Home
ಸುದ್ದಿಜಾಲ

12GB RAM ಇರುವ ಈ ಫೋನ್‌ ಈಗ ಸಸ್ತಾ ಬೆಲೆಗೆ ಲಭ್ಯ; ಯಾವ ಫೋನ್‌ ಗೊತ್ತೆ?

ದೇಶದ ಮೊಬೈಲ್‌ ಮಾರುಕಟ್ಟೆಯಲ್ಲಿ ಪೊಕೊ ಸಂಸ್ಥೆಯು ಕೆಲವು ಜನಪ್ರಿಯ ಫೋನ್‌ಗಳು ಈಗಾಗಲೇ ಗ್ರಾಹಕರಿಂದ ಸೈ ಎನಿಸಿಕೊಂಡಿವೆ. ಆ ಪೈಕಿ ಸಂಸ್ಥೆಯ X ಸರಣಿಯ ಫೋನ್‌ಗಳು ಮೀಡ್‌ರೇಂಜ್‌ ವಿಭಾಗದಲ್ಲಿ ಮೊಬೈಲ್‌ ಪ್ರಿಯರ ಗಮನ ಸೆಳೆದಿದೆ. ಸಂಸ್ಥೆಯು ಇದೀಗ ಪೊಕೊ X6 ನಿಯೋ (POCO X6 Neo 5G) ಸ್ಮಾರ್ಟ್‌ಫೋನ್‌ ಸಖತ್ ಫೀಚರ್ಸ್‌ ಜೊತೆಗೆ 108 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸೌಲಭ್ಯದ ಕ್ಯಾಮೆರಾ ಅನ್ನು ಒಳಗೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಪೊಕೊ ಸಂಸ್ಥೆಯ ಪೊಕೊ X6 ನಿಯೋ (POCO X6 Neo 5G) ಮೊಬೈಲ್‌ ಬಿಗ್ ಡಿಸ್ಕೌಂಟ್‌ನಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನಿನ 12 GB RAM + 256 GB ಸ್ಟೋರೇಜ್‌ನ ವೇರಿಯಂಟ್‌ ಶೇ. 29% ರಷ್ಟು ಡಿಸ್ಕೌಂಟ್‌ ಹೊಂದಿದೆ. ಇದನ್ನು ಗ್ರಾಹಕರು 15,499ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿ ಮಾಡಬಹುದು. ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ (6 nm) ಪ್ರೊಸೆಸರ್‌ ಸೌಲಭ್ಯ ಪಡೆದಿದೆ.

12GB RAM ಇರುವ ಈ ಫೋನ್‌ ಈಗ ಸಸ್ತಾ ಬೆಲೆಗೆ ಲಭ್ಯ; ಯಾವ ಫೋನ್‌ ಗೊತ್ತೆ?

ಇನ್ನು ಇದು 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಹಾಗೆಯೇ 33W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಆಸ್ಟ್ರಲ್ ಬ್ಲ್ಯಾಕ್, ಹರೈಸನ್ ಬ್ಲೂ ಮತ್ತು ಆರೆಂಜ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಹಾಗಾದರೇ ಪೊಕೊ X6 ನಿಯೋ (POCO X6 Neo 5G) ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್‌ ಹಾಗೂ ರಚನೆ

ಪೊಕೊ X6 ನಿಯೋ ಮೊಬೈಲ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಪಡೆದಿದ್ದು, ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 120Hz, 1000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಲೆವೆಲ್‌ ಅನ್ನು ಸಪೋರ್ಟ್‌ ಮಾಡುತ್ತದೆ. ಜೊತೆಗೆ ಇದರ ಡಿಸ್‌ಪ್ಲೇಯು 88.9% ಸ್ಕ್ರೀನ್-ಟು-ಬಾಡಿ ಅನುಪಾತದಲ್ಲಿ ಇದ್ದು, 20:9 ರಚನೆಯ ಅನುಪಾತವನ್ನು ಪಡೆದಿದೆ.

ಪ್ರೊಸೆಸರ್‌ ಸಾಮರ್ಥ್ಯ ಏನು

ಪೊಕೊ X6 ನಿಯೋ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ (6 nm) ಪ್ರೊಸೆಸರ್‌ ಪವರ್‌ ಪಡೆದಿದ್ದು, ಪೂರಕವಾಗಿ ಆಂಡ್ರಾಯ್ಡ್ 14 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಅಲ್ಲದೇ ಇದು 8GB + 128GB ಸ್ಟೋರೇಜ್ ಹಾಗೂ 12GB + 256GB ಸ್ಟೋರೇಜ್‌ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಒಳಗೊಂಡಿದೆ.

ಕ್ಯಾಮೆರಾ ಸೆಟ್‌ಅಪ್‌ ಹೇಗಿದೆ

ಪೊಕೊ X6 ನಿಯೋ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡಿದೆ. ಇದರ ಮೊದಲ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರ ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಇದರೊಂದಿಗೆ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.

ಬ್ಯಾಟರಿ ಬಲ ಹಾಗೂ ಇತರೆ

ಪೊಕೊ X6 ನಿಯೋ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಒದಗಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಪಡೆದಿದೆ. ಇನ್ನು ಈ ಫೋನ್‌ 8GB + 128GB ಸ್ಟೋರೇಜ್ ವೇರಿಯಂಟ್‌ ಹಾಗೂ 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯಲ್ಲಿ ಸಿಗಲಿದೆ. ಇನ್ನು ಈ ಮೊಬೈಲ್‌ ಆಸ್ಟ್ರಲ್ ಬ್ಲ್ಯಾಕ್, ಹರೈಸನ್ ಬ್ಲೂ ಮತ್ತು ಆರೆಂಜ್‌ ಕಲರ್‌ ಆಯ್ಕೆ ಪಡೆದಿದೆ.

Best Mobiles in India

English summary
POCO X6 Neo 5G now available at an Exclusive Discount on Flipkart in India. Know more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+