ವಿವೋ ಕಂಪೆನಿಯ ವಿವೋ S6 5G ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!


ಟೆಕ್‌ ಮಾರುಕಟ್ಟೆಯಲ್ಲಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆನೂ ಭರವಿಲ್ಲ. ಈಗಾಗಲೇ ಹಲವು ಕಂಪೆನಿಗಳು ತಮ್ಮ ಸ್ಮಾರ್ಟ್‌ಫೋನ್‌ಗಳ ಮೂಲಕ ಗ್ರಾಹಕರನ್ನ ಸೆಳೆದಿವೆ. ಅಲ್ಲದೆ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ತಮ್ಮದೇ ಆದ ಜನಪ್ರಿಯತೆಯನ್ನ ಗಳಿಸಿಕೊಂಡಿವೆ. ಇವುಗಳಲ್ಲಿ ವಿವೊ ಕಂಪೆನಿ ಕೂಡ ಒಂದಾಗಿದ್ದು, ತನ್ನ ವಿಭಿನ್ನ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿದೆ. ಇನ್ನು ಪ್ರತಿ ಭಾರಿಯು ಹೊಸತನದ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುವ ವಿವೋ ಈ ಬಾರಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ.

Advertisement

ಹೌದು, ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ತನ್ನ ಹೊಸ ವಿವೊ S6 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡುವುದಕ್ಕೆ ವೇದಿಕೆ ಸಿದ್ದ ಪಡಸಿಕೊಳ್ತಿದೆ. ಇದರ ಸೂಚನೆಯಾಗಿ ಇದೀಗ ತನ್ನ ಹೊಸ ಸ್ಮಾರ್ಟ್‌ಫೋನ್‌ ಕುರಿತ ಪ್ರೋಮೋ ವೀಡಿಯೊವನ್ನು ಬಿಡುಗಡೆ ಮಾಡಿದೆ. ಈ ವಿಡಿಯೋ ಪ್ರಕಾರ ವಿವೋ ಬಿಡುಗಡೆ ಮಾಡಲಿರುವ ಹೊಸ ಸ್ಮಾರ್ಟ್‌ಫೋನ್‌ ನೋಚ್ಡ್ ಡಿಸ್‌ಪ್ಲೇ ಯನ್ನ ಹೊಂದಿರಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಸಾಕಷ್ಟು ಹಗುರವಾಗಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನ ವಿನ್ಯಾಸ ಹಾಗೂ ವಿಶೇಷತೆಯ ಬಗ್ಗೆ ಈ ಲೇಖನದಲ್ಲಿ ಮಾಹಿತಿಯನ್ನ ತಿಳಿಸಿಕೊಡ್ತಿವಿ ನೋಡಿ.

Advertisement

ವಿವೋ S6 5G ಸ್ಮಾರ್ಟ್‌ಫೋನ್‌ನ ಪ್ರೋಮೋ ವಿಡಿಯೋದಲ್ಲಿ ಈ ಸ್ಮಾರ್ಟ್‌ಫೋನ್‌ನ ಸಣ್ಣ ಝಲಕ್‌ನಷ್ಟೆ ನೀಡಲಾಗಿದೆ. ಇದರ ಪ್ರಕಾರ ಈ ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್‌ ರೆಸಲ್ಯೂಶನ್‌ ಹೊಂದಿರುವ 6.44-ಇಂಚಿನ ಡಿಸ್‌ಪ್ಲೇ ಯನ್ನು ನೀಡಲಾಗಿದೆ. ಈ ಡಿಸ್‌ಪ್ಲೇಯು ಫುಲ್‌ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಇದಲ್ಲದೆ ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ವಿಡಿಯೋ ಕರೆಗಳು ಹಾಗೂ ವಿಡಿಯೋ ವೀಕ್ಷಣೆಗೆ ಉತ್ತಮವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ ಎಂದು ನಿರೀಕ್ಷಿಸಲಾಗಿದೆ.

ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಎಕ್ಸಿನೋಸ್‌ 980 ಚಿಪ್‌ಸೆಟ್‌ ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 8GB RAM ಮತ್ತು 256GB ಇಂಟರ್ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದರ ಬಗ್ಗೆ ಯಾವುದೇ ಮಾಹಿತಿಯನ್ನ ಬಹಿರಂಗಪಡಿಸಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್‌ನ ಮುಂಭಾಗ, ಹಿಂಭಾಗ ಮತ್ತು ಬದಿಗಳನ್ನು ಮಾತ್ರ ತೋರಿಸಲಾಗಿದೆ. ಆದರೆ ಟಾಪ್‌ ಹಾಗೂ ಬಾಟಮ್‌ ಹೇಗಿರಲಿದೆ ಅನ್ನುವುದರ ಸೂಚನೆ ಇನ್ನು ಸಿಕ್ಕಿಲ್ಲ.

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ವೃತ್ತಾಕಾರದ ಮಾಡ್ಯೂಲ್‌ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 48 ಮೆಗಾಪಿಕ್ಸೆಲ್ ಶೂಟರ್ ಆಗಿದ್ದು, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಶೂಟರ್, ಹಾಗೂ ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾಗಳನ್ನು ಹೊಂದಿವೆ. ಜೊತೆಗೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ನಿಡಲಾಗಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬ್ಯಾಟರಿ ಪ್ಯಾಕ್‌ಅಪ್‌ ಬಗ್ಗೆ ಇನ್ನು ಯಾವುದೇ ಮಾಹಿತಿಯನ್ನ ಕಂಪೆನಿ ಬಹಿರಂಗ ಪಡಿಸಿಲ್ಲ. ಸದ್ಯ ಈ ಸ್ಮಾರ್ಟ್‌ಫೋನ್‌ ನೀಲಿ ಗ್ರೇಡಿಯಂಟ್ ಮತ್ತು ಗುಲಾಬಿ ಗ್ರೇಡಿಯಂಟ್ ಆಯ್ಕೆಯಲ್ಲಿ ಲಬ್ಯವಾಗಲಿದ್ದು, ಇದೇ ಮಾರ್ಚ್‌ 31 ರಂದು ಬಿಡುಗಡೆ ಆಗಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English Summary

Vivo S6 5G Video Teaser Confirms Waterdrop-Style Notch, Colour Options Ahead of March 31 Launch.to know more visit to kannada.gizbot.comvi