Home
Deal of the day

Infinix: ಮತ್ತೆ ಬೆಲೆ ಇಳಿಕೆ! 108MP ಕ್ಯಾಮೆರಾ.. 5000mAh ಬ್ಯಾಟರಿ.. ಕೇವಲ 12,999 ರೂ.! ಖರೀದಿ ಎಲ್ಲಿ?

ಇನ್ಫಿನಿಕ್ಸ್ ಕಂಪನಿಯು ಭಾರತದಲ್ಲಿ ತನ್ನ 'ನೋಟ್ 50' (Infinix Note 50) ಸರಣಿ ಬಿಡುಗಡೆಗೆ ಸಜ್ಜಾಗುತ್ತಿದೆ. ಮತ್ತೊಂದೆಡೆ, ಈ ಕಂಪನಿಯ ನೋಟ್ 40 ಸರಣಿಯ 5G ಫೋನಿನ ಬೆಲೆ ದಿಢೀರನೆ ಇಳಿಕೆಯಾಗಿದೆ. ಹೌದು, ಇನ್ಫಿನಿಕ್ಸ್‌ ನೋಟ್‌ 40X 5G (Infinix Note 40X 5G) ಫೋನನ್ನು ಅತ್ಯಂತ ಕಡಿಮೆ ದರದಲ್ಲಿ ಖರೀದಿಸಬಹುದು. ಈ ಸ್ಮಾರ್ಟ್‌ಫೋನ್ ಶೇ.36 ರಷ್ಟು ಜಬರ್ದಸ್ತ್‌ ರಿಯಾಯಿತಿಯೊಂದಿಗೆ ಮಾರಾಟವಾಗುತ್ತಿದೆ. ಜೊತೆಗೆ ಬ್ಯಾಂಕ್ ಆಫರ್, ಕ್ಯಾಶ್‌ಬ್ಯಾಕ್ ಸಹ ಸಿಗುತ್ತದೆ. ಬನ್ನಿ, ಈ ಫೋನಿನ ಮೂಲ ಬೆಲೆ, ಆಫರ್ ಮತ್ತು ವಿಶೇಷತೆಗಳ ಬಗ್ಗೆ ತಿಳಿಯೋಣ.

ಇನ್ಫಿನಿಕ್ಸ್‌ ಸಂಸ್ಥೆಯ ಭಾರತದಲ್ಲಿ ಕೆಲವು ಆಕರ್ಷಕ ಫೋನ್‌ಗಳನ್ನು ಪರಿಚಯಿಸಿದೆ. ಆ ಪೈಕಿ ಇನ್ಫಿನಿಕ್ಸ್‌ ನೋಟ್‌ 40X 5G ಮೊಬೈಲ್‌ ಈಗಾಗಲೇ ಗ್ರಾಹಕರ ಗಮನ ಸೆಳದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 108 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್‌ 6.78 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಜೊತೆಗೆ 5000mAh ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ನೀವು ಎರಡು ಸ್ಟೋರೇಜ್‌ ರೂಪಾಂತರಗಳಲ್ಲಿ ಈ ಫೋನನ್ನು ಖರೀದಿಸಬಹುದು.

ಮತ್ತೆ ಬೆಲೆ ಇಳಿಕೆ! 108MP ಕ್ಯಾಮೆರಾ, 5000mAh ಬ್ಯಾಟರಿ; ಯಾವುದು? ಎಲ್ಲಿ ಖರೀದಿ

ಇನ್ಫಿನಿಕ್ಸ್‌ ನೋಟ್‌ 40X 5G ಹೊಸ ಬೆಲೆ ಮತ್ತು ಆಫರ್

ಇನ್ಫಿನಿಕ್ಸ್ ನೋಟ್ 40X 5G ಮೊಬೈಲ್ 12GB RAM ಮತ್ತು 8GB RAM ನಲ್ಲಿ ಲಭ್ಯವಿದೆ. ಈ ಫೋನಿನ 8GB RAM ರೂಪಾಂತರವನ್ನು 14,999 ರೂ.ಗೆ ಮತ್ತು 12GB RAM ರೂಪಾಂತರವನ್ನು 15,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್ 12GB RAM ಹೊಂದಿರುವ ಈ ಫೋನನ್ನು 13,999 ರೂ.ಗೆ ಮಾರಾಟ ಮಾಡುತ್ತಿದೆ. ಇದು ಫೋನಿನ ಮಾರಾಟದ ಬೆಲೆ ಆಗಿದೆ.

ನೀವು ಬ್ಯಾಂಕ್ ಆಫರ್ ಅಡಿಯಲ್ಲಿ ಈ ಫೋನ್ ಖರೀದಿಸಿದರೆ, 1000 ರೂ.ಗಳ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದು. ಈ ರಿಯಾಯಿತಿಯೊಂದಿಗೆ, ಕೇವಲ 12,999 ರೂ.ಗೆ ಈ ಮೊಬೈಲ್ ನಿಮ್ಮದಾಗುತ್ತದೆ. ವಿಶೇಷವೆಂದರೆ, ಈ ಬ್ಯಾಂಕ್ ರಿಯಾಯಿತಿ ಕೇವಲ 2 ಅಥವಾ 4 ಆಯ್ದ ಬ್ಯಾಂಕುಗಳಲ್ಲಿ ಮಾತ್ರವಲ್ಲ, 17 ಬ್ಯಾಂಕುಗಳಲ್ಲಿ ಲಭ್ಯವಿದೆ. ಈ ರಿಯಾಯಿತಿಯನ್ನು ಕ್ರೆಡಿಟ್ ಕಾರ್ಡ್‌ಗಳು ಮತ್ತು ಡೆಬಿಟ್ ಕಾರ್ಡ್‌ಗಳೆರಡರಲ್ಲೂ ಪಡೆಯಬಹುದು. ಇದು ಕಪ್ಪು, ಲೈಮ್ ಗ್ರೀನ್, ಪಾಮ್ ಬ್ಲೂ ಮತ್ತು ಸ್ಟಾರ್ ಲೈಟ್ ಬ್ಲಾಕ್‌ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.

ಇನ್ಫಿನಿಕ್ಸ್‌ ನೋಟ್‌ 40X 5G ವೈಶಿಷ್ಟ್ಯಗಳು

ಇನ್ಫಿನಿಕ್ಸ್‌ ನೋಟ್‌ 40X 5G ಡಿಸ್ಪ್ಲೇ

ಇನ್ಫಿನಿಕ್ಸ್‌ ನೋಟ್‌ 40X 5G ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಎಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಈ ಡಿಸ್‌ಪ್ಲೇಯು 1,080 x 2,460 ಪಿಕ್ಸೆಲ್ ರೆಸಲ್ಯೂಶನ್‌ ಬೆಂಬಲದೊಂದಿಗೆ ಬರುತ್ತದೆ. ಇದು 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ದರ ಹೊಂದಿದೆ.

ಇನ್ಫಿನಿಕ್ಸ್‌ ನೋಟ್‌ 40X 5G ಪ್ರೊಸೆಸರ್

ಇನ್ಫಿನಿಕ್ಸ್‌ ನೋಟ್‌ 40X 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಆಕ್ಟಾಕೋರ್ ಪ್ರೊಸೆಸರ್‌ ಹೊಂದಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಆಧಾರದ ಮೇಲೆ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 14 ಆಧಾರಿತ XOS 14 ನೊಂದಿಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ಆರ್ಮ್ ಮಾಲಿ G57 MC2 ಜಿಪಿಯು ಸಹ ಹೊಂದಿದೆ.

ಇನ್ಫಿನಿಕ್ಸ್‌ ನೋಟ್‌ 40X 5G ಕ್ಯಾಮೆರಾ

ಇನ್ಫಿನಿಕ್ಸ್‌ ನೋಟ್‌ 40X 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 108 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದು ಎಐ (AI) ತಂತ್ರಜ್ಞಾನದೊಂದಿಗೆ ಕ್ವಾಡ್ ಎಲ್‌ಇಡಿ ಫ್ಲ್ಯಾಷ್ ಹೊಂದಿದೆ. ಜೊತೆಗೆ, 2 ಮೆಗಾಪಿಕ್ಸೆಲ್ ಸೆಕೆಂಡರಿ ಲೆನ್ಸ್ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 8 ಮೆಗಾಪಿಕ್ಸೆಲ್ ಫ್ರಂಟ್‌ ಕ್ಯಾಮೆರಾ ಹೊಂದಿದೆ.

ಇನ್ಫಿನಿಕ್ಸ್‌ ನೋಟ್‌ 40X 5G ಬ್ಯಾಟರಿ

ಇನ್ಫಿನಿಕ್ಸ್‌ ನೋಟ್‌ 40X 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ 132 ನಿಮಿಷಗಳಲ್ಲಿ ಶೇ.20 ರಿಂದ ಶೇ.100 ರಷ್ಟು ಚಾರ್ಜ್ ಆಗುತ್ತದೆ.

Best Mobiles in India

English summary
36 Percent Discount on Infinix Note 40X 5G with 12GB RAM in flipkart: check new price, offers, specifications and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+