ಅತ್ಯುತ್ತಮ ಸೆಲ್ಫಿ ಕ್ಯಾಮೆರಾ ಫೋನ್ ಖರೀದಿಸಬೇಕೆ?..ಹಾಗಿದ್ರೆ, ಇವೇ ಬೆಸ್ಟ್ ಆಯ್ಕೆ!
ಪ್ರಸ್ತುತ ಮಾರುಕಟ್ಟೆಗೆ ಬಿಡುಗಡೆ ಆಗುವ ಬಹುತೇಕ ಸ್ಮಾರ್ಟ್‌ಫೋನ್‌ಗಳು ಅತ್ಯುತ್ತಮ ಕ್ಯಾಮೆರಾ ಆಯ್ಕೆಯನ್ನು ಒದಗಿಸುತ್ತಿವೆ. ಫೋನಿನ ಹಿಂಬದಿಯ ರಿಯರ್ ಕ್ಯಾಮೆರಾ ಸೆನ್ಸಾರ್ ಜೊತೆ ಜೊತೆಗೆ ಮುಂಭಾಗದ ಸೆಲ್ಫಿ ಕ್ಯಾಮೆರಾಗೂ ಇದೀಗ ಹೆಚ್ಚಿನ ಸೆನ್ಸಾರ್ ಒದಗಿಸಲಾಗುತ್ತಿವೆ. ಹೀಗಾಗಿ ಇತ್ತೀಚಿನ ಕೆಲವು ಸ್ಮಾರ್ಟ್‌ಫೋನ್‌ಗಳು ಸೆಲ್ಫಿ ಕ್ಯಾಮೆರಾ ಪ್ರಿಯ ಗ್ರಾಹಕರನ್ನು ತಮ್ಮತ್ತ ಸೆಳೆದಿವೆ. ಅವುಗಳ ಪೈಕಿ ವಿವೋ, ಮೊಟೊರೊಲಾ, ಸ್ಯಾಮ್‌ಸಂಗ್ ಸೇರಿದಂತೆ ಇತರೆ ಬ್ರ್ಯಾಂಡ್‌ಗಳ ಕೆಲ ಫೋನ್‌ಗಳು 50 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಸೌಲಭ್ಯದೊಂದಿಗೆ ಸದ್ದು ಮಾಡಿವೆ.
ಹೌದು, ಮಾರುಕಟ್ಟೆಯಲ್ಲಿ ಬೆಸ್ಟ್ ಸೆಲ್ಫಿ ಕ್ಯಾಮೆರಾಗಳಿಗೆ ಬೇಡಿಕೆ ಹೆಚ್ಚಿದೆ. ಮುಖ್ಯವಾಗಿ ಮೀಡ್‌ರೇಂಜ್ ಬೆಲೆಯಲ್ಲಿ ಲಭ್ಯ ಇರುವ ಕೆಲವು ಫೋನ್‌ಗಳಲ್ಲಿ ಅತ್ಯುತ್ತಮ ಸೆಲ್ಫಿ ಕ್ಯಾಮೆರಾ ಸೌಲಭ್ಯ ಕಾಣಬಹುದಾಗಿದೆ. ವಿಶೇಷವಾಗಿ 50 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳು ಬಲು ಆಕರ್ಷಕ ಎನಿಸಿಕೊಂಡಿವೆ. ಹಾಗಾದರೇ 50 ಮೆಗಾ ಪಿಕ್ಸಲ್ ಸೆನ್ಸಾರ್ ಇರುವ ಸೆಲ್ಫಿ ಕ್ಯಾಮೆರಾ (Selfie Camera) ಫೋನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ವಿವೋ V30e ಮೊಬೈಲ್
ವಿವೋ V30e ಫೋನ್ 6.78 ಇಂಚಿನ ಫುಲ್ ಹೆಚ್‌ಡಿ + ಕರ್ವ್ ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಹೊಂದಿದ್ದು, 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಈ ಫೋನ್ ಸ್ನಾಪ್‌ಡ್ರಾಗನ್ 6 ಜನ್ 1 ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಪಡೆದಿದೆ.
ಇನ್ನು ಇದು ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿ ಇದೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿಗಾಗಿ 50 ಮೆಗಾ ಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇದರೊಂದಿಗೆ ಫ್ಲ್ಯಾಶ್ ಲೈಟ್ ಸೌಲಭ್ಯ ಸಹ ನೀಡಲಾಗಿದೆ. ಇದರ ಜೊತೆಗೆ 5500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ನೀಡಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಮೊಬೈಲ್
ಸ್ಯಾಮ್‌ಸಂಗ್ ಸಂಸ್ಥೆಯ ಈ ಮೊಬೈಲ್ 6.7 ಇಂಚಿನ ಸೂಪರ್ AMOLED ಡಿಸ್‌ಪ್ಲೇ ಪಡೆದಿದ್ದು, ಇದರೊಂದಿಗೆ 120Hz ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 7 ಜೆನ್ 1 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದರೊಂದಿಗೆ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಕೂಡಾ ಇದೆ.
ಇನ್ನು ಈ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಮೂರು ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಹಾಗೆಯೇ ಇದರ ಸೆಲ್ಫಿ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿ ಇದೆ. ಇನ್ನು ಇದು 5,000mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದರೊಂದಿಗೆ 45W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.
ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್
ಮೊಟೊರೊಲಾ ಎಡ್ಜ್ 50 ಪ್ರೊ ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಈ ಡಿಸ್‌ಪ್ಲೇಯು 2712 × 1220 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಒಳಗೊಂಡಿದೆ. ಅಲ್ಲದೇ ಇದು ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಸಾಮರ್ಥ್ಯದ ಬಲವನ್ನು ಪಡೆದಿದ್ದು, ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್ 14 ಓಎಸ್ ಇದೆ.
ಈ ಫೋನಿನ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಹೊಂದಿದೆ. ಇದರ ಜೊತೆಗೆ ಈ ಫೋನ್ 50 ಮೆಗಾಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒಳಗೊಂಡಿರುವುದು ಪ್ಲಸ್ ಪಾಯಿಂಟ್ ಎನಿಸಿದೆ. ಹಾಗೆಯೇ ಇದು 4500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಪಡೆದಿದೆ.


Click it and Unblock the Notifications








