4,000 ಉಳಿತಾಯ! 108MP ಕ್ಯಾಮೆರಾ.. 5000mAh ಬ್ಯಾಟರಿ.. ಸಸ್ತಾ ಬೆಲೆಗೆ Infinix 5G ಫೋನ್ ಲಭ್ಯ
ಇನ್ಫಿನಿಕ್ಸ್ ಕಂಪನಿಯು ಸಾಕಷ್ಟು ಆಕರ್ಷಕ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಆ ಪೈಕಿ ಇತ್ತೀಚಿನ ಇನ್ಫಿನಿಕ್ಸ್ ನೋಟ್ 40X 5G (Infinix Note 40X 5G) ಸ್ಮಾರ್ಟ್‌ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳದಿದೆ. ಈ ಮೊಬೈಲ್ ಬಜೆಟ್ ವಿಭಾಗದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ, ಇನ್ಫಿನಿಕ್ಸ್ ನೋಟ್ 40X 5G ಫೋನ್ ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ಬೊಂಬಾಟ್ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನಿನ ಹೊಸ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.
ಹೌದು, ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ನಲ್ಲಿ ಇನ್ಫಿನಿಕ್ಸ್ ನೋಟ್ 40X 5G ಫೋನ್ ಶೇ.36 ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ 8GB RAM + 256GB ಸ್ಟೋರೇಜ್ ರೂಪಾಂತರವು 19,999 ರೂ.ಗೆ ಬಿಡುಗಡೆ ಆಗಿತ್ತು. ಪ್ತಸುತ, ನೀವು ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ 15,999 ರೂ.ಗೆ ಖರೀದಿಸಬಹುದು. ಜೊತೆಗೆ ಬ್ಯಾಂಕ್ ರಿಯಾಯಿತಿ ಇದೆ. ಈ ಫೋನನ್ನು ಮತ್ತಷ್ಟು ಡಿಸ್ಕೌಂಟ್ ಬೆಲೆಯಲ್ಲಿ ಕೊಳ್ಳಬಹುದು.

ನೀವು ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಪಾವತಿ ಮೇಲೆ 1,000 ರೂ. ತ್ವರಿತ ರಿಯಾಯಿತಿ ಪಡೆಯಬಹುದು. ಬಳಿಕ ನೀವು ಕೇವಲ 14,999 ರೂ.ಗೆ ಈ ಮೊಬೈಲ್ ಆರ್ಡರ್ ಮಾಡಬಹುದು. ಈ ಫೋನ್ ಯಾವುದೇ ಬ್ಯಾಂಕ್ ರಿಯಾಯಿತಿ ಇಲ್ಲದೆ 4,000 ರೂ. ಕಡಿಮೆ ಬೆಲೆಗೆ ಲಭ್ಯವಿದೆ. ಜೊತೆಗೆ 10,600 ರೂ.ಗಳ ಎಕ್ಸ್‌ಚೇಂಜ್ ಆಫರ್ ಸಹ ಲಭ್ಯವಿದೆ. ಇದು ಗೋಲ್ಡ್ ಮತ್ತು ಕಪ್ಪು ಬಣ್ಣಗಳಲ್ಲಿ ಲಭ್ಯವಿದೆ. ಬನ್ನಿ, ಇನ್ಫಿನಿಕ್ಸ್ ನೋಟ್ 40X 5G ಫೋನಿನ ವಿಶೇಷತೆಗಳನ್ನು ತಿಳಿಯೋಣ.
ಇನ್ಫಿನಿಕ್ಸ್ ನೋಟ್ 40X 5G ಫೀಚರ್ಸ್
ಡಿಸ್ಪ್ಲೇ ಹೇಗಿದೆ
ಇನ್ಫಿನಿಕ್ಸ್ ನೋಟ್ 40X 5G ಸ್ಮಾರ್ಟ್‌ಫೋನ್ 6.78 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2436 × 1080 ಪಿಕ್ಸಲ್ ರೆಸಲ್ಯೂಶನ್, 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, 120Hz ರಿಫ್ರೆಶ್ ದರ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ದರದ ಬೆಂಬಲ ಪಡೆದಿದೆ.
ಪ್ರೊಸೆಸರ್ ಯಾವುದು?
ಇನ್ಫಿನಿಕ್ಸ್ ನೋಟ್ 40X 5G ಮೊಬೈಲ್ ಮೀಡಿಯಾಟೆಕ್‌ನ ಡೈಮೆನ್ಸಿಟಿ 6300 6nm ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 14 ಆಧಾರಿತ XOS 14 ಜೊತೆಗೆ ಕೆಲಸ ಮಾಡುತ್ತದೆ. ಈ ಫೋನ್ 8GB, 12GB RAM ಮತ್ತು 256GB ಇಂಟರ್ನಲ್ ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1 TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.

ಟ್ರಿಪಲ್ ಕ್ಯಾಮೆರಾ ಸೆಟಪ್
ಇನ್ಫಿನಿಕ್ಸ್ ನೋಟ್ 40X 5G ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.
ಬೊಂಬಾಟ್ ಬ್ಯಾಟರಿ
ಇನ್ಫಿನಿಕ್ಸ್ ನೋಟ್ 40X 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18 W ಫಾಸ್ಟ್ ಚಾರ್ಜಿಂಗ್ ಬೆಂಬಲ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಇನ್ಫಿನಿಕ್ಸ್ ನೋಟ್ 40X 5G ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ. ಜೊತೆಗೆ ಫೇಸ್ ಅನ್‌ಲಾಕ್, ಜೆಬಿಎಲ್ ಸ್ಟಿರಿಯೊ ಸ್ಪೀಕರ್ ಸೆಟಪ್ ಸೌಲಭ್ಯ ಇದೆ. ಈ ಫೋನ್ ಧೂಳು ಹಾಗೂ ನೀರಿನ ವಿರುದ್ಧ ರಕ್ಷಣೆಗಾಗಿ IP53 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 5G, 4G, ವೈ-ಫೈ, ಬ್ಲೂಟೂತ್, ಜಿಪಿಎಸ್, ಎನ್‌ಎಫ್‌ಸಿ, 3.5 ಎಂಎಂ ಆಡಿಯೋ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








