ಯಾರು ಕೊಡಲ್ಲ! ಶೇ.31 ರಷ್ಟು ರಿಯಾಯಿತಿ.. 6000mAh ಬ್ಯಾಟರಿಯ Vivo ಫೋನ್.. ಕಡಿಮೆ ಬೆಲೆ; ಖರೀದಿಗೆ ಕ್ಯೂ
ವಿವೋ ಭಾರತದಲ್ಲಿ ಭಿನ್ನ ಶ್ರೇಣಿಯ ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದೆ. ಕಂಪನಿಯು ಪರಿಚಯಿಸಿರುವ ಪ್ರತಿಯೊಂದು ಮೊಬೈಲ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂದರೆ, ವಿವೋ ಸ್ಮಾರ್ಟ್‌ಫೋನ್‌ಗಳು ವಿಭಿನ್ನ ವಿನ್ಯಾಸ ಮತ್ತು ಉತ್ತಮ ಗುಣಮಟ್ಟದ ವೈಶಿಷ್ಟ್ಯಗಳೊಂದಿಗೆ ಹೊರುತ್ತಿವೆ. ಹೀಗಾಗಿಯೇ ವಿವೋ ಫೋನ್‌ಗಳು ಭಾರತದಾದ್ಯಂತ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿವೆ. ಇದೀಗ, ಕಂಪನಿಯು ತನ್ನ ಸೊಗಸಾದ ವಿವೋ 5G ಫೋನಿಗೆ ಭಾರೀ ರಿಯಾಯಿತಿ ಘೋಷಿಸಿದೆ. ಆ ಮೊಬೈಲ್ ಯಾವುದು? ಮೂಲ ಬೆಲೆ ಎಷ್ಟು ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.
ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ವಿವೋ Y58 5G (Vivo Y58 5G) ಫೋನ್ ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನೊಂದಿದೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 6.72 ಇಂಚಿನ ಡಿಸ್ಪ್ಲೇ ಹೊಂದಿದೆ. ಇದರೊಂದಿಗೆ 128GB ಸ್ಟೋರೇಜ್, 6000mAh ಬ್ಯಾಟರಿ ಮತ್ತು 44W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ವಿವೋ Y58 5G ಹೊಸ ಬೆಲೆ ಮತ್ತು ಆಫರ್
ವಿವೋ Y58 5G ಫೋನ್ 8GB + 128GB ಸ್ಟೋರೇಜ್ ರೂಪಾಂತರದಲ್ಲಿ ಮಾರಾಟವಾಗುತ್ತಿದೆ. ಇದನ್ನು 19,499 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ ಶೇ.31 ರಷ್ಟು ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯವಿದೆ. ನೀವು ಕೇವಲ 16,376 ರೂ.ಗೆ ಖರೀದಿಸಬಹುದು. ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಈ ಫೋನ್ ಖರೀದಿಸಿದರೆ, ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಪಡೆಯಬಹುದು. ಈ ಮೊಬೈಲ್ ಹಿಮಾಲಯನ್ ಬ್ಲೂ ಮತ್ತು ಸುಂದರಬನ್ ಗ್ರೀನ್ ಬಣ್ಣದಲ್ಲಿ ಬರುತ್ತದೆ.
ವಿವೋ Y58 5G ವೈಶಿಷ್ಟ್ಯಗಳು
ಡಿಸ್ಪ್ಲೇ ಮಾಹಿತಿ
ವಿವೋ Y58 5G ಮೊಬೈಲ್ 6.72 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2,408 x 1,080 ಪಿಕ್ಸೆಲ್ ರೆಸೆಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಇದರೊಂದಿಗೆ 120Hz ರಿಫ್ರೆಶ್ ದರ ಮತ್ತು 1,024 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಸ್ನಾಪ್‌ಡ್ರಾಗನ್ ಪ್ರೊಸೆಸರ್
ವಿವೋ Y58 5G ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 14 ಆಧಾರಿತ Funtouch ಓಎಸ್ 14 ಜೊತೆಗೆ ಕೆಲಸ ಮಾಡುತ್ತದೆ. ಈ ಫೋನ್ 8GB RAM + 128GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.
50MP ಡ್ಯುಯಲ್ ಕ್ಯಾಮೆರಾ
ವಿವೋ Y58 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಒದಗಿಸಲಾಗಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.
ಶಕ್ತಿಶಾಲಿ ಬ್ಯಾಟರಿ
ವಿವೋ Y58 5G ಫೋನ್ 6000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಕಂಪನಿಯು 44W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕಲ್ಪಿಸಿದೆ.
ಇತರೆ ವೈಶಿಷ್ಟ್ಯಗಳು
ವಿವೋ Y58 5G ಸ್ಮಾರ್ಟ್‌ಫೋನ್ ಧೂಳು ಮತ್ತು ನೀರಿನಿಂದ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಇದು ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ ವೈ-ಫೈ, ಬ್ಲೂಟೂತ್, ಡ್ಯುಯಲ್ ಸಿಮ್, 4G, 5G, ಸ್ಟೀರಿಯೋ ಸ್ಪೀಕರ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








