Home
ಕ್ಯಾಮೆರಾ

ನೀವು ಅತ್ಯುತ್ತಮ ಕ್ಯಾಮೆರಾ ಫೋನ್ ಖರೀದಿಸಬೇಕೇ? 25 ಸಾವಿರದ ಬಜೆಟ್​​​ನಲ್ಲಿವೆ ಈ ಮೊಬೈಲ್‌ಗಳು!

Best Camera Phones: ನೀವು 25 ಸಾವಿರ ರೂ.ಗ ಒಳಗಿನ ಅತ್ಯುತ್ತಮ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳನ್ನು ಹುಡುಕುತ್ತಿದ್ದೀರಾ? ನೀವು ಉತ್ತಮ ಕ್ಯಾಮೆರಾ ಸೆಟಪ್‌ನೊಂದಿಗೆ ಹೊಸ ಮೊಬೈಲ್ ಖರೀದಿಸಲು ಬಯಸಿದ್ದೀರಾ? ಅದರಲ್ಲೂ ನಿಮ್ಮ ಬಜೆಟ್ 25,000 ರೂ. ಆಗಿದ್ದರೆ, ಈ ಮೊಬೈಲ್​​ಗಳು ನಿಮಗೆ ಉತ್ತಮ ಆಯ್ಕೆಯಾಗಲಿವೆ. ಫೋಟೋಗ್ರಫಿ ಇಷ್ಟಪಡುವವರಿಗೆ ತುಂಬಾ ಒಳ್ಳೆಯ ಸ್ಮಾರ್ಟ್​ಫೋನ್​ ಆಗಿವೆ. ಈ ಬಗ್ಗೆ ಸಂಪೂರ್ಣವಾದ ಮಾಹಿತಿ ಇಲ್ಲಿದೆ.

ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಉನ್ನತ ಬ್ರಾಂಡ್ ಮೊಬೈಲ್‌ಗಳಿಗೆ ಕೊರತೆ ಇಲ್ಲ. ಐಫೋನ್, ಸ್ಯಾಮ್‌ಸಂಗ್‌ ಕಂಪನಿಯ ಫೋನ್‌ಗಳಿಂದಿಡಿದು ರೆಡ್ಮಿ, ಶಿಯೋಮಿ ಮತ್ತು ಒನ್‌ಪ್ಲಸ್‌ ಸೇರಿದಂತೆ ಎಲ್ಲಾ ರೀತಿಯ ಬ್ರಾಂಡ್ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಲಭ್ಯವಿದೆ. ಈ ಲೇಖನದಲ್ಲಿ 25 ಸಾವಿರ ರೂ. ಬಜೆಟ್‌ನಲ್ಲಿ ಉತ್ತಮ ಕ್ಯಾಮೆರಾ ವೈಶಿಷ್ಟ್ಯಗಳೊಂದಿಗೆ ಇರುವ ಟಾಪ್ 5 ಅತ್ಯುತ್ತಮ ಮೊಬೈಲ್‌ಗಳ ಬಗ್ಗೆ ತಿಳಿಯೋಣ ಬನ್ನಿ.

Best Camera Phones: 25 ಸಾವಿರದ ಬಜೆಟ್​​​ನಲ್ಲಿವೆ ಈ ಮೊಬೈಲ್‌ಗಳು! ಪಟ್ಟಿ ನೋಡಿ

ಐಕ್ಯೂ Z9s ಪ್ರೊ: ಬೆಲೆ 24,999 ರೂ.

25 ಸಾವಿರ ರೂ ಬಜೆಟ್‌ನಲ್ಲಿ ಲಭ್ಯವಿರುವ ಅತ್ಯುತ್ತಮ ಫೋನ್‌ಗಳಲ್ಲಿ ಐಕ್ಯೂ Z9s ಪ್ರೊ (iQOO Z9s Pro) ಒಂದಾಗಿದೆ. ಈ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾವನ್ನು ಹೊಂದಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, 8 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. ಇದರ ಕ್ಯಾಮೆರಾ ಕಾರ್ಯಕ್ಷಮತೆಯು ಪ್ರಬಲವಾಗಿದೆ ಮತ್ತು ಫೋಕಸ್ ವೇಗವಾಗಿದೆ.

ಇದು 120Hz ರಿಫ್ರೆಶ್ ದರದೊಂದಿಗೆ 6.77 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 3 ಪ್ರೊಸೆಸರ್ ಅನ್ನು ಹೊಂದಿದೆ. 12GB ವರೆಗೆ RAM ಮತ್ತು 256GB ಸ್ಟೋರೇಜ್, 5,500mAh ಸಾಮರ್ಥ್ಯದ ಬ್ಯಾಟರಿ ಮತ್ತು 80W ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಮೊಟೊರೊಲಾ ಎಡ್ಜ್ 50 ಫ್ಯೂಷನ್: 22,999 ರೂ.

ಮೊಟೊರೊಲಾ ಎಡ್ಜ್ 50 ಫ್ಯೂಷನ್ (Motorola Edge 50 Fusion) ಫೋನ್ 50 ಮೆಗಾಪಿಕ್ಸೆಲ್ OIS ಪ್ರಾಥಮಿಕ ಕ್ಯಾಮೆರಾ, 13 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ. ಪ್ರಾಥಮಿಕ ಕ್ಯಾಮೆರಾ ಅದ್ಭುತ ಫೋಟೋಗಳನ್ನು ನೀಡುತ್ತದೆ. ಪೋಟ್ರೇಟ್ ಮತ್ತು ರಾತ್ರಿ ಮೋಡ್‌ಗಳಲ್ಲಿ ಫೋನ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.

ಈ ಫೋನ್ 144Hz ರಿಫ್ರೆಶ್ ದರದೊಂದಿಗೆ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಪೋಲ್ಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7S ಜೆನ್ 2 ಪ್ರೊಸೆಸರ್‌ ಅನ್ನು ಹೊಂದಿದೆ. ಈ ಫೋನ್‌ 12GB ವರೆಗೆ RAM ಮತ್ತು 512GB ಸ್ಟೋರೇಜ್, 5000mAh ಸಾಮರ್ಥ್ಯದ ಬ್ಯಾಟರಿ, 68W ವೇಗದ ಚಾರ್ಜಿಂಗ್ ಅನ್ನು ಒಳಗೊಂಡಿದೆ.

ಒನ್‌ಪ್ಲಸ್ ನಾರ್ಡ್ CE4: 24,999 ರೂ.

ಒನ್‌ಪ್ಲಸ್ ನಾರ್ಡ್ CE4 (OnePlus Nord CE 4) ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 50 ಮೆಗಾಪಿಕ್ಸೆಲ್ OIS ಮುಖ್ಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾವನ್ನು ಒಳಗೊಂಡಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ. ಇದರ ಕ್ಯಾಮೆರಾ ವೈಶಿಷ್ಟ್ಯಗಳು ಅದ್ಭುತವಾಗಿದೆ

ಈ ಸ್ಮಾರ್ಟ್‌ಫೋನ್ 120Hz ರಿಫ್ರೆಶ್‌ ದರದೊಂದಿಗೆ 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಅಮೋಲೆಡ್‌ ಡಿಸ್ಪ್ಲೇನ್ನು ಹೊಂದಿದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 3 ಪ್ರೊಸೆಸರ್‌ ಅನ್ನು ಹೊಂದಿದೆ. ಇದು 8GB ವರಗೆ RAM, 256GB ಸ್ಟೋರೇಜ್‌, 5500mAh ಸಾಮರ್ಥ್ಯದ ಬ್ಯಾಟರಿ ಮತ್ತು 100W ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಸುದ್ದಿ ಓದಿದ್ದಿರಾ?: 48MP ಕ್ಯಾಮೆರಾ, 5G ಫೋನ್.. ಕೇವಲ 8,749 ರೂ.ಗೆ ಲಭ್ಯ! ಎಲ್ಲಿ?

ನಥಿಂಗ್ ಫೋನ್ (2A): 23,999 ರೂ.

ನಥಿಂಗ್ ಫೋನ್ (2a) (Nothing Phone 2a) ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಲಭ್ಯವಿದೆ. ಫೋಟೋಗ್ರಫಿ ಇಷ್ಟಪಡುವವರಿಗೆ ಇದು ತುಂಬಾ ಒಳ್ಳೆಯ ಸ್ಮಾರ್ಟ್​ಫೋನ್​ ಆಗಿದೆ.

ನಥಿಂಗ್ ಫೋನ್ (2a) ಫೋನ್ 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರವನ್ನು ಒಳಗೊಂಡಿದೆ. ಇದರಲ್ಲಿ ಮೀಡಿಯಾ ಟೆಕ್ ಡೈಮೆನ್ಶನ್ 7200 ಪ್ರೊ ಚಿಪ್‌ಸೆಟ್ ಲಭ್ಯವಿದೆ. ಇದರೊಂದಿಗೆ, 12GB ವರೆಗೆ RAM, 256GB ಸ್ಟೋರೇಜ್, 5000mAh ಸಾಮರ್ಥ್ಯದ ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ರೆಡ್ಮಿ ನೋಟ್ 13 ಪ್ರೊ: 23,999 ರೂ.

ರೆಡ್ಮಿ ನೋಟ್ 13 ಪ್ರೊ (Redmi Note 13 Pro) ಸ್ಮಾರ್ಟ್‌ಫೋನ್ 200 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ, 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಲಭ್ಯವಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. ಅದ್ಭುತ ಕ್ಲಾರಿಟಿ ಫೋಟೋಗಳು ಮತ್ತು ವಿಡಿಯೋಗಳನ್ನು ತೆಗೆದುಕೊಳ್ಳಲು ಇದು ಉತ್ತಮವಾಗಿದೆ.

ರೆಡ್ಮಿ ನೋಟ್ 13 ಪ್ರೊ ಮೊಬೈಲ್ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ.ಇದು 120Hz ರಿಫ್ರೆರ್ಶ್ ದರದೊಂದಿಗೆ ಬರುತ್ತದೆ. ಕಂಪನಿಯು ಈ ಫೋನನ್ನು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 2 ಪ್ರೊಸೆಸರ್‌ನೊಂದಿಗೆ ಪರಿಚಯಿಸಿದೆ. ಇದು 12GB ವರೆಗೆ RAM ಮತ್ತು 512GB ಸ್ಟೋರೇಜ್‌ ಅನ್ನು ಒಳಗೊಂಡಿದೆ. ಜೊತೆಗೆ, 5100mAh ಸಾಮರ್ಥ್ಯದ ಬ್ಯಾಟರಿ ಮತ್ತು 67W ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Best Mobiles in India

English summary
Top 5 Best Camera Phones Under Rs 25000 October 2024: Check Phones list and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+