ಜಸ್ಟ್ 6299 ರೂ.! 50MP ಕ್ಯಾಮೆರಾ.. 5000mAh ಬ್ಯಾಟರಿ.. ಸಸ್ತಾ ಬೆಲೆಗೆ Samsung ಫೋನ್
ಇಷ್ಟು ಕಡಿಮೆ ಬೆಲೆಗೆ ಯಾವ ಫೋನ್ ಕೂಡ ಸಿಗಲ್ಲ! ಕೇವಲ 6,299 ರೂ.ಗೆ ಸ್ಯಾಮ್‌ಸಂಗ್ ಮಾರಾಟ. ಹೌದು, ಪ್ರಸ್ತುತ ಫ್ಲಿಪ್‌ಕಾರ್ಟ್ ರಿಪಬ್ಲಿಕ್ ಡೇ ಸೇಲ್ 2025 (Flipkart Republic Day sale 2025) ನಡೆಯುತ್ತಿದೆ. ಈ ವಿಶೇಷ ಮಾರಾಟವು ಜನವರಿ 19 ರವರೆಗೆ ಇರುತ್ತದೆ. ಈ ಸೇಲ್ ನಲ್ಲಿ ಹಲವು ಪ್ರಸಿದ್ಧ ಕಂಪನಿಗಳ ಫೋನ್‌ಗಳನ್ನು ಕಡಿಮೆ ಬೆಲೆಗೆ ಖರೀದಿಸಬಹುದು. ಅದರಂತೆ, ಸ್ಯಾಮ್‌ಸಂಗ್ ಗ್ಯಾಲಕ್ಸಿ F05 (Samsung Galaxy F05) ಫೋನ್ ಭಾರೀ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯವಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಸ್ಮಾರ್ಟ್‌ಫೋನ್ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಿತ್ತು. ಈ ಫೋನ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಈ ಮೊಬೈಲ್‌ನಲ್ಲಿ 6.7 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದು ಮೀಡಿಯಾಟೆಕ್ ಹೆಲಿಯೊ G85 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಜೊತೆಗೆ 5000mAh ಬ್ಯಾಟರಿ ಮತ್ತು 25W ವೇಗದ ಚಾರ್ಜಿಂಗ್ ಒಳಗೊಂಡಿದೆ. ಪ್ರಸ್ತುತ, ಫ್ಲಿಪ್‌ಕಾರ್ಟ್ ವಿಶೇಷ ಸೇಲ್‌ನಲ್ಲಿ ಶೇ.37 ರಷ್ಟು ರಿಯಾಯಿತಿ ಲಭ್ಯವಿದೆ. ಕಂಪನಿಯು ಯಾವೆಲ್ಲಾ ಆಫರ್‌ಗಳನ್ನು ನೀಡುತ್ತಿದೆ ತಿಳಿಯಲು ಮುಂದೆ ಓದಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಹೊಸ ಬೆಲೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೋನಿನ 4GB RAM + 64GB ಸ್ಟೋರೇಜ್ ರೂಪಾಂತರವನ್ನು 7,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ 6,249 ರೂ.ಗೆ ಮಾರಾಟವಾಗುತ್ತಿದೆ. ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಈ ಫೋನ್ ಖರೀದಿಸಿದರೆ, ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಸಹ ಲಭ್ಯವಿದೆ. ನೀವು ಈ ಫೋನನ್ನು ಅತ್ಯಂತ ಕಡಿಮೆ ಬೆಲೆಗೆ ಖರೀದಿಸಬಹುದು. ಜನವರಿ 19 ರವರೆಗೆ ಈ ಆಫರ್ ಲಭ್ಯವಿರುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಸ್ಮಾರ್ಟ್‌ಫೋನ್ 6.7 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಇದು 720 x 1600 ಪಿಕ್ಸೆಲ್‌ಗಳ ರೆಸಲ್ಯೂಶನ್, 60Hz ರಿಫ್ರೆಶ್ ದರದ ಬೆಂಬಲ ಪಡೆದಿದೆ.
ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಮೊಬೈಲ್ ಮೀಡಿಯಾಟೆಕ್ ಹೆಲಿಯೊ G85 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 14 ಓಎಸ್ ಜೊತೆಗೆ ಕೆಲಸ ನಿರ್ವಹಿಸುತ್ತದೆ. ಈ ಫೋನ್ 8GB RAM ಹೊಂದಿದೆ. ಜೊತೆಗೆ, 64GB ಸ್ಟೋರೇಜ್ ಆಯ್ಕೆ ಲಭ್ಯವಿದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.
ಡ್ಯುಯಲ್ ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಮೊಬೈಲ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು ಎಲ್‌ಇಡಿ ಫ್ಲ್ಯಾಶ್ ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಬೊಂಬಾಟ್ ಬ್ಯಾಟರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ಫೇಸ್ ಅನ್‌ಲಾಕ್ ವೈಶಿಷ್ಟ್ಯವನ್ನು ಹೊಂದಿದೆ. ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು 3.5 ಎಂಎಂ ಆಡಿಯೋ ಜಾಕ್ ಸಹ ಲಭ್ಯವಿದೆ. ಕನೆಕ್ಟವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌ


Click it and Unblock the Notifications








