Home
Deal of the day

3,600 ಉಳಿತಾಯ! 50MP ಕ್ಯಾಮೆರಾ.. 5000mAh ಬ್ಯಾಟರಿ.. ಈ Samsung ಫೋನಿಗೆ 28% ಆಫರ್

ಸ್ಯಾಮ್‌ಸಂಗ್‌ ಫೋನ್‌ ಖರೀದಿಸುವವರಿಗೆ ಇಲ್ಲಿದೆ ಒಳ್ಳೆಯ ಸುದ್ದಿ. ಫ್ಲಿಪ್‌ಕಾರ್ಟ್‌ನಲ್ಲಿ (flipkart) ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 5G (Samsung Galaxy A15 5G) ಸ್ಮಾರ್ಟ್‌ಫೋನ್ ಭಾರೀ ರಿಯಾಯಿತಿ ದರದಲ್ಲಿ ಲಭ್ಯವಿದೆ. ಹೌದು, ಕಂಪನಿಯು ಈ ಫೋನಿನ ಖರೀದಿ ಮೇಲೆ ಶೇ.28 ರಷ್ಟು ಡಿಸ್ಕೌಂಟ್ ಘೋಷಿಸಿದೆ. ಜೊತೆಗೆ ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೇಲೆ ಶೇ.5 ರಷ್ಟು ರಿಯಾಯಿತಿ ಪಡೆಯಬಹುದು. ನೀವು 14,500 ರೂ.ಗಿಂತ ಕಡಿಮೆ ಬೆಲೆಗೆ ಈ ಮೊಬೈಲ್ ಕೊಳ್ಳಬಹುದು. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 5G ಮೊಬೈಲ್ 50 ಮೆಗಾಪಿಕ್ಸೆಲ್ ಬೊಂಬಾಟ್ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ 6.5 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದು ಮೀಡಿಯಾಟೆಕ್ ಡೈಮೆನ್ಶನ್ 6100 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಜೊತೆಗೆ 8GB RAM + 256GB ಸ್ಟೋರೇಜ್‌, 5000mAh ಬ್ಯಾಟರಿ ಮತ್ತು 25W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ಫೀಚರ್ಸ್‌ ಒಳಗೊಂಡಿದೆ. ನೀವು, ಈ ಫೋನಿನ ಖರೀದಿ ಮೇಲೆ 3,600 ರೂ. ಉಳಿತಾಯ ಮಾಡಬಹುದು. ಫ್ಲಿಪ್‌ಕಾರ್ಟ್‌ನಲ್ಲಿ ಯಾವೆಲ್ಲಾ ಆಫರ್‌ ಲಭ್ಯವಿದೆ ತಿಳಿಯಲು ಮುಂದೆ ಓದಿ.

3,600 ಸೇವ್! 50MP ಕ್ಯಾಮೆರಾ, 5000mAh ಬ್ಯಾಟರಿ; ಕಡಿಮೆ ಬೆಲೆಗೆ Samsung ಫೋನ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 5G ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 5G ಸ್ಮಾರ್ಟ್‌ಫೋನ್ 6.5 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2,340 x 1,080 ಪಿಕ್ಸೆಲ್‌ ರೆಸಲ್ಯೂಶನ್, 90Hz ರಿಫ್ರೆಶ್ ದರ ಮತ್ತು 800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.

ಪವರ್‌ ಫುಲ್‌ ಪ್ರೊಸೆಸರ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಶನ್ 6100 ಆಕ್ಟಾಕೋರ್‌ ಪ್ರೊಸೆಸರ್‌ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 14 ಆಧಾರಿತ ಒನ್ ಯುಐ 6 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನ್ 8GB RAM + 256GB ಸ್ಟೋರೇಜ್‌ ಆಯ್ಕೆ ಹೊಂದಿದೆ. ನೀವು, ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್‌ ಹೆಚ್ಚಿಸಬಹುದು.

ಟ್ರಿಪಲ್ ಕ್ಯಾಮೆರಾ ಸೆಟಪ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 5G ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ, 5 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, 13 ಮೆಗಾಪಿಕ್ಸೆಲ್ ಫ್ರಂಟ್‌ ಕ್ಯಾಮೆರಾ ಹೊಂದಿದೆ.

3,600 ಸೇವ್! 50MP ಕ್ಯಾಮೆರಾ, 5000mAh ಬ್ಯಾಟರಿ; ಕಡಿಮೆ ಬೆಲೆಗೆ Samsung ಫೋನ್

ಶಕ್ತಿಯುತ ಬ್ಯಾಟರಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 5G ಮೊಬೈಲ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ ಸಿಮ್ 5G, ಬ್ಲೂಟೂತ್ 5.3, ವೈ ಫೈ, 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಯುಎಸ್‌ಬಿ ಟೈಪ್ ಸಿ ಪೋರ್ಟ್‌ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 5G ಬೆಲೆ ಮತ್ತು ಆಫರ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 5G ಫೋನಿನ 6GB RAM + 128GB ಸ್ಟೋರೇಜ್‌ ರೂಪಾಂತರವು 17,999 ರೂ.ಗೆ ಬಿಡುಗಡೆಯಾಗಿತ್ತು. ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ ಶೇ.28 ರಷ್ಟು ಡಿಸ್ಕೌಂಟ್ ಲಭ್ಯವಿದೆ. ನೀವು, ರಿಯಾಯಿತಿಯೊಂದಿಗೆ 14,399 ರೂ.ಗೆ ಖರೀದಿಸಬಹುದು. ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಈ ಫೋನ್‌ ಕೊಂಡರೆ, ಶೇ.5 ರಷ್ಟು ಡಿಸ್ಕೌಂಟ್ ಸಿಗುತ್ತದೆ. ಈ ಫೋನ್ ಲೈಟ್ ಬ್ಲೂ, ಬ್ಲೂ ಬ್ಲಾಕ್ ಮತ್ತು ಬ್ಲೂ ಬಣ್ಣಗಳಲ್ಲಿ ಲಭ್ಯವಿದೆ.

Best Mobiles in India

English summary
28 Percent Discount on Samsung Galaxy A15 5G with 6GB RAM in Flipkart: price, specs and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+