Home
Deal of the day

ಎಂಥಾ ಆಫರ್‌! ಸೊಗಸಾದ OPPO ಫೋನಿನ ಬೆಲೆ ಕುಸಿತ.. 2000 ರಿಯಾಯಿತಿ.. ರಾಶಿ ರಾಶಿ ಫೀಚರ್ಸ್

ಒಪ್ಪೋ ಮೊಬೈಲ್ ಪ್ರಿಯರಿಗೆ ಫ್ಲಿಪ್‌ಕಾರ್ಟ್‌ ಬಂಪರ್ ಗಿಫ್ಟ್ ನೀಡುತ್ತಿದೆ. ಈ ಸೊಗಸಾದ ಒಪ್ಪೋ ಫೋನನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ. ಹೌದು, ಪ್ರಸ್ತುತ, ಗಣರಾಜ್ಯೋತ್ಸವದ ಪ್ರಯುಕ್ತ ಫ್ಲಿಪ್‌ಕಾರ್ಟ್‌ನಲ್ಲಿ ವಿಶೇಷ ಸೇಲ್ ನಡೆಯುತ್ತಿದೆ. ಈ ಮಾರಾಟದಲ್ಲಿ ಒಪ್ಪೋ F27 5G (OPPO F27 5G) ಫೋನಿನ ಖರೀದಿ ಮೇಲೆ ಆಕರ್ಷಕ ರಿಯಾಯಿತಿ ಘೋಷಿಸಲಾಗಿದೆ. ನೀವು ಶೇ.22 ರಷ್ಟು ಡಿಸ್ಕೌಂಟ್ ಪಡೆಯಬಹುದು. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್‌ಗಳು ಮತ್ತು ವಿಶೇತೆಗಳನ್ನು ತಿಳಿಯೋಣ.

ಒಪ್ಪೋ F27 5G ಮೊಬೈಲ್ ಎರಡು ಸ್ಟೋರೇಜ್‌ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ನೀವು, ಎಮರಾಲ್ಡ್ ಗ್ರೀನ್ ಮತ್ತು ಅಂಬರ್ ಆರೆಂಜ್ ಬಣ್ಣಗಳಲ್ಲಿ ಈ ಫೋನನ್ನು ಖರೀದಿಸಬಹುದು. ಇದು ಮೀಡಿಯಾಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದು 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 256GB ಸ್ಟೋರೇಜ್‌, 5000mAh ಬ್ಯಾಟರಿ ಮತ್ತು 45W ವೇಗ ಚಾರ್ಜಿಂಗ್ ಒಳಗೊಂಡಿದೆ. ಪ್ರಸ್ತುತ ಈ ಫೋನ್ ಬಿಡಗಡ ಬೆಲೆಗಿಂತ ಕಡಿಮೆಗೆ ಲಭ್ಯವಿದೆ.

OPPO F27 5G ಬೆಲೆ ಕುಸಿತ! 2000 ರಿಯಾಯಿತಿ.. ಫೀಚರ್ಸ್ ಹೇಗಿವೆ?

ಒಪ್ಪೋ F27 5G ಬೆಲೆ ಮತ್ತು ಆಫರ್‌

ಒಪ್ಪೋ F27 5G ಫೋನಿನ 8GB RAM + 128GB ಸ್ಟೋರೇಜ್‌ ರೂಪಾಂತರವು 22,999 ರೂ.ಗೆ ಬಿಡುಗಡೆ ಆಗಿತ್ತು. 8GB RAM + 256GB ಸ್ಟೋರೇಜ್‌ ರೂಪಾಂತರವನ್ನು 24,999 ರೂ.ಗೆ ಪರಿಚಯಿಸಲಾಗಿದೆ. ಪ್ರಸ್ತುತ, ಫ್ಲಿಪ್‌ಕಾರ್ಟ್ ಸೈಟ್‌ನಲ್ಲಿ ಫೋನಿನ 128GB ಸ್ಟೋರೇಜ್‌ ಆಯ್ಕೆಯು 20,999 ರೂ.ಗೆ ಮಾರಾಟವಾಗುತ್ತಿದೆ. ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿ ಈ ಫೋನ್ ಖರೀದಿಸಿದರೆ ಹೆಚ್ಚುವರಿಯಾಗಿ 2,000 ರೂ. ರಿಯಾಯಿತಿಯೂ ಸಿಗುತ್ತದೆ. ನೀವು, ಈ ಒಪ್ಪೋ F27 5G ಫೋನನ್ನು ಕೇವಲ 18,999 ರೂ.ಗೆ ಖರೀದಿಸಬಹುದು.

ಒಪ್ಪೋ F27 5G ವೈಶಿಷ್ಟ್ಯಗಳು

ಡಿಸ್ಪ್ಲೇ ಮತ್ತು ಪ್ರೊಸೆಸರ್ ವಿವರ

ಒಪ್ಪೋ F27 5G ಫೋನ್ 6.67 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಓಎಲ್‌ಇಡಿ ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರ, 1080 x 2400 ಪಿಕ್ಸೆಲ್‌ಗಳ ರೆಸಲ್ಯೂಶನ್, 240Hz ಟಚ್ ಸ್ಯಾಂಪ್ಲಿಂಗ್ ದರ, 2,100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು AGC-DT ಗ್ಲಾಸ್ ರಕ್ಷಣೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆರ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಇದು ಮಾಲಿ G57 MP2 ಜಿಪಿಯು ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್‌ 14 ಆಧಾರಿತ ColorOS 14 ನೊಂದಿಗೆ ಕಾರ್ಯನಿರ್ವಹಿಸುತ್ತದೆ.

OPPO F27 5G ಬೆಲೆ ಕುಸಿತ! 2000 ರಿಯಾಯಿತಿ.. ಫೀಚರ್ಸ್ ಹೇಗಿವೆ?

ಕ್ಯಾಮೆರಾ ಮತ್ತು ಸ್ಟೋರೇಜ್‌

ಒಪ್ಪೋ F27 5G ಫೋನ್ ಡ್ಯುಯಲ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಜೊತೆಗೆ, 2 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 32 ಮೆಗಾಪಿಕ್ಸೆಲ್ ಸೋನಿ ಫ್ರಂಟ್ ಕ್ಯಾಮೆರಾ ಹೊಂದಿದೆ. ಈ ಒಪ್ಪೋ ಮೊಬೈಲ್ 8GB RAM + 128GB ಹಾಗೂ 8GB + 256GB ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ. ಜೊತೆಗೆ, ಮೈಕ್ರೊ ಎಸ್‌ಡಿ ಕಾರ್ಡ್ ಮುಲಕ 2TB ವರೆಗೆ ಸ್ಟೋರೇಜ್‌ ವಿಸ್ತರಿಸಬಹುದು.

ಬ್ಯಾಟರಿ ಮತ್ತು ಇತರೆ ವೈಶಿಷ್ಟ್ಯಗಳು

ಒಪ್ಪೋ F27 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್‌ ಮಾಡಲು, 45W SuperVOOC ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಮೊಬೈಲ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ ಸಿಮ್, 5G, ವೈ ಫೈ 5, ಬ್ಲೂಟೂತ್ 5.3, ಯುಎಸ್‌ಬಿ ಟೈಪ್ ಸಿ ಪೋರ್ಟ್, ಜಿಪಿಎಸ್‌, ಗೆಲಿಲಿಯೋ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
22 percent discount on OPPO F27 5G in flipkart republic day sale: check new price, offers, availability specs and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+