ಕಡಿಮೆ ಬೆಲೆಗೆ ಅತ್ಯುತ್ತಮ Camera ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
ಇತ್ತೀಚಿಗೆ ಅನೇಕರು ಮೊಬೈಲ್‌ನಲ್ಲಿಯೇ ಫೋಟೋ ಸೆರೆಹಿಡಿಯುವುದು ಸಾಮಾನ್ಯ ಎನಿಸಿದೆ. ಈ ನಿಟ್ಟಿನಲ್ಲಿ ಮೊಬೈಲ್ ಸಂಸ್ಥೆಗಳು ಬಜೆಟ್ ಬೆಲೆಯ ಮೊಬೈಲ್‌ಗಳಲ್ಲಿಯೂ ಉತ್ತಮ ಕ್ಯಾಮೆರಾ ಸೌಲಭ್ಯ ನೀಡುತ್ತಿವೆ. ಸುಮಾರು 20,000ರೂ. ಗಳ ವಿಭಾಗದಲ್ಲಿ ಸಹ ಕೆಲವು ಉತ್ತಮ ಕ್ಯಾಮೆರಾ ಫೋನ್‌ಗಳು ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯ ಇವೆ. ಬಜೆಟ್ ದರದಲ್ಲಿ ಅತ್ಯುತ್ತಮ ಕ್ಯಾಮೆರಾ ಫೋನ್ ಬಯಸುವ ಗ್ರಾಹಕರಿಗೆ ಇವು ಆಕರ್ಷಕ ಎನಿಸಿವೆ. ಇನ್ನು ಬಜೆಟ್ ದರದ ಫೋನ್‌ಗಳಲ್ಲಿಯೂ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸಲ್ ಸೆನ್ಸಾರ್ ಸಿಗುತ್ತವೆ ಅನ್ನೋದು ಪ್ಲಸ್ ಪಾಯಿಂಟ್.
ಹೌದು, ಪ್ರಸ್ತುತ ಮಾರುಕಟ್ಟೆಯಲ್ಲಿ ಇಂದಿನ ನೂತನ ಮಾದರಿಯ ಬಹುತೇಕ ಸ್ಮಾರ್ಟ್‌ಫೋನ್‌ಗಳು ಡ್ಯುಯಲ್ ಕ್ಯಾಮೆರಾ ರಚನೆ ಒಳಗೊಂಡಿವೆ. ಆ ಪೈಕಿ ಮೊದಲ ಕ್ಯಾಮೆರಾ 50 ಮೆಗಾಪಿಕ್ಸಲ್ ಸೆನ್ಸಾರ್ ಬಹುತೇಕ ನಿಕ್ಕಿ ಇರುತ್ತದೆ. ಇದರ ಜೊತೆಗೆ ಫೋಟೋ ಅಂದ ಹೆಚ್ಚಿಸಲು ಕೆಲವು ಎಡಿಟಿಂಗ್ ಆಯ್ಕೆಗಳ, ಫಿಲ್ಟರ್ ಆಯ್ಕೆಗಳು ಸಹ ಒಳಗೊಂಡಿರುತ್ತವೆ. ಸುಮಾರು 20,000ರೂ. ಗಳ ಒಳಗೆ ನೀವೇನಾದರೂ ಬೆಸ್ಟ್ ಕ್ಯಾಮೆರಾ ಮೊಬೈಲ್ ಖರೀದಿಸಲು ಪ್ಲ್ಯಾನ್ ಮಾಡಿದ್ದರೆ ಮುಂದೆ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಮೊಬೈಲ್ ತ್ರಿವಳಿ ಕ್ಯಾಮೆರಾ (Camera) ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಆಗಿದ್ದು, ಇನ್ನು ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿ ಇದೆ. ಇನ್ನು ಇದು 6.6 ಇಂಚಿನ ಸೂಪರ್ ಅಮೋಲೆಡ್ ಡಿಸ್‌ಪ್ಲೇ ರಚನೆ ಅನ್ನು ಪಡೆದಿದ್ದು, 120Hz ರಿಫ್ರೆಶ್ ರೇಟ್ ಸೌಲಭ್ಯ ಸಹ ಪಡೆದಿದೆ. ಹಾಗೆಯೇ 6,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, 25W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಇದೆ.
ವಿವೋ T3 5G ಫೋನ್
ವಿವೋ T3 5G ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಈ ಫೋನಿನ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಹಾಗೆಯೇ 6.67 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ.
ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಪಡೆದಿದೆ. ಅಲ್ಲದೇ ಇದು 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 44 W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ.
ಐಕ್ಯೂ Z9 ಮೊಬೈಲ್
ಐಕ್ಯೂ Z9 (iQOO Z9) ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಈ ಫೋನಿನ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಹಾಗೆಯೇ ಇದು 6.67 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ.
ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 5G ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಪಡೆದಿದೆ. ಅಲ್ಲದೇ ಇದು 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ.


Click it and Unblock the Notifications








