ಮತ್ತೆ ಬೆಲೆ ಕುಸಿತ! 108MP ಕ್ಯಾಮೆರಾ.. 4000 ಡಿಸ್ಕೌಂಟ್.. ಕಮ್ಮಿ ಬೆಲೆಗೆ POCO 5G ಫೋನ್
ಪೊಕೊ ಸಂಸ್ಥೆಯು ಕಳೆದ ವರ್ಷ ಬಿಡುಗಡೆಯಾಗಿದ್ದ 5G ಫೋನಿನ ಬೆಲೆಯನ್ನು ಇಳಿಕೆ ಮಾಡಿದೆ. ನೀವು ಈ ಫೋನನ್ನು ಶೇ.40 ರಷ್ಟು ರಿಯಾಯಿತಿಯೊಂದಿಗೆ ಖರೀದಿಸಬಹುದು. ಹೌದು, ಅಮೆಜಾನ್‌ನಲ್ಲಿ ಪೊಕೊ X6 ನಿಯೋ 5G (POCO X6 Neo 5G) ಅನ್ನು ಬಿಡುಗಡೆಗಿಂತ ಅಗ್ಗದ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ನೀವು 12 ಸಾವಿರ ರೂ.ಗಿಂತ ಕಡಿಮೆ ದರದಲ್ಲಿ 5G ಫೋನ್ ಖರೀದಿಸಲು ಬಯಸಿದರೆ, ಇದು ನಿಮಗೆ ಉತ್ತಮ ಆಯ್ಕೆಯಾಗಿದೆ. ಈ ಫೋನಿನ ಮೂಲ ಬೆಲೆ, ಆಫರ್ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.
ಪೊಕೊ X6 ನಿಯೋ 5G ಮೊಬೈಲ್ 4,000 ರೂ.ಗಳ ಡಿಸ್ಕೌಂಟ್ ಪಡೆದಿದೆ. ನೀವು ಆಸ್ಟ್ರಲ್ ಬ್ಲ್ಯಾಕ್, ಹರೈಸನ್ ಬ್ಲೂ ಮತ್ತು ಆರೆಂಜ್ ಬಣ್ಣದಲ್ಲಿ ಖರೀದಿಸಬಹುದು. ಮುಖ್ಯವಾಗಿ ಈ ಸ್ಮಾರ್ಟ್‌ಫೋನ್ 108 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ಫೋನಿನಲ್ಲಿ 6.67 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಹಾಗೆಯೇ 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 33W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ಅತ್ಯುತ್ತಮ ಫೀಚರ್ಸ್ ಒಳಗೊಂಡಿದೆ.

ಪೊಕೊ X6 ನಿಯೋ 5G ಹೊಸ ಬೆಲೆ ಮತ್ತು ಆಫರ್‌ಗಳು
ಪೊಕೊ X6 ನಿಯೋ 5G ಮೊಬೈಲ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಿತ್ತು. ಈ ಪೈಕಿ ಮೊಬೈಲ್‌ನ 8GB RAM + 128GB ಸ್ಟೋರೇಜ್ ರೂಪಾಂತರವನ್ನು ಭಾರತದಲ್ಲಿ 15,999 ರೂ.ಗೆ ಪರಿಚಯಿಸಲಾಗಿತ್ತು. ಪ್ರಸ್ತುತ, ಇದು ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್‌ನಲ್ಲಿ 4 ಸಾವಿರ ರೂ.ಗಳ ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿದೆ. ನೀವು, 8GB RAM ಹೊಂದಿರುವ ಈ 5G ಫೋನನ್ನು ಕೇವಲ 11,999 ರೂ.ಗೆ ಖರೀದಿಸಬಹುದು. ಇದಕ್ಕೆ ಯಾವುದೇ ಬ್ಯಾಂಕ್ ಕಾರ್ಡ್ ಅಥವಾ ಕೂಪನ್ ಅಗತ್ಯವಿಲ್ಲ. ನೀವು 12 ಸಾವಿರ ರೂ.ಗಿಂತ ಕಡಿಮೆ ಬೆಲೆಗೆ 5G ಮೊಬೈಲ್ ಖರೀದಿಸಲು ಬಯಸಿದರೆ, ಈ ಆಫರ್‌ನ ಲಾಭ ಪಡೆಯಬಹುದು.
ಪೊಕೊ X6 ನಿಯೋ 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಪೊಕೊ X6 ನಿಯೋ 5G ಮೊಬೈಲ್ 6.72 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಆಗಿದೆ. ಈ ಡಿಸ್ಪ್ಲೇಯು 1,080 x 2,400 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲ, 120Hz ರಿಫ್ರೆಶ್ ದರ ಮತ್ತು 1,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಸಹ ಹೊಂದಿದೆ.
ಪ್ರೊಸೆಸರ್ ಯಾವುದು?
ಪೊಕೊ X6 ನಿಯೋ 5G ಫೋನ್ ಮೀಡಿಯಾಟೆಕ್‌ನ ಡೈಮೆನ್ಸಿಟಿ 6100+ ಪ್ರೊಸೆಸರ್ ಹೊಂದಿದೆ. ಇದನ್ನು 6nm ಫ್ಯಾಬ್ರಿಕೇಶನ್‌ನಲ್ಲಿ ನಿರ್ಮಿಸಲಾಗಿದೆ. ಇದು ಆಂಡ್ರಾಯ್ಡ್ 13 ಆಧಾರಿತ MIUI 14 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಈ ಪೊಕೊ ಫೋನ್ ಆರ್ಮ್ ಮಾಲಿ G57 MP2 ಜಿಪಿಯು ಸಹ ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್ 8GB ವರ್ಚುವಲ್ RAM ಮತ್ತು 16GB RAM ಹೊಂದಿದೆ. ಇದರಲ್ಲಿ 12GB RAM + 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ.

ಕ್ಯಾಮೆರಾ ಸೆಟಪ್
ಪೊಕೊ X6 ನಿಯೋ 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 108 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 16 ಮೆಗಾಪಿಕ್ಸೆಲ್ ಸೆಲ್ಪಿ ಶೂಟರ್ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಪೊಕೊ X6 ನಿಯೋ 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 33W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಬ್ಯಾಟರಿ ಸಂಪೂರ್ಣವಾಗಿ ಚಾರ್ಜ್ ಆದ ಬಳಿಕ, 18 ಗಂಟೆಗಳ ಕಾಲ ಯೂಟ್ಯೂಬ್ ಪ್ಲೇ ಮಾಡಬಹುದು ಎಂದು ಕಂಪನಿ ಹೇಳಿದೆ.
ಇತರೆ ವೈಶಿಷ್ಟ್ಯಗಳು
ಪೊಕೊ X6 ನಿಯೋ 5G ಫೋನ್ ಇನ್‌ಫ್ರಾರೆಡ್ ಮತ್ತು ಸೈಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ ಸಿಮ್ 5G, ಯುಎಸ್‌ಬಿ ಟೈಪ್ ಸಿ, ವೈ-ಫೈ, ಬ್ಲೂಟೂತ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








