ಫೈಂಡ್ X8 ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಒಪ್ಪೋ ಫೈಂಡ್ X8 ಫೋನ್ 6.59 ಇಂಚಿನ ಓಎಲ್‌ಇಡಿ ಫ್ಲಾಟ್ ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರ, 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು ಡಾಲ್ಬಿ ವಿಷನ್ ಬೆಂಬಲ ಪಡೆದಿದೆ. ಜೊತೆಗೆ, ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ತಂತ್ರಜ್ಞಾನ ಸಹ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಕಂಪನಿಯು ಒಪ್ಪೋ ಫೈಂಡ್ X8 ಮೊಬೈಲ್ ಅನ್ನು ಮೀಡಿಯಾ ಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್‌ನಲ್ಲಿ ಬಿಡುಗಡೆ ಮಾಡಿದೆ. ಇದು ಆಂಡ್ರಾಯ್ಡ್ 15 ಆಧಾರಿತ ColorOS 15 ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಫೋನ್ 16GB RAM ಮತ್ತು 1TB ಇಂಟರ್ನಲ್ ಸ್ಟೋರೇಜ್ ಹೊಂದಿದೆ.
ಕ್ಯಾಮೆರಾ ಸೆಟಪ್
ಒಪ್ಪೋ ಫೈಂಡ್ X8 ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ JN5 ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಫೋನ್ 32 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಕಂಪನಿಯು ಒಪ್ಪೋ ಫೈಂಡ್ X8 ಸ್ಮಾರ್ಟ್‌ಫೋನ್ ಅನ್ನು 5630mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಿದೆ. ಇದನ್ನು ಚಾರ್ಜ್ ಮಾಡಲು, 80W ವೈರ್ಡ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯ ಕಲ್ಪಿಸಲಾಗಿದೆ ಇದರೊಂದಿಗೆ 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಸಹ ಲಭ್ಯವಿದೆ.
ಇತರೆ ವೈಶಿಷ್ಟ್ಯಗಳು
ಈ ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ. ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP68/69 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸ್ಪೀಕರ್‌ಗಳು, ವೈ ಫೈ 7, ಬ್ಲೂಟೂತ್ 5.4, ಯುಎಸ್‌ಬಿ ಸಿ, ಎನ್‌ಎಫ್‌ಸಿ, ಕ್ರಿಸ್ಟಲ್ ಶೀಲ್ಡ್ ಗ್ಲಾಸ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications