ಯಾರು ಕೊಡಲ್ಲ! 6000mAh ಬ್ಯಾಟರಿ.. 50MP ಟ್ರಿಪಲ್ ಕ್ಯಾಮೆರಾ.. ಕಡಿಮೆ ಬೆಲೆಗೆ Samsung 5G ಫೋನ್; ಎಲ್ಲಿ ಸಿಗುತ್ತೆ?
ಸ್ಯಾಮ್‌ಸಂಗ್ ತನ್ನ ಗ್ರಾಹಕರಿಗೆ ಎರಡು ಗುಡ್‌ನ್ಯೂಸ್ ನೀಡಿದೆ. ನಿನ್ನೆಯಷ್ಟೇ ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G (Samsung Galaxy M56 5G) ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗಿದೆ. ಇದರ ಆರಂಭಿಕ ಬೆಲೆ 27,999 ರೂ. ಆಗಿದೆ. ಈ ಹೊಸ ಮೊಬೈಲ್ ಪರಿಚಯಿಸುವುದರ ಜೊತೆಗೆ, ಕಂಪನಿಯು ಕಳೆದ ವರ್ಷ ರಿಲೀಸ್ ಮಾಡಿದ್ದ 5G ಫೋನಿನ ಬೆಲೆಯನ್ನು ಇಳಿಕೆ ಮಾಡಿದೆ. ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G (Samsung Galaxy M35 5G) ಮೊಬೈಲ್ ಅನ್ನು 3,000 ರೂ.ಗಳ ರಿಯಾಯಿತಿಯಲ್ಲಿ ಖರೀದಿಸಬಹುದು. ಈ ಫೋನಿನ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಮೊಬೈಲ್ ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಬರುತ್ತದೆ. ಈ ಮೊಬೈಲ್ ಮೂರು ಬಣ್ಣಗಳನ್ನು ಹೊಂದಿದೆ. ನೀವು ಡೇ ಬ್ರೇಕ್ ಬ್ಲೂ, ಮೂನ್ ಲೈಟ್ ಬ್ಲೂ ಮತ್ತು ಥಂಡರ್ ಗ್ರೇ ಬಣ್ಣಗಳಲ್ಲಿ ಖರೀದಿಸಬಹುದು. ಈ ಫೋನಿನ ವಿಶೇಷತೆಗಳೆಂದರೆ, ಇದು Exynos 1380 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 6.6 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 6000mAh ಬ್ಯಾಟರಿ ಮತ್ತು 25W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಬರುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಸ್ಮಾರ್ಟ್‌ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಈ ಫೋನಿನಲ್ಲಿ ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್ ಸಹ ಲಭ್ಯವಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ 5G SA /NSA, ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ. ಈ ಸ್ಯಾಮ್‌ಸಂಗ್ ಫೋನ್ 6GB, 8GB RAM ಹೊಂದಿದೆ. ಇದರೊಂದಿಗೆ 128GB, 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ. ನೀವು ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.
ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಮೊಬೈಲ್ 6.6 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1,080 × 2,340 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120 Hz ರಿಫ್ರೆಶ್ ದರ ಮತ್ತು 1,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆಯನ್ನು ಹೊಂದಿದೆ.
ಶಕ್ತಿಶಾಲಿ ಪ್ರೊಸೆಸರ್
ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಫೋನಿನಲ್ಲಿ Exynos 1380 ಆಕ್ಟಾಕೋರ್ ಪ್ರೊಸೆಸರ್ ಅನ್ನು ಅಳವಡಿಸಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಒನ್ ಯುಐ 6 ಓಎಸ್ ಜೊತೆಗೆ ಕೆಲಸ ನಿರ್ವಹಿಸುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ಮಾಲಿ G68 MP5 ಜಿಪಿಯು ಸಹ ಹೊಂದಿದೆ.
ಟ್ರಿಪಲ್ ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ, 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಈ ಮೊಬೈಲ್ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, 13 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.
ದೊಡ್ಡ ಬ್ಯಾಟರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಫೋನ್ 6,000mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಹೊಸ ಬೆಲೆ
6GB RAM + 128GB ಸ್ಟೋರೇಜ್ = 19,999 ರೂ.
ಹೊಸ ಬೆಲೆ = 16,999 ರೂ.
8GB RAM + 128GB ಸ್ಟೋರೇಜ್ = 21,499 ರೂ.
ಹೊಸ ಬೆಲೆ = 18,499 ರೂ.
8GB RAM + 256GB ಸ್ಟೋರೇಜ್ = 24,499
ಹೊಸ ಬೆಲೆ = 21,499 ರೂ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಫೋನಿನ ಮೂರು ರೂಪಾಂತರಗಳನ್ನು 3 ಸಾವಿರ ರೂ.ಗಳ ರಿಯಾಯಿತಿಯೊಂದಿಗೆ ಮಾರಾಟ ಮಾಡಲಾಗುತ್ತಿದೆ. ಡಿಸ್ಕೌಂಟ್ ಬಳಿಕ, ಈ ಫೋನಿನ ಬೆಲೆ ಕ್ರಮವಾಗಿ 16,999 ರೂ., 18,499 ರೂ. ಮತ್ತು 21,499 ರೂ.ಗೆ ಖರೀದಿಸಬಹುದು. ಕಂಪನಿಯ ವೆಬ್‌ಸೈಟ್ ಮತ್ತು ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್‌ನಲ್ಲಿ ಈ ಆಫರ್‌ಗಳ ಲಾಭ ಪಡೆಯಬಹುದು. ಹೊಸ ಬೆಲೆಯಲ್ಲಿ ಖರೀದಿಸಲು ಯಾವುದೇ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್‌ಗಳ ಅಗತ್ಯವಿಲ್ಲ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಬೆಲೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಫೋನನ್ನು ಭಾರತದಲ್ಲಿ ಎರಡು ಸ್ಟೋರೇಜ್ ರೂಪಾಂತರದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 27,999 ರೂ. ಆಗಿದೆ. 256GB ಸ್ಟೋರೇಜ್ ರೂಪಾಂತರದ ಬೆಲೆ 30,999 ರೂ. ಇದೆ. ಕಂಪನಿಯು ಆರಂಭಿಕ ಮಾರಾಟದಲ್ಲಿ, ಈ ಮೊಬೈಲ್ ಮೇಲೆ 3,000 ರೂ.ಗಳ ಬ್ಯಾಂಕ್ ರಿಯಾಯಿತಿ ಘೋಷಿಸಿದೆ. ಈ ಆಫರ್ ಎಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳಲ್ಲಿ ಲಭ್ಯವಿದೆ. ಈ ಫೋನ್ ಇದೇ ಏಪ್ರಿಲ್ 23 ರಂದು ಮಧ್ಯಾಹ್ನ 12 ಗಂಟೆಗೆ ಅಮೆಜಾನ್ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಈ ಫೋನ್ ತಿಳಿ ಹಸಿರು ಮತ್ತು ಕಪ್ಪು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ವೈಶಿಷ್ಟ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಫೋನ್ 6.7 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ, ವಿಷನ್ ಬೂಸ್ಟರ್ ಮತ್ತು 36% ತೆಳುವಾದ ಬೆಜೆಲ್‌ಗಳನ್ನು ಹೊಂದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್‌ನಿಂದ ರಕ್ಷಣೆ ಪಡೆದಿದೆ. ಇದು ಗೇಮಿಂಗ್ ಮತ್ತು ವಿಡಿಯೋ ಸ್ಟ್ರೀಮಿಂಗ್‌ಗೆ ಅತ್ಯುತ್ತಮವಾಗಿದೆ. ಈ ಮೊಬೈಲ್ Exynos 1480 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 15 ಆಧಾರಿತ One UI 7 ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಫೋನ್ 8GB RAM ಮತ್ತು 128GB, 256GB ಸ್ಟೋರೇಜ್‌ನೊಂದಿಗೆ ಬರುತ್ತದೆ. ನೀವು ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್ ವಿಸ್ತರಿಸಬಹುದು.
ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ ದ್ವಿತೀಯ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಈ ಫೋನ್ ಮುಂಭಾಗದಲ್ಲಿ 12 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸಹ ಹೊಂದಿದೆ. ಇದು ಎಐ (AI) ವೈಶಿಷ್ಟ್ಯಗಳೊಂದಿಗೆ ಬರುತ್ತದೆ. ಈ ಫೋನ್ 5000mAh ಬ್ಯಾಟರಿ ಹೊಂದಿದೆ. ಇದು 45W ವೇಗದ ಚಾರ್ಜಿಂಗ್ ಸೌಲಭ್ಯದೊಂದಿಗೆ ಬರುತ್ತದೆ. ಈ ಮೊಬೈಲ್ 7.2 ಎಂಎಂ ದಪ್ಪ ಮತ್ತು 180 ಗ್ರಾಂ ತೂಕ ಹೊಂದಿದೆ.


Click it and Unblock the Notifications








