ಅತ್ಯಂತ ಅಗ್ಗದ ಬೆಲೆ! 50MP ಕ್ಯಾಮೆರಾ.. 128GB ಸ್ಟೋರೇಜ್.. ಹೊಸ Redmi ಫೋನಿನ ಬೆಲೆ ಕುಸಿತ!
ರೆಡ್ಮಿ ಸಂಕ್ರಾಂತಿ ಹಬ್ಬಕ್ಕೂ ಮೊದಲೇ ತನ್ನ ಹೊಸ ಫೋನಿನ ಬೆಲೆಯನ್ನು ಇಳಿಕೆ ಮಾಡಿದೆ. ಈ ಮೂಲಕ ಮೊಬೈಲ್ ಪ್ರಿಯರನ್ನು ಆಕರ್ಷಿಸುತ್ತಿದೆ. ಹೌದು, ರೆಡ್ಮಿ A4 5G (Redmi A4 5G) ಫೋನಿನ ಖರೀದಿ ಮೇಲೆ ಆಕರ್ಷಕ ರಿಯಾಯಿತಿ ಘೋಷಿಸಿದೆ. ಪ್ರಸ್ತುತ ಅಮೆಜಾನ್‌ನಲ್ಲಿ ಶೇ.21 ರಷ್ಟು ರಿಯಾಯಿತಿ ಲಭ್ಯವಿದೆ. ನೀವು ಈ ಅಗ್ಗದ ರೆಡ್ಮಿ 5G ಫೋನನ್ನು 9 ಸಾವಿರಕ್ಕಿಂತ ಕಡಿಮೆ ಬೆಲೆಗೆ ಖರೀದಿಸಬಹುದು. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ರೆಡ್ಮಿ A4 5G ಫೋನ್ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 4s ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.88 ಇಂಚಿನ ದೊಡ್ಡ ಡಿಸ್ಪ್ಲೇ ಲಭ್ಯವಿದೆ. ಇದು 5160mAh ಬ್ಯಾಟರಿ ಮತ್ತು 128GB ಸ್ಟೋರೇಜ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ರೆಡ್ಮಿ A3 5G ಫೋನಿನ ಉತ್ತರಾಧಿಕಾರಿಯಾಗಿದೆ. ಅಮೆಜಾನ್‌ನಲ್ಲಿ ಈ ಫೋನಿಗೆ ಲಭ್ಯವಿರುವ ಆಫರ್ ತಿಳಿಯಲು ಮುಂದೆ ಓದಿ.

ರೆಡ್ಮಿ A4 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ರೆಡ್ಮಿ A4 5G ಫೋನ್ 6.88 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 1640 X 720 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 240Hz ಸ್ಪರ್ಶ ಮಾದರಿ ದರ ಮತ್ತು 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಯಾವುದು?
ರೆಡ್ಮಿ A4 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 4s ಜೆನ್ 2 ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಇದು ಗ್ರಾಫಿಕ್ಸ್‌ಗಾಗಿ, ಅಡ್ರಿನೊ ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಹೈಪರ್ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ಮಾಡುತ್ತದೆ.
ಸ್ಟೋರೇಜ್ ಆಯ್ಕೆ
ರೆಡ್ಮಿ A4 5G ಸ್ಮಾರ್ಟ್‌ಫೋನ್ 4GB RAM ಹೊಂದಿದೆ. 4GB ವರೆಗಿನ ವರ್ಚುವಲ್ RAM ಬೆಂಬಲವೂ ಲಭ್ಯವಿದೆ. ಈ ಫೋನಿನಲ್ಲಿ 64GB ಮತ್ತು 128GB ಸ್ಟೋರೇಜ್ ಆಯ್ಕೆ ಲಭ್ಯವಿದೆ. ನೀವು, ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.
ಕ್ಯಾಮೆರಾ ಸೆಟಪ್
ರೆಡ್ಮಿ A4 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಇದು ಎಲ್ಇಡಿ ಫ್ಲ್ಯಾಷ್ ಮತ್ತು ಸೆಕೆಂಡರಿ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 5 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾ ಲಭ್ಯವಿದೆ.
ಬ್ಯಾಟರಿ ಬ್ಯಾಕಪ್ ಹೇಗಿದೆ?
ರೆಡ್ಮಿ A4 5G ಫೋನ್ 5160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ವೇಗದ ಚಾರ್ಜಿಂಗ್ ಸೌಲಭ್ಯ ಮತ್ತು 33W ಅಡಾಪ್ಟರ್ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ರೆಡ್ಮಿ A4 5G ಮೊಬೈಲ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP52 ರೇಟಿಂಗ್ ಪಡೆದಿದೆ. ಇದು ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5G, 4G LTE, ಡ್ಯುಯಲ್ ಬ್ಯಾಂಡ್ ವೈ-ಫೈ 5, ಬ್ಲೂಟೂತ್ 5, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಮತ್ತು 3.5 ಎಂಎಂ ಆಡಿಯೊ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.
ರೆಡ್ಮಿ A4 5G ಹೊಸ ಬೆಲೆ
ರೆಡ್ಮಿ A4 5G ಫೋನ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ಫೋನಿನ 4GB + 64GB ಸ್ಟೋರೇಜ್ ರೂಪಾಂತರದ ಬೆಲೆ 8,499 ರೂ. ಆಗಿದೆ. 4GB + 128GB ಸ್ಟೋರೇಜ್ ವೇರಿಯಂಟ್ 9,499 ರೂ.ಗೆ ಬಿಡುಗಡೆಯಾಗಿದೆ. ಪ್ರಸ್ತುತ 128GB ಸ್ಟೋರೇಜ್ ಮೇಲೆ 500 ರೂ. ರಿಯಾಯಿತಿ ಲಭ್ಯವಿದೆ. ನೀವುಕೇವಲ 8,999 ರೂ.ಗೆ ಖರೀದಿಸಬಹುದು. ಈ ಮೊಬೈಲ್ ಸ್ಪಾರ್ಕಲ್ ಪರ್ಪಲ್ ಮತ್ತು ಸ್ಟಾರ್ರಿ ಬ್ಲ್ಯಾಕ್ ಬಣ್ಣದಲ್ಲಿ ಬರುತ್ತದೆ. ಅಮೆಜಾನ್‌ನಲ್ಲಿ ಈ ಎಲ್ಲಾ ಆಫರ್‌ಗಳ ಲಾಭ ಪಡೆಯಬಹುದು.


Click it and Unblock the Notifications








