ಬಹುನಿರೀಕ್ಷಿತ ವಾಟ್ಸ್‌ಆಪ್ ಪೇಮೆಂಟ್ ಸೇವೆಗೆ ಮತ್ತೊಂದು ಪ್ರಮುಖ ಅಪ್‌ಡೆಟ್ ಅನ್ನು ವಾಟ್ಸ್‌ಆಪ್ ಸಂಸ್ಥೆ ಅಳವಡಿಸಿಕೊಂಡಿದೆ. ವಾಟ್ಸ್‌ಆಪ್ ಗ್ರಾಹಕರು ಸುಲಭವಾಗಿ ಹಣ ವರ್ಗಾಯಿಸಲು ಒಂದು QR ಕೋಡ್ ಸ್ಕ್ಯಾನ್ ಅವಕಾಶವನ್ನು ಇತ್ತೀಚಿನ ಆಂಡ್ರಾಯ್ಡ್ ಬೀಟಾ 2.18.93 ಆವೃತ್ತಿಯಲ್ಲಿ ವಾಟ್ಸ್ಆಪ್ ಸಂಸ್ಥೆ ನೀಡಿದೆ.!
ಅಧಿಕೃತವಾಗಿ ವಾಟ್ಸ್‌ಆಪ್ ಪೇಮೆಂಟ್ ಸೇವೆಯು ಚಾಲನೆಯಾಗಲು ಇನ್ನು ಸಮಯ ಬಾಕಿ ಇರುವಾಗಲೇ QR ಕೋಡ್ ಸ್ಕ್ಯಾನಿಂಗ್ ಆಯ್ಕೆಯನ್ನು ವಾಟ್ಸ್‌ಆಪ್ ತಂದಿದೆ. ಹಾಗಾಗಿ, ಯುಪಿಐ ಪಿನ್ ಪ್ರವೇಶಿಸುವ ಮೂಲಕ ಹಣವನ್ನು ಸೆಂಡ್ ಮಾಡುವುದರ ಜೊತೆಗೆ QR ಕೋಡ್ ಸ್ಕ್ಯಾನಿಂಗ್ ಆಯ್ಕೆ ಕೂಡ ಗ್ರಾಹಕರಿಗೆ ದೊರೆಯಲಿದೆ.!!

ಹಾಗಾಗಿ, ವಾಟ್ಸ್‌ಆಪ್ ಪೇಮೆಂಟ್ ಮೂಲಕ ನಿಮ್ಮ ಸ್ನೇಹಿತರಿಗೆ ತ್ವರಿತವಾಗಿ ಹಣವನ್ನು ವರ್ಗಾವಣೆ ಮಾಡುವುದು ಸೇರಿದಂತೆ QR ಕೋಡ್ ಸ್ಕ್ಯಾನ್ ಮೂಲಕ ಪೇಟಿಎಂ ನಂತಹ ಸೇವೆಗಳನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಹಾಗಾದರೆ, ವಾಟ್ಸ್‌ಆಪ್ ಪೇಮೆಂಟ್ ಸೇವೆ ಹೇಗಿರಲಿದೆ ಎಂಬುದನ್ನು ಮುಂದಿನ ಸ್ಲೈಡರ್‌ಗಳಲ್ಲಿ ತಿಳಿಯಿರಿ.!!
ಬೀಟಾಹಂತದಲ್ಲಿ 'ವಾಟ್ಸ್ಆಪ್' ಪೇಮೆಂಟ್!!
'ವಾಟ್ಸ್ಆಪ್ ಪೇ' ಪ್ಲಾಟ್‌ಫಾರ್ಮ್ ಈಗಾಗಲೇ ಬೀಟಾ (ಪರೀಕ್ಷೆ) ಹಂತದಲ್ಲಿದೆ. ಪೇಮೆಂಟ್ ಸೇವೆ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ಆಧರಿಸಿ ಶೀಘ್ರವೇ ಪೇಮೆಂಟ್ ಸೇವೆಯನ್ನು ಗ್ರಾಹಕರಿಗೆ ಪರಿಚಯಿಸಲು ತೀರ್ಮಾನಿಸಿರುವುದಾಗಿ ವಾಟ್ಸ್ಆಪ್ ಪ್ರಕಟಣೆಯಲ್ಲಿ ಹೇಳಲಾಗಿದೆ.!!
(ಯುಪಿಐ) ಆಧಾರಿತ ಪಾವತಿ!!
ಜನಪ್ರಿಯ ಮೆಸೇಜಿಂಗ್ ಅಪ್ ವಾಟ್ಸ್ಆಪ್ ಏಕೀಕೃತ ಪೇಮೆಂಟ್ ಇಂಟರ್ಫೇಸ್ (ಯುಪಿಐ) ಆಧಾರಿತ ಪಾವತಿಯನ್ನು ಅಳವಡಿಸಿಕೊಂಡಿದೆ. ಆಕ್ಸಿಸ್ ಬ್ಯಾಂಕ್, ಹೆಚ್‌ಡಿಎಫ್‌ಸಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಹಲವು ಬ್ಯಾಂಕ್‌ಗಳೊಂದಿಗೆ ವಾಟ್ಸ್‌ಆಪ್ ಸಹಭಾಗಿತ್ವವನ್ನು ಹೊಂದಿದೆ.!!
ನೆಟ್‌ವರ್ಕ್ ಇಲ್ಲದೆಯೂ ಸಂಪರ್ಕ!!
'ವಾಟ್ಸ್ಆಪ್' ಪೇಮೆಂಟ್ ಪ್ಲಾಟ್‌ಫಾರ್ಮ್ ಮೂಲಕ ಸಮೀಪದ ಮೊಬೈಲ್ ಫೋನ್ ಜತೆಗೆ ಸಂಪರ್ಕ ಸಾಧಿಸಿ ಸುಲಭವಾಗಿ ಹಣ ವರ್ಗಾವಣೆ ಮಾಡಬಹುದಾಗಿದೆ.! ಮೈಕ್ರೋಫೋನ್ ಮತ್ತು ಸ್ಪೀಕರ್ ಮುಖಾಂತರ ಅಲ್ಟ್ರಾಸೌಂಡ್ ಕಿರಣಗಳನ್ನು ಬಳಸಿ ಹತ್ತಿರದ ಫೋನ್ ಜತೆಯೂ ಆಪ್ ಸಂಪರ್ಕ ಸಾಧಿಸಲಿದೆ ಎಂದು ಹೇಳಲಾಗಿದೆ..!!
ಪೇಮೆಂಟ್ ಮಾಡುವುದು ಹೇಗೆ?
ವಾಟ್ಸ್‌ಆಪ್ ನೀಡಿರುವ ಮಾಹಿತಿಯಂತೆ ನೀವು ವಾಟ್ಸ್ಆಪ್ ಬಳಕೆ ಮಾಡುತ್ತಿರುವ ಮೊಬೈಲ್ ಸಂಖ್ಯೆಯು ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಸಂಪರ್ಕಿಸಿರಬೇಕು.!! ವಾಟ್ಸ್ಆಪ್‌ನಲ್ಲಿ ಪೇಮೆಂಟ್‌ಗಾಗಿಯೇ ಹೆಚ್ಚುವರಿ ಆಯ್ಕೆಯನ್ನು (ರೂಪಾಯಿ ಚಿಹ್ನೆ ಎನ್ನಲಾಗಿದೆ) ನೀಡಲಾಗಿದ್ದು, ಎಲ್ಲಿ ಯುಪಿಐ ಐಡಿ ನೀಡಿ ಹಣ ವಿನಿಮಯ ಮಾಡಬಹುದು.!!
ಕನ್ನಡದಲ್ಲಿಯೂ ಪೇಮೆಂಟ್ ಸೇವೆ!!
Tez ಆಪ್‌ನಂತೆ 'ವಾಟ್ಸ್ಆಪ್' ಪೇಮೆಂಟ್ ಪ್ಲಾಟ್‌ಫಾರ್ಮ್ ಕೂಡ ಕನ್ನಡ, ಇಂಗ್ಲಿಷ್, ಹಿಂದಿ, ಬೆಂಗಾಲಿ, ಗುಜರಾತಿ, ಮರಾಠಿ, ತೆಲುಗು ಹಾಗೂ ತಮಿಳು ಸೇರಿ ಎಂಟು ಭಾಷೆಗಳಲ್ಲಿ ಬರುತ್ತಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಆದರೆ, ವಾಟ್ಸ್ಆಪ್ ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಈವರೆಗೂ ನೀಡಿಲ್ಲ.!!
Gizbot ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿ.Subscribe to Kannada Gizbot.