4,500 ಅಗ್ಗ! 64MP ಕ್ಯಾಮೆರಾ.. 256GB ಸ್ಟೋರೇಜ್.. ಈ Lava ಫೋನಿನ ಬೆಲೆ ಭಾರೀ ಇಳಿಕೆ
ಲಾವಾ ತನ್ನ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದೆ. ಈ 5G ಫೋನಿನ ಬೆಲೆಯನ್ನು ಬರೋಬ್ಬರಿ ಶೇ.31 ರಷ್ಟು ಕಡಿಮೆ ಮಾಡಿದೆ. ಹೌದು, ಅಮೆಜಾನ್‌ನಲ್ಲಿ ಲಾವಾ ಬ್ಲೇಜ್ ಕರ್ವ್ 5G (Lava Blaze Curve 5G) ಖರೀದಿ ಮೇಲೆ 3,500 ರೂ. ಡಿಸ್ಕೌಂಟ್ ಮತ್ತು 1,000 ರೂ. ಬ್ಯಾಂಕ್ ಆಫರ್ ಲಭ್ಯವಿದೆ. ಜೊತೆಗೆ ನೋ ಕಾಸ್ಟ್ ಇಎಂಐ ಮತ್ತು ಎಕ್ಸ್‌ಚೇಂಜ್ ಆಫರ್ ಸಹ ಲಭ್ಯವಿದೆ. ಬನ್ನಿ ಈ ಫೋನಿನ ಹೊಸ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.
ಲಾವಾ ಬ್ಲೇಜ್ ಕರ್ವ್ 5G ಫೋನನ್ನು ಕಳೆದ ಮಾರ್ಚ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು. ಇದು ಮೊಬೈಲ್ ಪ್ರಿಯರಿಂದ ಉತ್ತಮ ರೇಟಿಂಗ್ ಪಡೆದಿದೆ. ಈ ಫೋನ್ 64 ಮೆಗಾಪಿಕ್ಸೆಲ್ ಮುಖ್ಯ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7050 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6.67 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 256GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 33W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಸ್ಟ್ಯಗಳನ್ನು ಒಳಗೊಂಡಿದೆ.

ಲಾವಾ ಬ್ಲೇಜ್ ಕರ್ವ್ 5G ಬೆಲೆ ಮತ್ತು ಆಫರ್‌ಗಳು
8GB RAM + 128GB ಸ್ಟೋರೇಜ್ ಬೆಲೆ = 17,999 ರೂ.
ಆಫರ್ ಬೆಲೆ = 13,499 ರೂ.
8GB RAM + 256GB ಸ್ಟೋರೇಜ್ ಬೆಲೆ = 18,999 ರೂ.
ಆಫರ್ ಬೆಲೆ = 14,499 ರೂ.
ಲಾವಾ ಬ್ಲೇಜ್ ಕರ್ವ್ 5G ಫೋನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಎರಡೂ ರೂಪಾಂತರಗಳ ಮೇಲೆ 3,500 ರೂ. ಡಿಸ್ಕೌಂಟ್ ನೀಡುತ್ತಿದೆ. ಜೊತೆಗೆ 1,000 ರೂ. ಬ್ಯಾಂಕ್ ರಿಯಾಯಿತಿ ಲಭ್ಯವಿದೆ. ನೀವು 13,950 ರೂ. ವರೆಗೆ ಎಕ್ಸ್‌ಚೇಂಜ್ ಆಫರ್ ಪಡೆಯಬಹುದು. ಇದರೊಂದಿಗೆ 3 ರಿಂದ 6 ತಿಂಗಳ ನೋ ಕಾಸ್ಟ್ ಇಎಂಐ ಆಯ್ಕೆಯೂ ಲಭ್ಯವಿದೆ.
ಲಾವಾ ಬ್ಲೇಜ್ ಕರ್ವ್ 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಲಾವಾ ಬ್ಲೇಜ್ ಕರ್ವ್ 5G ಮೊಬೈಲ್ 6.67 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಇದು ಪೂರ್ಣ ಎಚ್‌ಡಿ ಪ್ಲಸ್ ಅಮೋಲೆಡ್ ಕರ್ವ್ ಡಿಸ್ಪ್ಲೇ ಆಗಿದೆ. ಇದು 120Hz ರಿಫ್ರೆಶ್ ದರ ಮತ್ತು 800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಲಾವಾ ಬ್ಲೇಜ್ ಕರ್ವ್ 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 ಪ್ರೊಸೆಸರ್ ಹೊಂದಿದೆ. ಫೋನಿನಲ್ಲಿ 8GB RAM + 256GB ಸ್ಟೋರೇಜ್ ಲಭ್ಯವಿದೆ. ಜೊತೆಗೆ 8GB ವರ್ಚುವಲ್ RAM ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 13 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ.

ಕ್ಯಾಮೆರಾ ಸೆಟಪ್
ಲಾವಾ ಬ್ಲೇಜ್ ಕರ್ವ್ 5G ಸ್ಮಾರ್ಟ್‌ಫೋನ್ 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಲಾವಾ ಬ್ಲೇಜ್ ಕರ್ವ್ 5G ಮೊಬೈಲ್ 5000mAh ಸಾಮರ್ಥ್ಯ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 33W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಲಾವಾ ಬ್ಲೇಜ್ ಕರ್ವ್ 5G ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಜೊತೆಗೆ ಡಾಲ್ಬಿ ಅಟ್ಮಾಸ್ ಸ್ಪೀಕರ್‌ಗಳನ್ನು ಸಹ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ ಡ್ಯುಯಲ್ ಸಿಮ್ 5G, 4G, ವೈಫೈ, ಬ್ಲೂಟೂತ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








