Home
ಕ್ಯಾಮೆರಾ

ನಿಮಗೆ ಅತ್ಯುತ್ತಮ ಕ್ಯಾಮೆರಾ ಇರುವ ಫೋನ್‌ ಬೇಕಿದ್ರೆ, ಈ ಲಿಸ್ಟ್‌ ಒಮ್ಮೆ ನೋಡಿ!

ಪ್ರಿಯ ಗ್ರಾಹಕರೇ ಮೊಬೈಲ್‌ ಫೋಟೋಗ್ರಫಿ ಮಾಡಲು ಇಷ್ಟ ಇದೆಯಾ? ಹೀಗಾಗಿ ಒಂದು ಅತ್ಯುತ್ತಮ ಕ್ಯಾಮೆರಾ ಮೊಬೈಲ್‌ ನಿಮಗೆ ಅಗತ್ಯ ಇದೆಯಾ? ಹಾಗಿದ್ರೆ ಖಂಡಿತಾವಾಗಿಯು ನಿಮಗೆ ಕೆಲವು ಅತ್ಯುತ್ತಮ ಮೊಬೈಲ್‌ಗಳ ಆಯ್ಕೆ ಲಭ್ಯ ಇದೆ. ಇತ್ತೀಚಿಗೆ ಮೊಬೈಲ್‌ ಸಂಸ್ಥೆಗಳು ಕ್ಯಾಮೆರಾ ವಿಭಾಗಕ್ಕೆ ಹೆಚ್ಚಿನ ಪ್ರಾದಾನ್ಯ ನೀಡುತ್ತಿದ್ದು, ಸುಮಾರು 50,000ರೂ. ಗಳ ವಿಭಾಗದಲ್ಲಿ ಕೆಲವು ಉತ್ತಮ ಕ್ಯಾಮೆರಾ ಮೊಬೈಲ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಇವು ಮೊಬೈಲ್‌ ಫೋಟೋಗ್ರಫಿ ಆಸಕ್ತರನ್ನು ಸೆಳೆದಿವೆ. ಮುಖ್ಯವಾಗಿ ಇತ್ತೀಚಿನ ಕ್ಯಾಮೆರಾ ಫೋನ್‌ಗಳಲ್ಲಿ 50 ಮೆಗಾಪಿಕ್ಸಲ್‌ ಸೆನ್ಸಾರ್ ಸೌಲಭ್ಯ ಎನಿಸಿವೆ.

ಹೌದು, ಪ್ರಸ್ತುತ ಬಹುತೇಕ ನೂತನ ಸ್ಮಾರ್ಟ್‌ಫೋನ್‌ಗಳು ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಅವುಗಳಲ್ಲಿ ಮೊದಲ ಕ್ಯಾಮೆರಾ 50 ಮೆಗಾಪಿಕ್ಸಲ್‌ ಸೆನ್ಸಾರ್‌ ಸೌಲಭ್ಯ ಒಳಗೊಂಡಿವೆ. ಕೆಲವು ಮಿಡ್‌ರೇಂಜ್‌ ದರದ ಮೊಬೈಲ್‌ಗಳು ಕೂಡಾ 50 ಮೆಗಾಪಿಕ್ಸಲ್‌ ಕ್ಯಾಮೆರಾ ಸೆನ್ಸಾರ್‌ ಪಡೆದಿವೆ. ನೀವೇನಾದರೂ 50000ರೂ. ಗಳ ಬೆಲೆಯಲ್ಲಿ ಅತ್ಯುತ್ತಮ ಕ್ಯಾಮೆರಾ ಸ್ಮಾರ್ಟ್‌ಫೋನ್‌ ಖರೀದಿಸಲು ಪ್ಲ್ಯಾನ್ ಮಾಡಿದ್ದರೆ, ಈ ಲೇಖನ ನಿಮಗೆ ಉಪಯುಕ್ತ ಎನಿಸಲಿದೆ. ಮುಂದೆ ಓದಿರಿ.

ನಿಮಗೆ ಅತ್ಯುತ್ತಮ ಕ್ಯಾಮೆರಾ ಇರುವ ಫೋನ್‌ ಬೇಕಿದ್ರೆ, ಈ ಲಿಸ್ಟ್‌ ಒಮ್ಮೆ ನೋಡಿ!

ಒನ್‌ಪ್ಲಸ್‌ 12R ಮೊಬೈಲ್‌

ಒನ್‌ಪ್ಲಸ್‌ 12R ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾವನ್ನು ಸೆಟ್‌ಅಪ್‌ ಅನ್ನು ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ಹಾಗೆಯೇ ಈ ಫೋನ್‌ 6.78 ಇಂಚಿನ BOE X1 OLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1,264x2,780 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಅಲ್ಲದೇ ಇದು ಸ್ನಾಪ್‌ಡ್ರಾಗನ್‌ 8 ಜೆನ್‌ 2 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 14 ಓಎಸ್‌ ಸಪೋರ್ಟ್‌ ಹೊಂದಿದೆ. ಇದು 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದೆ. ಇದಕ್ಕೆ ಪೂರಕವಾಗಿ 100W SuperVOOC ವೈರ್ಡ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ.

ಶಿಯೋಮಿ 14 ಸಿವಿ ಮೊಬೈಲ್‌

ಶಿಯೋಮಿ 14 ಸಿವಿ ಮೊಬೈಲ್‌ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 6.55 ಇಂಚಿನ 1.5K ಕರ್ವ್ಡ್ AMOLED ಡಿಸ್‌ಪ್ಲೇ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ 120Hz ರಿಫ್ರೆಶ್ ರೇಟ್ ಹಾಗೂ 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಸೌಲಭ್ಯ ಇದೆ.

ಇದರೊಂದಿಗೆ ಸ್ನಾಪ್‌ಡ್ರಾಗನ್ 8s ಜೆನ್‌ 3 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಇದೆ. ಅಲ್ಲದೇ ಇದು 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 67W ವೈರ್ಡ್ ಚಾರ್ಜಿಂಗ್‌ ಸೌಲಭ್ಯ ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಮೊಬೈಲ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಇದು Exynos 1480 SoC ಪ್ರೊಸೆಸರ್‌ ವೇಗವನ್ನು ಪಡೆದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

Best Mobiles in India

English summary
Top camera Mobiles under Rs 50,000 in India 2024. check phone list and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+