ಜಸ್ಟ್ 9,498 ಸಾಕು! ಸೋನಿ ಕ್ಯಾಮೆರಾ.. 5000mAh ಬ್ಯಾಟರಿ.. ಭರ್ಜರಿ ಬೆಲೆ ಇಳಿಕೆ.. ಯಾವ ಫೋನ್?
ಐಕ್ಯೂ ಮೊಬೈಲ್‌ಗಳಿಗೆ ಭಾರತದಲ್ಲಿ ಸಖತ್ ಡಿಮ್ಯಾಂಡ್ ಇದೆ. ಕಂಪನಿಯು ಕೈಗೆಟುಕುವ ದರದಲ್ಲಿ ಹೊಸ ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದೆ. ಈ ಮಧ್ಯೆಯೇ, ಹಳೆಯ ಸ್ಮಾರ್ಟ್‌ಫೋನ್‌ಗಳ ಬೆಲೆಯನ್ನು ಇಳಿಕೆ ಮಾಡುತ್ತಿದೆ. ಹೌದು, ಪ್ರಸ್ತುತ ಐಕ್ಯೂ Z9 ಲೈಟ್ 5G (iQOO Z9 Lite 5G) ಫೋನ್ ಅಮೆಜಾನ್‌ನಲ್ಲಿ ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿದೆ. ಆಯ್ದ ಬ್ಯಾಂಕ್ ಕಾರ್ಡ್ ಮೇಲೆ ಹೆಚ್ಚುವರಿ 1000 ರೂ. ಆಫರ್ ಸಹ ಲಭ್ಯವಿದೆ. ಬನ್ನಿ, ಈ ಐಕ್ಯೂ ಫೋನಿನ ಮೂಲ ಬೆಲೆ, ರಿಯಾಯಿತಿ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಐಕ್ಯೂ Z9 ಲೈಟ್ 5G ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬರುತ್ತದೆ. ಇದು ಆಕ್ವಾ ಫ್ಲೋ ಮತ್ತು ಮೋಚಾ ಬ್ರೌನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನಿನ ವಿಶೇಷತೆಗಳನ್ನು ನೋಡುವುದಾದರೆ, ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 6.56 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಇದರೊಂದಿಗೆ 6GB RAM + 128GB, 5000mAh ಬ್ಯಾಟರಿ ಸೇರಿದಂತೆ ಮುಂತಾದ ಅತ್ಯುತ್ತಮ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾಗಿದೆ.

ಐಕ್ಯೂ Z9 ಲೈಟ್ 5G ಹೊಸ ಬೆಲೆ ಮತ್ತು ಆಫರ್
ಐಕ್ಯೂ Z9 ಲೈಟ್ 5G ಫೋನಿನ 4GB RAM + 128GB ಸ್ಟೋರೇಜ್ ರೂಪಾಂತರವನ್ನು ಕೇವಲ 10,499 ರೂ.ಗೆ ಬಿಡುಗಡೆಯಾಗಿತ್ತು. ಇನ್ನು 6GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆ 11,499 ರೂ. ಆಗಿದೆ. ಪ್ರಸ್ತುತ ಈ 5G ಫೋನ್ ಅಮೆಜಾನ್‌ನಲ್ಲಿ ಶೇ.28 ರಷ್ಟು ರಿಯಾಯಿತಿಯೊಂದಿಗೆ ಮಾರಾಟವಾಗುತ್ತಿದೆ. ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿ ಈ ಫೋನ್ ಖರೀದಿಸಿದರೆ 1000 ರೂ. ಡಿಸ್ಕೌಂಟ್ ಸಿಗುತ್ತದೆ. ಈ ಮೂಲಕ ನೀವು ಈ ಫೋನನ್ನು 9,498 ರೂ. ಕೊಳ್ಳಬಹುದು.
ಐಕ್ಯೂ Z9 ಲೈಟ್ 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಐಕ್ಯೂ Z9 ಲೈಟ್ 5G ಸ್ಮಾರ್ಟ್‌ಫೋನ್ 6.56 ಇಂಚಿನ ಎಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್ಪ್ಲೇ ಹೊಂದಿದೆ. ಇದು 1612 × 720 ಪಿಕ್ಸೆಲ್‌ಗಳ ರೆಸಲ್ಯೂಶ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು 90Hz ರಿಫ್ರೆಶ್ ದರ, 840 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, 240Hz ಟಚ್ ಸ್ಯಾಂಪ್ಲಿಂಗ್ ದರದ ಬೆಂಬಲ ಹೊಂದಿದೆ. ಈ ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಸಹ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಐಕ್ಯೂ Z9 ಲೈಟ್ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಪ್ರೊಸೆಸರ್ ಹೊಂದಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಆಧಾರದ ಮೇಲೆ ತಯಾರಿಸಲಾಗಿದೆ. ಈ ಫೋನ್ ಗ್ರಾಫಿಕ್ಸ್‌ಗಾಗಿ, ಮಾಲಿ G57 ಜಿಪಿಯು ಬೆಂಬಲ ಹೊಂದಿದೆ. ಇದು ಆಂಡ್ರಾಯ್ಡ್ 14 ಆಧಾರಿತ Funtouch OS 14 ಜೊತೆಗೆ ಕೆಲಸ ನಿರ್ವಹಿಸುತ್ತದೆ. ಈ ಫೋನ್ ಆಂಡ್ರಾಯ್ಡ್ ನವೀಕರಣಗಳು ಮತ್ತು ಭದ್ರತಾ ನವೀಕರಣಗಳನ್ನು ಪಡೆಯುತ್ತದೆ. ಗೇಮಿಂಗ್ ಪ್ರಿಯರು ಯಾವುದೇ ಸಂಶಯವಿಲ್ಲದೆ ಈ ಸ್ಮಾರ್ಟ್‌ಫೋನ್ ಖರೀದಿಸಬಹುದು.

RAM ಮತ್ತು ಸ್ಟೋರೇಜ್
ಐಕ್ಯೂ Z9 ಲೈಟ್ 5G ಫೋನ್ 4GB RAM ಮತ್ತು 6GB RAM ನೊಂದಿಗೆ ಬಿಡುಗಡೆಯಾಗಿದೆ. ಇದಕ್ಕೆ ಪೂರಕವಾಗಿ 128GB ಸ್ಟೋರೇಜ್ ಮತ್ತು 128GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಈ ಫೋನ್ ಸ್ಟೋರೇಜ್ ವಿಸ್ತರಣಾ ಬೆಂಬಲವನ್ನು ಹೊಂದಿದೆ. ಈ ಫೋನ್ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಬೆಂಬಲಿಸುತ್ತದೆ.
ಕ್ಯಾಮೆರಾ ಸೆಟಪ್
ಐಕ್ಯೂ Z9 ಲೈಟ್ 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಎಐ (AI) ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ಬೊಕೆ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಮೊಬೈಲ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ. ಇದು ಎಲ್‌ಇಡಿ ಫ್ಲ್ಯಾಷ್ ಮತ್ತು ವಿವಿಧ ಕ್ಯಾಮೆರಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಐಕ್ಯೂ Z9 ಲೈಟ್ 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 15W ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಈ ಫೋನ್ 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳೊಂದಿಗೆ ಬರುತ್ತದೆ.


Click it and Unblock the Notifications








