Home
ಕ್ಯಾಮೆರಾ

ಫೋನಿನಲ್ಲಿ ಅತ್ಯುತ್ತಮ ಫೋಟೋ ಸೆರೆ ಹಿಡಿಯಬೇಕೆ?..ಹಾಗಿದ್ರೆ, ಇಲ್ಲಿವೆ ನೋಡಿ ಬೆಸ್ಟ್‌ ಫೋನ್‌ಗಳು!

ನಿಮಗೆ ಮೊಬೈಲ್‌ ಫೋಟೋಗ್ರಫಿ ಅಂದ್ರೆ ಇಷ್ಟವೇ? ಈ ನಿಟ್ಟಿನಲ್ಲಿ ಮೀಡ್‌ರೇಂಜ್‌ ಬೆಲೆಯಲ್ಲಿ ಅತ್ಯುತ್ತಮ ಕ್ಯಾಮೆರಾ ಸ್ಮಾರ್ಟ್‌ಪೋನ್‌ ಖರೀದಿಸಲು ಯೋಚಿಸುತ್ತಿದ್ದಿರಾ? ಹಾಗಿದ್ರೆ ಖಂಡಿತಾವಾಗಿಯು ನಿಮಗೆ ಕೆಲವು ಅತ್ಯುತ್ತಮ ಫೋನ್‌ಗಳ ಆಯ್ಕೆ ಲಭ್ಯ ಇದೆ. ಇತ್ತೀಚಿಗೆ ಮೊಬೈಲ್‌ ಸಂಸ್ಥೆಗಳು ಕ್ಯಾಮೆರಾ ವಿಭಾಗಕ್ಕೆ ಹೆಚ್ಚಿನ ಪ್ರಾದಾನ್ಯ ನೀಡುತ್ತಿದ್ದು, ಸುಮಾರು 30,000ರೂ. ಗಳ ರೇಂಜ್‌ನಲ್ಲಿ ಕೆಲವು ಉತ್ತಮ ಕ್ಯಾಮೆರಾ ಮೊಬೈಲ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಇವು ಮೊಬೈಲ್‌ ಫೋಟೋಗ್ರಫಿ ಪ್ರಿಯರನ್ನು ಸೆಳೆದಿವೆ. ಮುಖ್ಯವಾಗಿ ಇತ್ತೀಚಿನ ಕ್ಯಾಮೆರಾ ಫೋನ್‌ಗಳಲ್ಲಿ 50 ಮೆಗಾಪಿಕ್ಸಲ್‌ ಸೆನ್ಸಾರ್ ಸೌಲಭ್ಯ ಸಾಮಾನ್ಯ ಎನ್ನುವಂತಾಗಿದೆ.

ಹೌದು, ಸದ್ಯ ಇಂದಿನ ಬಹುತೇಕ ಸ್ಮಾರ್ಟ್‌ಫೋನ್‌ಗಳು ಡ್ಯುಯಲ್‌ ಕ್ಯಾಮೆರಾ ಸೌಲಭ್ಯ ಪಡೆದಿದ್ದು, ಅವುಗಳಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸಲ್‌ ಸೆನ್ಸಾರ್‌ ಸೌಲಭ್ಯ ಒಳಗೊಂಡಿವೆ. ಕೆಲವು ಮಿಡ್‌ರೇಂಜ್‌ ದರದ ಮೊಬೈಲ್‌ಗಳು ಕೂಡಾ 50 ಮೆಗಾಪಿಕ್ಸಲ್‌ ಕ್ಯಾಮೆರಾ ಸೆನ್ಸಾರ್‌ ಪಡೆದಿವೆ. ಸದ್ಯ ನೀವೇನಾದರೂ ಮಿಡ್‌ರೇಂಜ್‌ ದರದಲ್ಲಿ ಅತ್ಯುತ್ತಮ ಕ್ಯಾಮೆರಾ ಸ್ಮಾರ್ಟ್‌ಫೋನ್‌ ಖರೀದಿಸಲು ಪ್ಲ್ಯಾನ್ ಮಾಡಿದ್ದರೆ, ಈ ಲೇಖನ ನಿಮಗೆ ಉಪಯುಕ್ತ ಎನಿಸಲಿದೆ. ಮುಂದೆ ಓದಿರಿ.

ಫೋನಿನಲ್ಲಿ ಅತ್ಯುತ್ತಮ ಫೋಟೋ ಸೆರೆ ಹಿಡಿಯಬೇಕೆ?..ಹಾಗಿದ್ರೆ, ಇವೇ ಬೆಸ್ಟ್‌ ಫೋನ್‌

ಪೊಕೊ F6 ಮೊಬೈಲ್‌

ಪೊಕೊ F6 ಮೊಬೈಲ್‌ 6.67 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಡಿಸ್‌ಪ್ಲೇಯು 2712 x 1220 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ಡಿಸ್‌ಪ್ಲೇಯು 2400 nits ಬ್ರೈಟ್ನೆಸ್‌ ಸಪೋರ್ಟ್‌ ಹೊಂದಿದ್ದು, ಇದರ ಜೊತೆಗೆ 120Hz ರಿಫ್ರೆಶ್‌ ರೇಟ್‌ ಬೆಂಬಲ ಸಹ ಇದೆ. ಅಲ್ಲದೇ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8s ಜನ್ 3 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 OS ಸಪೋರ್ಟ್‌ ಸಹ ಇದೆ.

ಹಾಗೆಯೇ ಈ ಫೋನ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಕ್ಯಾಮೆರಾ ಸಾಮರ್ಥ್ಯದಲ್ಲಿ ಇದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದ್ದು, ಇದರೊಂದಿಗೆ 90W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ.

ವಿವೋ V30e ಮೊಬೈಲ್‌

ವಿವೋ V30e ಮೊಬೈಲ್‌ 6.78 ಇಂಚಿನ ಫುಲ್‌ ಹೆಚ್‌ಡಿ + ಕರ್ವ್ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ ಹೊಂದಿದ್ದು, 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಸ್ನಾಪ್‌ಡ್ರಾಗನ್ 6 ಜನ್ 1 ಪ್ರೊಸೆಸರ್‌ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಪಡೆದಿದೆ. ಹಾಗೆಯೇ ಈ ಫೋನ್‌ 8GB + 128GB ಹಾಗೂ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ.

ವಿವೋ V30e ಫೋನ್ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ನಲ್ಲಿ ಇದೆ. 5500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ನೀಡಲಾಗಿದೆ.

ರೆಡ್ಮಿ ನೋಟ್‌ 13 ಪ್ರೊ+ ಮೊಬೈಲ್‌

ರೆಡ್ಮಿ ನೋಟ್‌ 13 ಪ್ರೊ+ ಮೊಬೈಲ್‌ 6.67 ಇಂಚಿನ OLED ಡಿಸ್‌ಪ್ಲೇ ಸೌಲಭ್ಯ ಪಡೆದಿದ್ದು, ಈ ಡಿಸ್‌ಪ್ಲೇ 1220 x 2712 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಪಡೆದಿದ್ದು, 20:9 ರಚನೆಯ ಅನುಪಾತದೊಂದಿಗೆ ಬರಲಿದೆ. ಇದಲ್ಲದೆ ಡಿಸ್‌ಪ್ಲೇ ಪ್ಯಾನೆಲ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆಯನ್ನು ಹೊಂದಿದೆ.

ಅಲ್ಲದೇ ಇದು ಆಕ್ಟಾ-ಕೋರ್ ಡೈಮೆನ್ಸಿಟಿ 7200 ಅಲ್ಟ್ರಾ SoC ಪ್ರೊಸೆಸರ್‌ ಪವರ್‌ ಹೊಂದಿದ್ದು, ಆಂಡ್ರಾಯ್ಡ್‌ 13 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 512GB ಸ್ಟೋರೇಜ್‌ ಸಾಮರ್ಥ್ಯದಲ್ಲಿ ಇದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್‌ ಸೆನ್ಸಾರ್‌ ನಲ್ಲಿ ಇದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
Few Best camera Smartphones under Rs 30,000 in India. check phone list here and specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+