ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಬಂಪರ್: ಎಲ್ಲರಿಗೂ ಉಚಿತ ಲ್ಯಾಪ್‌ಟಾಪ್ ಭಾಗ್ಯ..!!

ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಓದುತ್ತಿರುವ 1.5 ಲಕ್ಷ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

|

ರಾಜ್ಯ ಸರಕಾರವೂ ರೈತರ ಸಾಲ ಮನ್ನ ಮಾಡಿದ ಮಾದರಿಯಲ್ಲಿಯೇ ರಾಜ್ಯದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಲು ಮುಂದಾಗಿದೆ. ಈ ಮೂಲಕ ಶೈಕ್ಷಣಿಕ ಪ್ರೋತ್ಸಾಹಕ್ಕೆ ಮುಂದಾಗಿದೆ.

ಸರ್ಕಾರಿ ಕಾಲೇಜು  ವಿದ್ಯಾರ್ಥಗಳಿಗೆ ಬಂಪರ್: ಎಲ್ಲರಿಗೂ ಉಚಿತ ಲ್ಯಾಪ್‌ಟಾಪ್ ಭಾಗ್ಯ

ಓದಿರಿ: ಯುವತಿಯರೇ ಎಚ್ಚರ..! ಸೋಶಿಯಲ್ ಮಿಡಿಯಾಗಳಲ್ಲಿ ಫೋಟೋ ಪೋಸ್ಟ್ ಮಾಡುವ ಮುನ್ನ..!!!

ಅದುವೇ ಸರಕಾರಿ ಕಾಲೇಜು ಶಿಕ್ಷಣವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಓದುತ್ತಿರುವ 1.5 ಲಕ್ಷ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಯಾರಿಗೆ ಸಿಗಲಿದೆ ಲ್ಯಾಪ್‌ಟಾಪ್ ಭಾಗ್ಯ..?

ಯಾರಿಗೆ ಸಿಗಲಿದೆ ಲ್ಯಾಪ್‌ಟಾಪ್ ಭಾಗ್ಯ..?

ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಎಂಜಿನಿಯರಿಂಗ್‌, ವೈದ್ಯಕೀಯ, ದಂತ ವೈದ್ಯಕೀಯ, ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್‌ ಹಾಗೂ ಡಿಪ್ಲೊಮಾದಲ್ಲಿ ಮೊದಲ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಈ ಭಾಗ್ಯ ಸಿಗಲಿದೆ.

ಖಾಸಗಿ ಕಾಲೇಜು ವಿಧ್ಯಾರ್ಥಿಗಳಿಗೆ ಇಲ್ಲ:

ಖಾಸಗಿ ಕಾಲೇಜು ವಿಧ್ಯಾರ್ಥಿಗಳಿಗೆ ಇಲ್ಲ:

ಸರ್ಕಾರಿ ಕೋಟಾದಡಿ ಖಾಸಗಿ ವೈದ್ಯಕೀಯ, ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಸಿಗುವುದಿಲ್ಲ ಎಂದು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

300 ಕೋಟಿ ಖರ್ಚು:

300 ಕೋಟಿ ಖರ್ಚು:

ವಾರ್ಷಿಕ ₹2.5 ಲಕ್ಷ ಆದಾಯ ಮಿತಿಯಲ್ಲಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ₹300 ಕೋಟಿ ಖರ್ಚು ಮಾಡಲಾಗುತ್ತಿದೆ.

ಅನಿಮೇಷನ್ ನಲ್ಲಿ 20 ಸಾವಿರ ಉದ್ಯೋಗ ಸೃಷ್ಟಿ:

ಅನಿಮೇಷನ್ ನಲ್ಲಿ 20 ಸಾವಿರ ಉದ್ಯೋಗ ಸೃಷ್ಟಿ:

ಇದಲ್ಲದೇ ರಾಜ್ಯ ಸರಕಾರವೂ ಹೊಸ ಪಾಲಿಸಿಯನ್ನು ಜಾರಿಗೆ ತಂದಿದ್ದು, ಇದರ ಮೂಲಕ ಅನಿಮೇಷನ್, ವಿಷ್ಯುಯಲ್ ಎಫೆಕ್ಟ್, ಗೇಮಿಂಗ್ ವಿಭಾಗದಲ್ಲಿ ಹೆಚ್ಚಿನ ಹೂಡಿಕೆಗೆ ಅವಕಾಶ ಮಾಡಿಕೊಡಲು ಮುಂದಾಗಿದ್ದು, ಇದರಿಂದ 20,000 ಉದ್ಯೋಗಳ ಸೃಷ್ಠಿಯಾಗಲಿದೆ.

Best Mobiles in India

Read more about:
English summary
The state cabinet has approved to distribute laptops free of cost to 1.5 lakh students who got admission in government and aided medical, engineering, first grade and polytechnic colleges in the stateto know more visit kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X