Home
ಕ್ಯಾಮೆರಾ

ಬಜೆಟ್‌ ದರದಲ್ಲಿ ಅತ್ಯುತ್ತಮ ಕ್ಯಾಮೆರಾ ಫೋನ್‌ ಬೇಕಿದ್ರೆ, ಈ ಲಿಸ್ಟ್‌ ನೋಡಿ!

ಬಜೆಟ್‌ ಬೆಲೆಯಲ್ಲಿ ಅತ್ಯುತ್ತಮ ಕ್ಯಾಮೆರಾ ಸ್ಮಾರ್ಟ್‌ಫೋನ್‌ ಖರೀದಿಸಲು ಯೋಚಿಸುತ್ತಿದ್ದಿರಾ? ಹಾಗಿದ್ರೆ ಖಂಡಿತಾವಾಗಿಯು ನಿಮಗೆ ಕೆಲವು ಅತ್ಯುತ್ತಮ ಮೊಬೈಲ್‌ಗಳ ಆಯ್ಕೆ ಲಭ್ಯ ಇದೆ. ಇತ್ತೀಚಿಗೆ ಮೊಬೈಲ್‌ ಕಂಪನಿಗಳು ಕ್ಯಾಮೆರಾ ವಿಭಾಗಕ್ಕೆ ಹೆಚ್ಚಿನ ಗಮನ ನೀಡುತ್ತಿದ್ದು, ಸುಮಾರು 20,000 ರೂ. ಗಳ ರೇಂಜ್‌ನಲ್ಲಿ ಕೆಲವು ಉತ್ತಮ ಕ್ಯಾಮೆರಾ ಮೊಬೈಲ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಇವು ಮೊಬೈಲ್‌ ಫೋಟೋಗ್ರಫಿ ಪ್ರಿಯರನ್ನು ಸೆಳೆದಿವೆ. ಮುಖ್ಯವಾಗಿ ಇತ್ತೀಚಿನ ಫೋನ್‌ಗಳಲ್ಲಿ 50 ಎಂಪಿ ಕ್ಯಾಮೆರಾ ಸೆನ್ಸಾರ್ ಸೌಲಭ್ಯ ಸಾಮಾನ್ಯ ಎನಿಸಿದೆ.

ಹೌದು, ಸದ್ಯ ಇಂದಿನ ಅನೇಕ ಸ್ಮಾರ್ಟ್‌ಫೋನ್‌ಗಳು ಡ್ಯುಯಲ್‌ ಕ್ಯಾಮೆರಾ ಸೌಲಭ್ಯ ಪಡೆದಿದ್ದು, ಅವುಗಳಲ್ಲಿ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸೌಲಭ್ಯ ಒಳಗೊಂಡಿವೆ. ಕೆಲವು ಬಜೆಟ್‌ ಪ್ರೈಸ್‌ಟ್ಯಾಗ್‌ ಮೊಬೈಲ್‌ಗಳು ಕೂಡಾ 50 ಮೆಗಾ ಪಿಕ್ಸಲ್‌ ಕ್ಯಾಮೆರಾ ಸೆನ್ಸಾರ್‌ ಪಡೆದಿವೆ. ಇದೀಗ ನೀವೇನಾದರೂ ಬಜೆಟ್‌ ಬೆಲೆಯಲ್ಲಿ ಅತ್ಯುತ್ತಮ ಕ್ಯಾಮೆರಾ ಮೊಬೈಲ್‌ ಖರೀದಿಸಲು ಯೋಚನೆ ಮಾಡಿದ್ದರೆ, ಇಲ್ಲಿವೆ ಬೆಸ್ಟ್‌ ಆಯ್ಕೆಗಳು. ಮುಂದೆ ಓದಿರಿ.

ಬಜೆಟ್‌ ದರದಲ್ಲಿ ಅತ್ಯುತ್ತಮ ಕ್ಯಾಮೆರಾ ಫೋನ್‌ ಬೇಕಿದ್ರೆ, ಈ ಲಿಸ್ಟ್‌ ನೋಡಿ!

ಮೊಟೊರೊಲಾ G85 5G ಮೊಬೈಲ್‌

ಮೊಟೊ G85 5G ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ pOLED ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2712 × 1220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಸಹ ಹೊಂದಿದೆ. ಇದರ ಜೊತೆಗೆ ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 3 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಣೆ ಮಾಡಲಿದೆ.

ಹಾಗೆಯೇ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಪಡೆದಿದ್ದು, ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಹೊಂದಿದೆ. ಇನ್ನು ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ. ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಮೊಬೈಲ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A14 5G ಮೊಬೈಲ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಓಎಸ್‌ ನಲ್ಲಿ ಕಾರ್ಯ ನಿರ್ವಹಿಸುತ್ತದೆ.

ಅಲ್ಲದೇ ಇದು ಕ್ವಾಡ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ಹಾಗೆಯೇ 13 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯವನ್ನು ಹೊಂದಿದ್ದು, 15W ಫಾಸ್ಟ್‌ ಚಾರ್ಜಿಂಗ್‌ ಅನ್ನು ಸಪೋರ್ಟ್‌ ಮಾಡುತ್ತದೆ.

ವಿವೋ T3 ಲೈಟ್‌ 5G ಮೊಬೈಲ್‌

ವಿವೋ T3 ಲೈಟ್‌ 5G ಮೊಬೈಲ್‌ 6.56 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿದೆ. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಬಲದಲ್ಲಿ ಕೆಲಸ ನಿರ್ವಹಿಸಲಿದೆ. ಇದು ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು (camera) 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ.

Best Mobiles in India

English summary
Best Camera Mobile Phones Under Rs 20000: Check Mobile Phones list is here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+