ಜನಪ್ರಿಯ ಅಮೆಜಾನ್ ಇ ಕಾಮರ್ಸ್ ತಾಣವು ಮೊಬೈಲ್ ಗಳಿಗೆ ಆಕರ್ಷಕ ಕೊಡುಗೆ ನೀಡುವ ಮೂಲಕ ಗ್ರಾಹಕರನ್ನು ಸೆಳೆದಿದೆ. ಅಮೆಜಾನ್ ಸಂಸ್ಥೆಯು ಎಲ್ಲ ಮಾದರಿಯ ಫೋನ್ ಗಳಿಗೆ ಬೊಂಬಾಟ್ ಆಫರ್ ಕಾಣಬಹುದಾಗಿದೆ. ಇದೀಗ ರೆಡ್ಮಿ 12 5G ಕೂಡಾ ಸಖತ್ ಬೆಲೆ ಇಳಿಕೆ ದರದಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಭಾರೀ ಸಂತಸ ಎನಿಸಿದೆ. ಹೌದು, ಅಮೆಜಾನ್ ಇ ಕಾಮರ್ಸ್ ನಲ್ಲಿ ರೆಡ್ಮಿ 12 5G ಮೊಬೈಲ್ ಶೇ. 25% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನ್ 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಸದ್ಯ 13,499ರೂ. ಗಳ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಬ್ಯಾಂಕ್ ಕೊಡುಗೆ ಸೇರಿದಂತೆ ಇತರೆ ಕೆಲವು ರಿಯಾಯಿತಿಗಳು ಸಹ ಲಭ್ಯವಾಗಲಿವೆ. ಹಾಗೆಯೇ ಈ ಸ್ಮಾರ್ಟ್ ಫೋನ್ ಸ್ನಾಪ್ ಡ್ರಾಗನ್ 4 ಜನ್ 2 ಚಿಪ್ ಸೆಟ್ ಪ್ರೊಸೆಸರ್ ಪಡೆದಿದೆ. ಅಲ್ಲದೇ ಈ ಫೋನ್ ಮೂರು ಭಿನ್ನ ವೇರಿಯಂಟ್ ಆಯ್ಕೆಗಳನ್ನು ಕೂಡಾ ಒಳಗೊಂಡಿದ್ದು, ಇದು 5,000 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಸಹ ಹೊಂದಿದೆ. ಇನ್ನುಳಿದಂತೆ ರೆಡ್ಮಿ 12 5G ಮೊಬೈಲ್ ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ. ರೆಡ್ಮಿ 12 5G ಫೋನ್ - ಫೀಚರ್ಸ್ ರೆಡ್ಮಿ 12 5G ಫೋನ್ 6.79 ಇಂಚಿನ FHD ಡಿಸ್ ಪ್ಲೇ ಪಡೆದಿದ್ದು, 90 Hz ನ ರಿಫ್ರೆಶ್ ರೇಟ್ ಸೌಲಭ್ಯವನ್ನು ಸಹ ಪಡೆದಿದೆ. ಇದು 1080 X 2400 ಪಿಕ್ಸೆಲ್ ನ ಸ್ಕ್ರೀನ್ ರೆಸಲ್ಯೂಶನ್ ಹಾಗೂ 240Hz ಟಚ್ ಮಾದರಿ ರೇಟ್ ಆಯ್ಕೆ ಯಾವುದೇ ವಿಡಿಯೋ ವೀಕ್ಷಣೆ ಹಾಗೂ ಗೇಮಿಂಗ್ ಸಂದರ್ಭದಲ್ಲಿ ಬಳಕೆದಾರರಿಗೆ ಉತ್ತಮ ಅನುಭವ ನೀಡಲಿದೆ. ರೆಡ್ಮಿ 12 5G ಫೋನ್ ಸ್ನಾಪ್ ಡ್ರಾಗನ್ 4 ಜನ್ 2 ಚಿಪ್ ಸೆಟ್ ಪ್ರೊಸೆಸರ್ ಪವರ್ ನಲ್ಲಿ ಕಾರ್ಯ ನಿರ್ವಹಿಸಲಿದೆ. ಅದಕ್ಕೆ ಅನುಗುಣವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಸಹ ಪಡೆದಿದೆ. ಹಾಗೆಯೇ ಈ ಫೋನ್ ಮೂರು ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದ್ದು, ಅವು ಕ್ರಮವಾಗಿ 4GB + 128GB, 6GB + 128GB ಮತ್ತು 8GB + 256GB ಆಗಿವೆ. ಅಲ್ಲದೇ 8GB RAM ನೊಂದಿಗೆ 8 GB ವರ್ಚುವಲ್ RAM ಆಯ್ಕೆ ಸಹ ಇದೆ. ರೆಡ್ಮಿ 12 5G ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಆಯ್ಕೆ ಪಡೆದಿದೆ. ಇದರ ಜೊತೆಗೆ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಈ ಮೊಬೈಲ್ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ. ರೆಡ್ಮಿ 12 5G ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಆಯ್ಕೆ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಅನ್ನು ಹೊಂದಿದೆ. ಇದರ ಜೊತೆಗೆ ಈ ಫೋನ್ ಆಂಡ್ರಾಯ್ಡ್ 13 ಅನ್ನು ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, IP53 ರೇಟಿಂಗ್ ಪಡೆದುಕೊಂಡಿದ್ದು, ಧೂಳು ನಿರೋಧಕವಾಗಿದೆ. ರೆಡ್ಮಿಯ ಈ ಮೊಬೈಲ್ ಮೂರು ವೇರಿಯಂಟ್ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 4GB + 128GB ಸ್ಟೋರೇಜ್ , 6GB + 128GB ಸ್ಟೋರೇಜ್ ಮತ್ತು 8GB + 256GB ಸ್ಟೋರೇಜ್ ಆಗಿವೆ. ಇನ್ನು ಗ್ರಾಹಕರು ಈ ಫೋನ್ ಅನ್ನು ಸಿಲ್ವರ್, ಬ್ಲ್ಯಾಕ್ ಹಾಗೂ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿ ಮಾಡಬಹುದು.