ಇನ್ನು ಕೆಲವೇ ದಿನಗಳಲ್ಲಿ ಲಾಂಚ್ ಆಗಲಿದೆ ಈ ಅಗ್ಗದ 5G ಸ್ಮಾರ್ಟ್‌ಫೋನ್!
ದೇಶಿಯ ಮೊಬೈಲ್ ಮಾರುಕಟ್ಟೆಯಲ್ಲಿ ಶಿಯೋಮಿ (Xiaomi) ಭಿನ್ನ ಮೊಬೈಲ್‌ಗಳ ಮೂಲಕ ತನ್ನದೇ ಸ್ಥಾನ ಹೊಂದಿದೆ. ಸಂಸ್ಥೆಯು ಭಾರತೀಯ ಮೊಬೈಲ್ ಕಾಂಗ್ರೆಸ್‌ನಲ್ಲಿ ಅಗ್ಗದ ಬೆಲೆಯಲ್ಲಿ ನೂತನ ಮೊಬೈಲ್ ಬಿಡುಗಡೆ ಮಾಡುವುದಾಗಿ ಪ್ರಕಟಿಸಿದ್ದು, ಅದುವೇ ರೆಡ್ಮಿ A4 5G (Redmi A4 5G) ಮೊಬೈಲ್. ಈ ಫೋನ್ ಸ್ನ್ಯಾಪ್‌ಡ್ರಾಗನ್ 4s (Snapdragon 4s) ಪ್ರೊಸೆಸರ್ ಸೌಲಭ್ಯ ಪಡೆದಿರುವುದಾಗಿ ಖಚಿತಪಡಿಸಿದೆ.
ಹೌದು, ಶಿಯೋಮಿ ಮೊಬೈಲ್ ಸಂಸ್ಥೆಯು ರೆಡ್ಮಿ A4 5G (Redmi A4 5G) ಸ್ಮಾರ್ಟ್‌ಫೋನ್ ಅನ್ನು ಘೋಷಿಸಿದ್ದು, ಇದೇ November 20 ರಂದು ಮಾರುಕಟ್ಟೆಗೆ ಬರಲಿದೆ. ಹೊಸದಾಗಿ ಮಾರುಕಟ್ಟೆಗೆ ಬರಲಿರುವ ಈ ಫೋನ್ ಸುಮಾರು 10000ರೂ. ಗಳ ಒಳಗಿನ ಬೆಲೆಯಲ್ಲಿ ಖರೀದಿಗೆ ಲಭ್ಯ ಆಗಲಿದೆ ಎಂದು ಅಂದಾಜಿಸಲಾಗಿದ್ದು, ಈ ಮೂಲಕ ಶಿಯೋಮಿ ಸಂಸ್ಥೆಯು 5G ಮೊಬೈಲ್ ಮಾರುಕಟ್ಟೆಯಲ್ಲಿ ತನ್ನ ಪ್ರಾಬಲ್ಯವನ್ನು ಇನ್ನಷ್ಟು ವಿಸ್ತರಿಸುವ ಉದ್ದೇಶ ಮಾಡಿದೆ.

ರೆಡ್ಮಿ A4 5G (Redmi A4 5G) ಮೊಬೈಲ್ 50 ಮೆಗಾ ಪಿಕ್ಸಲ್ ಸಾಮರ್ಥ್ಯದ ಪ್ರಾಥಮಿಕ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿರಲಿದೆ. ಇದರೊಂದಿಗೆ 8 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಅನ್ನು ಪಡೆದಿರಲಿದೆ. ಹಾಗಾದರೇ ಸದ್ಯದಲ್ಲೇ ಲಗ್ಗೆ ಕೊಡಲಿರುವ ರೆಡ್ಮಿ A4 5G ಫೋನಿನ ನಿರೀಕ್ಷಿತ ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ನೋಡೋಣ ಮುಂದೆ ಓದಿರಿ.
ರೆಡ್ಮಿ A4 5G ನಿರೀಕ್ಷಿತ ಫೀಚರ್ಸ್
ರೆಡ್ಮಿ A4 5G ಮೊಬೈಲ್ 6.52 ಇಂಚಿನ HD+ ಡಿಸ್‌ಪ್ಲೇ ಜೊತೆಗೆ ಉತ್ತಮ ಪಿಕ್ಸಲ್ ರೆಸಲ್ಯೂಶನ್ ಪಡೆದಿರಲಿದೆ. ಹಾಗೆಯೇ ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಸೌಲಭ್ಯವನ್ನು ಸಪೋರ್ಟ್ ಮಾಡಲಿದೆ. ಈ ಫೋನ್ ಗೇಮಿಂಗ್ ಮತ್ತು ವೀಡಿಯೊ ಪ್ಲೇಬ್ಯಾಕ್ಗಾಗಿ ಸುಗಮ ದೃಶ್ಯಗಳನ್ನು ಒದಗಿಸುತ್ತದೆ.
ರೆಡ್ಮಿ A4 5G ಮೊಬೈಲ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4s Gen 2 (Snapdragon 4s Gen 2) ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಇರಲಿದೆ. ಹಾಗೆಯೇ ಇದು 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಒಳಗೊಂಡಿರಲಿದೆ ಎಂದು ವರದಿಯಾಗಿದೆ.
ರೆಡ್ಮಿ A4 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿರಲಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿ ಇರಲಿದ್ದು, ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಪಡೆದಿರಲಿದೆ. ಇದರ ಜೊತೆಗೆ ಮುಂಭಾಗದಲ್ಲಿ ಸೆಲ್ಫಿಗಾಗಿ ಹಾಗೂ ವಿಡಿಯೋ ಕರೆಗಾಗಿ 8 8 ಮೆಗಾ ಪಿಕ್ಸಲ್ ಸೆನ್ಸಾರ್‌ನ ಕ್ಯಾಮೆರಾ ಒದಗಿಸಲಾಗುತ್ತದೆ.
ರೆಡ್ಮಿ A4 5G ಮೊಬೈಲ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿರಲಿದ್ದು, ಇದಕ್ಕೆ ಅನುಗುಣವಾಗಿ 18W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಇನ್ನುಳಿದಂತೆ ಈ ಫೋನ್ ಬ್ಲೂಟೂತ್, ವೈ ಫೈ, NAVIC, 3.5mm ಆಡಿಯೋ ಜ್ಯಾಕ್ ಸೌಲಭ್ಯ ಇದೆ.
ಇದರೊಂದಿಗೆ ಸಂಸ್ಥೆಯು ರೆಡ್ಮಿ A3 ಮೊಬೈಲ್ 6.71 ಇಂಚಿನ ಹೆಚ್‌ಡಿ ಪ್ಲಸ್ ಐಪಿಎಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1650 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಮೀಡಿಯಾ ಟೆಕ್ ಹಿಲಿಯೊ G36 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 13 (ಗೋ ಆವೃತ್ತಿ) ಸಪೋರ್ಟ್ ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಜೊತೆಗೆ ಇದು 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುವುದು.


Click it and Unblock the Notifications