ಭಾರತದಲ್ಲಿ ಪೊಕೊ F6 ಫೋನ್ ಲಾಂಚ್; ಜಬರ್ದಸ್ತ್ ಫೀಚರ್ಸ್, ಆಕರ್ಷಕ ಬೆಲೆ!
ಮೊಬೈಲ್ ಪ್ರಿಯರು ಬಹುನಿರೀಕ್ಷೆಯಿಂದ ಕಾಯುತ್ತಿದ್ದ ಪೊಕೊ ಸಂಸ್ಥೆಯು ಪೊಕೊ F6 ಫೋನ್ ಇಂದು (ಮೇ 23 ರಂದು) ಅಧಿಕೃತವಾಗಿ ದೇಶಿಯ ಮಾರುಕಟ್ಟೆಗೆ ಬಿಡುಗಡೆ ಆಗಿದೆ. ಈ ಫೋನ್ ಸ್ನ್ಯಾಪ್‌ಡ್ರಾಗನ್ 8s ಜೆನ್ 3 ಪ್ರೊಸೆಸರ್ ಪವರ್ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ.
ಹೌದು, ಪೊಕೊ ಸಂಸ್ಥೆಯು ತನ್ನ ಹೊಸ ಪೊಕೊ F6 ಫೋನ್ ಅನ್ನು ಇಂದು ಲಾಂಚ್ ಮಾಡಿದೆ. ಇದು ಮೂರು ವೇರಿಯಂಟ್ ಆಯ್ಕೆಯಲ್ಲಿ ಎಂಟ್ರಿ ಕೊಟ್ಟಿದ್ದು, ಅವುಗಳು 8GB + 256GB, 8GB + 256GB ಮತ್ತು 12GB + 512GB ಸ್ಟೋರೇಜ್ ವೇರಿಯಂಟ್ ಆಗಿವೆ. ಹಾಗೆಯೇ ಇದು 5000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಅನ್ನು ಕೂಡಾ ಪಡೆದುಕೊಂಡಿದೆ.

ಅಲ್ಲದೇ ಈ ನೂತನ ಫೋನ್ 20 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಪಡೆದಿದ್ದು, ಹಾಗೆಯೇ 120W ಫಾಸ್ಟ್ ಚಾರ್ಜಿಂಗ್ ಅಡಾಪ್ಟರ್ ವ್ಯವಸ್ಥೆ ಒಳಗೊಂಡಿದೆ. ಇನ್ನು ಈ ಫೋನ್ ಟೈಟಾನಿಮ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಹಾಗಾದರೇ ಪೊಕೊ F6 ಮೊಬೈಲ್ ಇತರೆ ನಿರೀಕ್ಷಿತ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಪೊಕೊ F6 ಫೀಚರ್ಸ್
ಪೊಕೊ F6 ಮೊಬೈಲ್ 6.67 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಡಿಸ್‌ಪ್ಲೇಯು 2712 x 1220 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ಡಿಸ್‌ಪ್ಲೇಯು 2400 nits ಬ್ರೈಟ್ನೆಸ್ ಸಪೋರ್ಟ್ ಹೊಂದಿದ್ದು, ಇದರ ಜೊತೆಗೆ 120Hz ರಿಫ್ರೆಶ್ ರೇಟ್ ಬೆಂಬಲ ಸಹ ಇದೆ. ಅಲ್ಲದೇ HRD+, ಡಾಲ್ಬಿ ವಿಷನ್ ಆಯ್ಕೆಗಳು ಇವೆ.
ಪೊಕೊ F6 ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8s ಜನ್ 3 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 OS ಸಪೋರ್ಟ್ ಸಹ ಇದೆ. ಇನ್ನು ಈ ಫೋನ್ ಮೂರು ವೇರಿಯಂಟ್ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 8GB + 256GB, 8GB + 256GB ಮತ್ತು 12GB + 512GB ಸ್ಟೋರೇಜ್ ವೇರಿಯಂಟ್ ಸಾಮರ್ಥ್ಯದ ಆಯ್ಕೆಯಲ್ಲಿ ಇವೆ.
ಪೊಕೊ F6 ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಕ್ಯಾಮೆರಾ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸರ್ ಅನ್ನು ಪಡೆದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 20 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ನೀಡಲಾಗಿದೆ.
ಪೊಕೊ F6 ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರೊಂದಿಗೆ 90W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಹಾಗೆಯೇ 120W ಫಾಸ್ಟ್ ಚಾರ್ಜಿಂಗ್ ಅಡಾಪ್ಟರ್ ವ್ಯವಸ್ಥೆ ಇದ್ದು, 35 ನಿಮಿಷಗಳಲ್ಲಿ ಬ್ಯಾಟರಿ ಪೂರ್ಣ 100% ಚಾರ್ಜ್ ಮಾಡಲಿದೆ ಎಂದು ಹೇಳಲಾಗಿದೆ.
ಬೆಲೆ ಮಾಹಿತಿ
8GB + 256GB ವೇರಿಯಂಟ್ ಬೆಲೆ 29,999ರೂ
8GB + 256GB ವೇರಿಯಂಟ್ ಬೆಲೆ 31,999ರೂ
12GB + 512GB ವೇರಿಯಂಟ್ ಬೆಲೆ 33,999ರೂ
ಫಸ್ಟ್ ಸೇಲ್ ಆಫರ್ ಬೆಲೆ
8GB + 256GB ವೇರಿಯಂಟ್ ಬೆಲೆ 25,999ರೂ
8GB + 256GB ವೇರಿಯಂಟ್ ಬೆಲೆ 27,999ರೂ
12GB + 512GB ವೇರಿಯಂಟ್ ಬೆಲೆ 29,999ರೂ
ಇನ್ನು ಫೋನ್ ಎರಡು ಕಲರ್ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ ಟೈಟಾನಿಮ್ ಹಾಗೂ ಬ್ಲ್ಯಾಕ್ ಕಲರ್ ಆಗಿದೆ. ಈ ಫೋನಿನ ಫಸ್ಟ್ ಸೇಲ್ ಇದೇ ಮೇ 29 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ಪ್ರಾರಂಭವಾಗಲಿದೆ.


Click it and Unblock the Notifications








