ಬಜೆಟ್ ಬೆಲೆಗೆ ಇಲ್ಲಿವೇ ನೋಡಿ ಬೆಸ್ಟ್ ಕ್ಯಾಮೆರಾ ಫೋನ್‌ಗಳು!
ಪ್ರಸ್ತುತ ಬಹುತೇಕ ಸ್ಮಾರ್ಟ್‌ಫೋನ್‌ಗಳು ಬೆಸ್ಟ್ ಕ್ಯಾಮೆರಾ ಆಯ್ಕೆ ಪಡೆದಿರುತ್ತವೆ. ಆ ಪೈಕಿ ಹಿಂಬದಿಯ ರಿಯರ್ ಪ್ರಾಥಮಿಕ ಕ್ಯಾಮೆರಾ ಅಧಿಕ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಒಳಗೊಂಡಿರುತ್ತದೆ. ಪ್ರಮುಖವಾಗಿ 50 ಮೆಗಾ ಪಿಕ್ಸಲ್ ಅಥವಾ 108 ಮೆಗಾ ಪಿಕ್ಸಲ್ ಇತ್ತೀಚಿಗೆ ಸಾಮಾನ್ಯ ಎನ್ನುವಂತಾಗಿದೆ. ಇದರೊಂದಿಗೆ ಸೆಲ್ಫಿ ಪ್ರಿಯರಿಗಾಗಿ ಮುಂಭಾಗದಲ್ಲಿಯೂ ಬೆಸ್ಟ್ ಕ್ಯಾಮೆರಾ ಸೆನ್ಸಾರ್ ಆಯ್ಕೆ ಸಹ ಪಡೆದಿರುತ್ತವೆ.
ಹೌದು, ಸೆಲ್ಫಿ ಕ್ಯಾಮೆರಾಗಳು ಉನ್ನತ ಸೆನ್ಸಾರ್ ಪಡೆದಿದ್ದರೆ, ಫೋಟೋಗಳು ಉತ್ತಮವಾಗಿ ಮೂಡಿಬರುತ್ತವೆ. ಹೀಗಾಗಿ ಬಜೆಟ್ ಬೆಲೆಯ ಕೆಲವು ಹೊಸ ಫೋನ್‌ಗಳು 50 ಮೆಗಾ ಪಿಕ್ಸಲ್ ಸೆನ್ಸಾರ್ ಅಯ್ಕೆಯನ್ನು ಪಡೆದಿವೆ. ಈ ಲೇಖನದಲ್ಲಿ ಬಜೆಟ್ ದರದಲ್ಲಿ 50 ಮೆಗಾ ಪಿಕ್ಸಲ್ ಹಿಂಬದಿಯ ಕ್ಯಾಮೆರಾ ಪಡೆದಿರುವ ಬೆಸ್ಟ್ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊ G34 5G ಸ್ಮಾರ್ಟ್‌ಫೋನ್
ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಹಾಗೆಯೇ ಇದು 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಪಂಚ್-ಹೋಲ್ ವಿನ್ಯಾಸದೊಂದಿಗೆ ಫ್ಲಾಟ್ ಡಿಸ್‌ಪ್ಲೇ ಎನಿಸಿಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದಿದ್ದು, 1600×720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಹೊಂದಿದೆ.
ಅಲ್ಲದೇ ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 14 ಸಪೋರ್ಟ್ ರನ್ ಆಗಲಿದೆ. ಹಾಗೆಯೇ 8GB RAM ಮತ್ತು 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯದಲ್ಲಿದೆ. ಇದಲ್ಲದೆ 8GB ವರ್ಚುವಲ್ RAM ನಿಂದ ಸಪೋರ್ಟ್ ಪಡೆದಿದೆ. ಇದರೊಂದಿಗೆ ಮೈಕ್ರೊ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆ ಪಡೆದಿದೆ.
ರಿಯಲ್‌ಮಿ 12 ಪ್ರೊ 5G
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX 882 ಲೆನ್ಸ್ ಪಡೆದಿದೆ. ಮೊಬೈಲ್ 2412 x 1080 ಪಿಕ್ಸೆಲ್ಸ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.7 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದೆ.
ಈ ಡಿಸ್‌ಪ್ಲೇ OLED ಕರ್ವ್ಡ್ ಡಿಸ್‌ಪ್ಲೇ ಆಗಿದೆ. ಇದಲ್ಲದೆ ಡಿಸ್‌ಪ್ಲೇಯು 240Hz ಟಚ್ ಸ್ಯಾಂಪ್ಲಿಂಗ್ ರೇಟ್, 2160Hz PWM ಡಿಮ್ಮಿಂಗ್ ಮತ್ತು 120Hz ರಿಫ್ರೆಶ್ ರೇಟ್ ವರೆಗೆ ಸಪೋರ್ಟ್ ಒದಗಿಸಲಿದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 1 SoC ಪ್ರೊಸೆಸರ್‌ನಲ್ಲಿ ಬಲದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A15
ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಅಲ್ಲದೇ ಈ ಫೋನ್ ಸ್ಮಾರ್ಟ್‌ಫೋನ್ 6.5 ಇಂಚಿನ S-AMOLED ಇನ್ಫಿನಿಟಿ-U ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಇದರೊಮದಿಗೆ ಈ ಫೋನ್ ಮೀಡಿಯಾಟೆಕ್ ಹಿಲಿಯೊ G99SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದರ 5G ಆವೃತ್ತಿಯು ಡೈಮೆನ್ಸಿಟಿ 6100 ಪ್ಲಸ್ ಚಿಪ್‌ಸೆಟ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ರನ್ ಆಗುವುದು.


Click it and Unblock the Notifications








