ದೊಡ್ಡ ಡಿಸ್ಕೌಂಟ್! 108MP ಕ್ಯಾಮೆರಾ.. 5000mAh ಬ್ಯಾಟರಿ.. ಕೇವಲ 11,999 ರೂ.! ಯಾವ ಫೋನ್?
ಟೆಕ್ನೋ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳ ಮೂಲಕ ಭಾರೀ ಸದ್ದು ಮಾಡುತ್ತಿದೆ. ಆಗಾಗ್ಗೆ ಈ ಫೋನ್‌ಗಳ ಮೇಲೆ ರಿಯಾಯಿತಿ ನೀಡುವ ಮೂಲಕ ಗ್ರಾಹಕರನ್ನು ಸೆಳೆಯುತ್ತಿದೆ. ಅದರಂತೆ, ಟೆಕ್ನೋ ಪೋವಾ 6 ನಿಯೋ 5G (Tecno POVA 6 Neo 5G) ಫೋನಿನ ಮೇಲೆ ಬೊಂಬಾಟ್ ಆಫರ್ ಘೋಷಿಸಿದೆ. ಹೌದು, ಅಮೆಜಾನ್‌ನಲ್ಲಿ ಈ ಫೋನ್ ಶೇ.18 ರಷ್ಟು ರಿಯಾಯಿತಿ ಪಡೆದಿದೆ. ನೀವು 12,000 ಸಾವಿರ ರೂ.ಗಳ ಬಜೆಟ್‌ನಲ್ಲಿ ಹೊಸ ಫೋನ್ ಖರೀದಿಸಲು ಬಯಸಿದರೆ, ಇದು ಉತ್ತಮ ಆಯ್ಕೆಯಾಗಿದೆ. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
Tecno POVA 6 Pro ಮತ್ತು Tecno POVA 6 Neo 5G ಫೋನ್‌ಗಳ ಬಳಿಕ, ಇದೀಗ ಕಂಪನಿಯು ಅದೇ ಸರಣಿಯಲ್ಲಿ Tecno POVA 6 5G ಫೋನನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಮೊಬೈಲ್ ಮಾರುಕಟ್ಟೆಗೆ ಬರುವ ಮೊದಲೇ, ಟೆಕ್ನೋ ಪೋವಾ 6 ನಿಯೋ ಫೋನನ್ನು ಭಾರರೀ ರಿಯಾಯಿತಿಯೊಂದಿಗೆ ಮಾರಾಟ ಮಾಡಲಾಗುತ್ತಿದೆ. ಈ ಈ ಫೋನಿನಲ್ಲಿ 108 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿದೆ. ಜೊತೆಗೆ 6.67 ಇಂಚಿನ ಡಿಸ್ಪ್ಲೇ, 5000mAh ಬ್ಯಾಟರಿ, 18W ವೇಗದ ಚಾರ್ಜಿಂಗ್ ಒಳಗೊಂಡಿದೆ.

ಟೆಕ್ನೋ ಪೋವಾ 6 ನಿಯೋ 5G ರಿಯಾಯಿತಿ
ಟೆಕ್ನೋ ಪೋವಾ 6 ನಿಯೋ 5G ಮೊಬೈಲ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 13,999 ರೂ. ಆಗಿದೆ. ಹಾಗೆಯೇ 8GB + 256GB ಸ್ಟೋರೇಜ್ ರೂಪಾಂತರವು 14,999 ರೂ. ಬೆಲೆಗೆ ಮಾರಾಟವಾಗುತ್ತಿದೆ. ಪ್ರಸ್ತುತ, ಅಮೆಜಾನ್‌ನಲ್ಲಿ 8GB RAM ರೂಪಾಂತರದ ಮೇಲೆ 1,000 ರೂ.ಗಳ ಕೂಪನ್ ರಿಯಾಯಿತಿ ಲಭ್ಯವಿದೆ. ಇದು ಎಲ್ಲಾ ಗ್ರಾಹಕರಿಗೆ ಲಭ್ಯವಿದೆ. ನೀವು ಈ ರಿಯಾಯಿತಿಯೊಂದಿಗೆ ಕೇವಲ 12,999 ರೂ.ಗೆ ಫೋನನ್ನು ಖರೀದಿಸಬಹುದು.
ಜೊತೆಗೆ 1,000 ರೂ. ಬ್ಯಾಂಕ್ ಆಫರ್ ನೀಡಲಾಗುತ್ತಿದೆ. ಅಂದರೆ ಎಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ 6 ತಿಂಗಳು ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಇಎಂಐ ಮೇಲೆ ಶೇ.10 ರಷ್ಟು ರಿಯಾಯಿತಿ ಸಿಗುತ್ತದೆ. ಅದೇ ರೀತಿ, ಐಡಿಎಫ್‌ಸಿ ಫಸ್ಟ್, ಎಚ್‌ಎಸ್‌ಬಿಸಿ, ಫೆಡರಲ್ ಬ್ಯಾಂಕ್ ಮೇಲೆ 1,000 ರೂ. (7.5%) ಡಿಸ್ಕೌಂಟ್ ನೀಡಲಾಗುತ್ತಿದೆ. ಇದರೊಂದಿಗೆ ಈ ಫೋನಿನ ಬೆಲೆ 11,999 ರೂ.ಗೆ ಇಳಿಯಾಗಲಿದೆ. ಈ ಫೋನ್ ಮಿಡ್‌ನೈಟ್ ಶಾಡೋ, ಅಜುರೆ ಸ್ಕೈ ಮತ್ತು ಅರೋರಾ ಕ್ಲೌಡ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದೆ.
ಟೆಕ್ನೋ ಪೋವಾ 6 ನಿಯೋ 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಟೆಕ್ನೋ ಪೋವಾ 6 ನಿಯೋ 5G ಸ್ಮಾರ್ಟ್‌ಫೋನ್ 6.67 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 720×1600 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 240Hz ಸ್ಪರ್ಶ ಮಾದರಿ ದರ ಮತ್ತು 480 ನಿಟ್ಸ್‌ಗಳ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಯಾವುದು?
ಟೆಕ್ನೋ ಪೋವಾ 6 ನಿಯೋ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿದೆ. ಇದನ್ನು 6 ನ್ಯಾನೋಮೀಟರ್ ಪ್ರಕ್ರಿಯೆಯಲ್ಲಿ ನಿರ್ಮಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ HiOS 14.5 ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಈ ಫೋನ್ ಮಾಲಿ G57 MC2 ಜಿಪಿಯು ಸಹ ಹೊಂದಿದೆ.

108MP ಡ್ಯುಯಲ್ ಕ್ಯಾಮೆರಾ ಸೆಟಪ್
ಟೆಕ್ನೋ ಪೋವಾ 6 ನಿಯೋ 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು AI (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನದೊಂದಿಗೆ ಎರಡನೇ ಲೆನ್ಸ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಟೆಕ್ನೋ ಪೋವಾ 6 ನಿಯೋ 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 18W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದು ಲೈಟ್ ಸೆನ್ಸರ್, ಎಐ ಸೂಟ್, AIGC, ಎಐ ಮ್ಯಾಜಿಕ್ ಎರೇಸರ್, ಎಐ ಕಟೌಟ್, ಎಐ ವಾಲ್‌ಪೇಪರ್, ಎಐ ಆರ್ಟ್‌ಬೋರ್ಡ್, Ask AI ಸೇರಿದಂತೆ ಹಲವು ಎಐ ವೈಶಿಷ್ಟ್ಯಗಳನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ಡ್ಯುಯಲ್ ಸಿಮ್ 5G, ವೈ-ಫೈ, ಬ್ಲೂಟೂತ್, ಇನ್ಫ್ರಾರೆಡ್ ಸೆನ್ಸರ್, ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








