ಕಡಿಮೆ ಬೆಲೆಯಲ್ಲಿ 50ಎಂಪಿ ಕ್ಯಾಮೆರಾ ಫೋನ್ ಬೇಕಿದ್ರೆ, ಇಲ್ಲಿವೆ ನೋಡಿ ಬೆಸ್ಟ್ ಆಯ್ಕೆ!
ಪ್ರಸ್ತುತ ಮೊಬೈಲ್‌ಗಳಲ್ಲಿ ಅತ್ಯುತ್ತಮ ಕ್ಯಾಮೆರಾ ಆಯ್ಕೆ ಮುಖ್ಯ ಎನಿಸಿಕೊಂಡಿದೆ. ಹೀಗಾಗಿ ಮೊಬೈಲ್ ಸಂಸ್ಥೆಗಳು ಸಹ ಕ್ಯಾಮೆರಾ ಸೆನ್ಸಾರ್ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿವೆ. ಇನ್ನು ಹೊಸ ಮೊಬೈಲ್ ಖರೀದಿಸುವ ಗ್ರಾಹಕರು ಸಹ ಕ್ಯಾಮೆರಾ ಸೆನ್ಸಾರ್ ಬಗ್ಗೆ ಗಮನ ನೀಡುತ್ತಾರೆ. ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ ಇತ್ತೀಚಿನ ಹಲವು ಬಜೆಟ್ ದರದ ಹಾಗೂ ಕಡಿಮೆ ಬೆಲೆಯ ಫೋನ್‌ಗಳಲ್ಲಿಯೂ 50 ಮೆಗಾಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಆಯ್ಕೆಯನ್ನು ಕಾಣಬಹುದಾಗಿದೆ. ಈ ನಿಟ್ಟಿನಲ್ಲಿ ಅನೇಕ ಖರೀದಿದಾರರು ಬಜೆಟ್ ದರದಲ್ಲಿ ಲಭ್ಯ ಇರುವ 50 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಫೋನ್ ಆಯ್ಕೆ ಮಾಡುತ್ತಾರೆ.
ಹೌದು, ಇತ್ತೀಚಿನ ಬಹುತೇಕ ಬಜೆಟ್ ದರದ ಸ್ಮಾರ್ಟ್‌ಫೋನ್‌ಗಳು ಡ್ಯುಯಲ್ ಕ್ಯಾಮೆರಾ (camera) ಆಯ್ಕೆ ಪಡೆದಿದ್ದು, ಅವುಗಳಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸಲ್ ಸೆನ್ಸಾರ್ ಸೌಲಭ್ಯ ಪಡೆದಿರುತ್ತದೆ. ಇದರೊಂದಿಗೆ ಕೆಲವು ಮೊಬೈಲ್‌ಗಳು ಅತ್ಯುತ್ತಮ ಸೆಲ್ಫಿ ಕ್ಯಾಮೆರಾ ಸೌಲಭ್ಯವನ್ನು ಸಹ ನೀಡಿರುತ್ತವೆ. ಸದ್ಯ ನೀವೇನಾದರೂ ಕಡಿಮೆ ಬೆಲೆಯಲ್ಲಿ 50ಎಂಪಿ ಕ್ಯಾಮೆರಾ ಫೋನ್ ಖರೀದಿಸಲು ಪ್ಲ್ಯಾನ್ ಮಾಡಿದ್ದರೆ, ಈ ಲೇಖನ ನಿಮಗೆ ಹೆಚ್ಚು ಉಪಯುಕ್ತ ಎನಿಸಲಿದೆ. ಮುಂದೆ ಓದಿರಿ.

ವಿವೋ T3x 5G ಸ್ಮಾರ್ಟ್‌ಫೋನ್
ವಿವೋ T3x 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯ ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್ 6.72 ಇಂಚಿನ ಡಿಸ್‌ಪ್ಲೇ ಜೊತೆಗೆ 120 Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿದೆ. ಇದು ಫುಲ್ ಹೆಚ್‌ಡಿ + 2408 - 1080 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ ಪಡೆದಿದೆ.
ಹಾಗೆಯೇ ಇದು ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದ್ದು, ಇದರೊಂದಿಗೆ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಇನ್ನು ಈ ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪ್ರಯೋಜನ ಪಡೆದಿದ್ದು, 44W ಫ್ಲ್ಯಾಶ್ ಚಾರ್ಜ್ ಅನ್ನು ಸಪೋರ್ಟ್ ಇದೆ. ಫ್ಲಿಪ್‌ಕಾರ್ಟ್‌ನಲ್ಲಿ ಇದರ ಆರಂಭಿಕ ಬೆಲೆಯ 14,999ರೂ. ಇದೆ.
ರಿಯಲ್‌ಮಿ 12X 5G ಸ್ಮಾರ್ಟ್‌ಫೋನ್
ರಿಯಲ್‌ಮಿ ಸಂಸ್ಥೆಯ ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇನ್ನು ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಹಾಗೆಯೇ 6.72 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ರಚನೆ ಅನ್ನು ಪಡೆದಿದ್ದು, ಹಾಗೆಯೇ 1080 x 2400 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಒಳಗೊಂಡಿದೆ.
ಇದರೊಂದಿಗೆ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಇದೆ. ಅಲ್ಲದೇ 5000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದಕ್ಕೆ ಅನುಗುಣವಾಗಿ 45W SuperVOOC ಚಾರ್ಜಿಂಗ್ ಸಪೋರ್ಟ್ ಪಡೆದಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಇದರ ಆರಂಭಿಕ ಬೆಲೆಯ 14,999ರೂ. ಇದೆ.
ಪೊಕೊ M6 5G ಸ್ಮಾರ್ಟ್‌ಫೊನ್
ಪೊಕೊ M6 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇನ್ನು ಇದು 6.74 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಅಲ್ಲದೇ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಸಪೋರ್ಟ್ ಮಾಡಲಿದೆ.
ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಇದೆ. ಇದರ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಇದರ ಆರಂಭಿಕ ಬೆಲೆಯ 9,999ರೂ. ಇದೆ.


Click it and Unblock the Notifications








