Home
ಕ್ಯಾಮೆರಾ

ಬೆಸ್ಟ್‌ ಕ್ಯಾಮೆರಾ ಸೌಲಭ್ಯ ಇರುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಬಹುತೇಕ ಗ್ರಾಹಕರು ಹೊಸ ಮೊಬೈಲ್ ಖರೀದಿ ಮಾಡುವಾಗ ಮೊಬೈಲ್‌ ಕ್ಯಾಮೆರಾ ಬಗ್ಗೆ ಅಧಿಕ ಗಮನ ನೀಡುತ್ತಾರೆ. ಇತ್ತೀಚಿನ ಮೊಬೈಲ್‌ ಸಂಸ್ಥೆಗಳು ಮೊಬೈಲ್‌ಗಳಲ್ಲಿ ಅತ್ಯುತ್ತಮ ಕ್ಯಾಮೆರಾ ಆಯ್ಕೆಯನ್ನು ಪರಿಚಯಿಸುತ್ತಾ ಮುನ್ನಡೆದಿದ್ದು, ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಭಿನ್ನ ಆಯ್ಕೆ ಲಭ್ಯ ಇವೆ. ಅದರಲ್ಲಿಯೂ ಈಗೀಗ ಡ್ಯುಯಲ್‌ ಹಾಗೂ ಟ್ರಿಪಲ್‌ ಕ್ಯಾಮೆರಾ ಆಯ್ಕೆ ಹೆಚ್ಚು ಬಳಕೆಯಲ್ಲಿ ಇವೆ.

ಹೌದು, ಸದ್ಯ ಮಾರುಕಟ್ಟೆಯಲ್ಲಿ ಬಹುತೇಕ ಎಲ್ಲ ಮಾದರಿಯ ಮೊಬೈಲ್‌ಗಳು ಡ್ಯುಯಲ್‌ ಹಾಗೂ ತ್ರಿವಳಿ ಕ್ಯಾಮೆರಾ ರಚನೆ ಒಳಗೊಂಡಿವೆ. ಆದರೆ ಅತ್ಯುತ್ತಮ ಕ್ಯಾಮೆರಾ ಸೆನ್ಸಾರ್‌ ಇರುವ ಫೋನ್‌ಗಳು ಸ್ವಲ್ಪ ದುಬಾರಿ ಪ್ರೈಸ್‌ ಟ್ಯಾಗ್‌ ಹೊಂದಿವೆ. ಕ್ಯಾಮೆರಾ ವಿಷಯದಲ್ಲಿ ಸ್ಯಾಮ್‌ಸಂಗ್‌, ಐಫೋನ್‌, ಒನ್‌ಪ್ಲಸ್‌ ನಂತಹ ಬ್ರ್ಯಾಂಡ್‌ಗಳು ಡಿಮ್ಯಾಂಡ್ ಪಡೆದಿವೆ. ಹಾಗಾದರೆ ಅತ್ಯುತ್ತಮ ಕ್ಯಾಮೆರಾ ಸೌಲಭ್ಯ ಪಡೆದ ಕೆಲವು ಬೆಸ್ಟ್‌ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬೆಸ್ಟ್‌ ಕ್ಯಾಮೆರಾ ಸೌಲಭ್ಯ ಇರುವ ಅತ್ಯುತ್ತಮ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಮೊಬೈಲ್‌ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಮೊಬೈಲ್‌ 6.2 ಇಂಚಿನ ಡೈನಾಮಿಕ್ AMOLED FHD+ 2X ಮಾದರಿಯ ಡಿಸ್‌ಪ್ಲೇ ಅನ್ನು ಪಡೆದಿದೆ. ಇದು ಸಂಸ್ಥೆಯ Exynos 2400 SoC ಚಿಪ್ಸೆಟ್ ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಅಲ್ಲದೇ ಇದು 8GB RAM + 128GB ಮತ್ತು 256GB ಸ್ಟೋರೇಜ್‌ ಪಡೆದಿದೆ. ಹಾಗೆಯೇ ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿ ಇದೆ.

ಐಫೋನ್‌ 15

ಐಫೋನ್‌ 15 ಮೊಬೈಲ್‌ 6.1 ಇಂಚಿನ ಡಿಸ್‌ಪ್ಲೇ ಅನ್ನು ಪಡೆದಿದ್ದು, 1600 nits ಬ್ರೈಟ್ನಸ್‌ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಇದು A16 ಬಯೋನಿಕ್ ಚಿಪ್ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ಮಾಡಲಿದೆ. ಇನ್ನು ಈ ಫೋನ್ ಎರಡು ಕ್ಯಾಮೆರಾ ರಚನೆ ಪಡೆದಿದ್ದು, ಮೊದಲ ಕ್ಯಾಮೆರಾವು 48 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸೌಲಭ್ಯ ಪಡೆದಿದೆ. ದ್ವಿತೀಯ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ನ ಅಲ್ಟ್ರಾ ವೈಲ್ಡ್‌ ಆಂಗಲ್‌ ಲೆನ್ಸ್‌ ಪಡೆದಿದ್ದು, ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ಪಡೆದಿದೆ.

ಒನ್‌ಪ್ಲಸ್‌ 12

ಈ ಸ್ಮಾರ್ಟ್‌ಫೋನ್‌ 6.82 ಇಂಚಿನ QHD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1440 x 3168 ಪಿಕ್ಸೆಲ್‌ ಸ್ಕ್ರೀನ್‌ ಸೂಪರ್ ಕ್ರಿಸ್ಪ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್ 8 ಜೆನ್‌ 3 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 14 ಓಎಸ್‌ ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸಲ್‌ನ ಸೋನಿ LYT 808 ಸೆನ್ಸಾರ್‌ ಹೊಂದಿದೆ.

ಗೂಗಲ್‌ ಪಿಕ್ಸಲ್‌ 8

ಗೂಗಲ್‌ ಸಂಸ್ಥೆಯ ಈ ಫೋನ್ 6.2 ಇಂಚಿನ ಡಿಸ್‌ಪ್ಲೇ ರಚನೆ ಜೊತೆಗೆ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಇದರೊಂದಿಗೆ 120 Hz ರಿಫ್ರೆಶ್ ರೇಟ್, ಕನಿಷ್ಠ ಬೆಜೆಲ್‌ಗಳು ಮತ್ತು ಪ್ರಕಾಶಮಾನವಾದ ಸೂರ್ಯನ ಬೆಳಕಿನಲ್ಲಿಯೂ ಸಹ ಉತ್ತಮ ಬ್ರೈಟ್ನೆಸ್‌ ಅನ್ನು ನೀಡಲಿದೆ.

ಇದರ ಜೊತೆಗೆ ಈ ಫೋನ್‌ ಗೂಗಲ್‌ನ ಟೆನ್ಸರ್ 3 ಚಿಪ್‌ಸೆಟ್‌ನಿಂದ (Google Tensor 3 chipset) ಕೆಲಸ ನಿರ್ವಹಿಸಲಿದೆ. ಈ ಫೋನ್‌ 50ಎಂಪಿ ಮುಖ್ಯ ಕ್ಯಾಮರಾ ಆಯ್ಕೆ ವಿವಿಧ ಬೆಳಕಿನ ಪರಿಸ್ಥಿತಿಗಳಲ್ಲಿ ಅತ್ಯುತ್ತಮ ಫೋಟೋಗಳನ್ನು ಸೆರೆಹಿಡಿಯುವ ಸಾಮರ್ಥ್ಯ ಪಡೆದಿದೆ.

Best Mobiles in India

English summary
Few Best Camera Smartphones Feb 2024. list is here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+