ವಿವೋ X50 ಮತ್ತು ವಿವೊ X50 ಪ್ರೊ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!


ಸ್ಮಾರ್ಟ್‌ಫೋನ್‌ ವಲಯದಲ್ಲಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆನೂ ಕಡಿಮೆ ಇಲ್ಲ. ಪ್ರತಿನಿತ್ಯ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನಿಡುತ್ತಲೇ ಇರುತ್ತವೆ. ಆದರೂ ಗ್ರಾಹಕರು ಮಾತ್ರ ತಮ್ಮ ನೆಚ್ಚಿನ ಬ್ರಾಂಡ್‌ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳನ್ನ ಮಾತ್ರ ಆಯ್ಕೆ ಮಾಡಿಕೊಳ್ಳುತ್ತಾರೆ. ಇವುಗಳಲ್ಲಿ ವಿವೋ ಕಂಪೆನಿ ಕೂಡ ಒಂದಾಗಿದ್ದು, ಹೊಸ ಫೀಚರ್ಸ್‌ಗಳನ್ನ ಪರಿಚಯಿಸುವಲ್ಲಿ ಸದಾ ಮುಂದೆ ಇರುವ ಬ್ರಾಂಡ್‌ ಆಗಿ ಗುರುತಿಸಿಕೊಂಡಿದೆ. ಸದ್ಯ ಇದೀಗ ತನ್ನ ಮತ್ತೊಂದು ಜನಪ್ರಿಯ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

Advertisement

ಹೌದು, ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ಕಂಪೆನಿ ತನ್ನ ವಿವೋ X50 ಮತ್ತು ವಿವೊ X50 ಪ್ರೊ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಲು ವೇದಿಕೆ ಸಿದ್ದ ಪಡಿಸಿಕೊಳ್ತಿದೆ. ಸದ್ಯ ಬಿಡುಗಡೆಗೆ ಸಿದ್ದವಿರುವ ಈ ಸ್ಮಾರ್ಟ್‌ಫೋನ್‌ ಸರಣಿಯ ವಿಶೇಷತೆ ಏನು ಹಾಗೂ ವಿನ್ಯಾಸ ಹೇಗಿದೆ ಅನ್ನೊದು ಇ-ಕಾಮರ್ಸ್ ಪಟ್ಟಿಯಲ್ಲಿ ಸೋರಿಕೆಯಾಗಿವೆ. ಸದ್ಯ ಆನ್‌ಲೈನ್‌ನಲ್ಲಿ ಲೀಕ್‌ ಆಗಿರುವ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ಫೀಚರ್ಸ್‌ ಹೊಂದಿರಲಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೊಣ ಬನ್ನಿರಿ.

Advertisement
ವಿವೋ X50 ಡಿಸ್‌ಪ್ಲೇ

ವಿವೋ X50 ಸ್ಮಾರ್ಟ್‌ಫೋನ್‌ 1080x2376 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.56 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಇದು ಸೂಪರ್ ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಇದಲ್ಲದೆ ಪಂಚ್‌ ಹೋಲ್‌ ಡಿಸ್‌ಪ್ಲೇ ಮಾದರಿಯನ್ನ ಹೊಂದಿರಲಿದೆ ಎನ್ನಲಾಗ್ತಿದೆ.

ವಿವೋ X50 ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್ 765G ಪ್ರೊಸೆಸರ್ ಹೊಂದಿದೆ ಎಂದು ಹೇಳಲಾಗ್ತಿದೆ. ಅಲ್ಲದೆ ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗ್ತಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 8GB RAM + 128GB ಮತ್ತು 8GB RAM + 256GB ಆಂತರಿಕ ಸಂಗ್ರಹ ಸಾಮರ್ಥ್ಯ ಹೊಂದಿರುವ ಎರಡು ವೇರಿಯೆಂಟ್‌ ಆಯ್ಕೆಯನ್ನ ಹೊಂದಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ವಿವೋ X50 ಕ್ಯಾಮೆರಾ ವಿನ್ಯಾಸ

ವಿವೋ X50 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 598 ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ S5K3L6 ಸೆನ್ಸಾರ್‌ ಕ್ಯಾಮೆರಾ, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಓಮ್ನಿ ವಿಷನ್ 0V08A10 ಟೆಲಿಫೋಟೋ ಕ್ಯಾಮೆರಾ ಲೆನ್ಸ್‌ ಮತ್ತು ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಹೈನಿಕ್ಸ್ ಹೈ 846 ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ ಎಂದು ನಿರೀಕ್ಷಿಸಲಾಗಿದೆ. ಅಲ್ಲದೆ 32 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ GD1 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನ ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,315mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲುಟೂತ್‌, ಹಾಟ್‌ಸ್ಪಾಟ್‌, ವೈಫೈ, 3.5mm ಆಡಿಯೊ ಜ್ಯಾಕ್‌ಗೆ ಬೆಂಬಲ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ AK4377 A ಹೈ-ಫೈ ಆಡಿಯೊ ಚಿಪ್ ಅನ್ನು ಸಹ ಒಳಗೊಂಡಿದೆ.

ವಿವೋ X50 ಪ್ರೊ

ವಿವೋ X50 ಪ್ರೊ, ಸ್ಮಾರ್ಟ್‌ಫೋನ್‌ ಬಾಗಿದ ಮಾದರಿಯ ಡಿಸ್‌ಪ್ಲೇಯನ್ನ ಹೊಂದಿರಲಿದೆ ಎನ್ನಲಾಗ್ತಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ ಆಕ್ಟಾ-ಕೋರ್ ಪ್ರೊಸೆಸರ್‌ 1.8GHz ಅನ್ನು ಹೊಂದಿರಲಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕೂಡ ಕ್ವಾಡ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದ್ದು, ಸ್ಥಿರವಾದ ವಿಡಿಯೋ ಶೂಟಿಂಗ್‌ಗಾಗಿ ರಿಯರ್‌ ಸೈಡ್‌ನಲ್ಲಿ ಹೆಚ್ಚುವರಿ ಗಿಂಬಾಲ್ ಕ್ಯಾಮೆರಾ ಅನ್ನು ನೀಡಲಾಗಿದೆ ಎನ್ನಲಾಗಿದೆ. ಇದಲ್ಲದೆ ವಿವೋ X50 ಪ್ರೊ ಬ್ಲ್ಯಾಕ್ ಮಿರರ್ ಮತ್ತು ಲಿಕ್ವಿಡ್ ಆಕ್ಸಿಜನ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳು ಜೂನ್‌ 1 ರಂದು ಚೀನಾದಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

Best Mobiles in India

English Summary

Vivo X50 and Vivo X50 Pro have been spotted on the retail site ahead of official launch.to know more visit to kannada.gizbot.com