6,700 ಉಳಿತಾಯ! 108MP ಕ್ಯಾಮೆರಾ.. 5000mAh ಬ್ಯಾಟರಿ.. ಅಮೆಜಾನ್‌ನಲ್ಲಿ ಈ Redmi ಫೋನಿನ ಭಾರೀ ಆಫರ್
ಮೊಬೈಲ್ ಪ್ರಿಯರಿಗೆ ಅಮೆಜಾನ್ ಬಂಪರ್ ಆಫರ್ ನೀಡುತ್ತಿದೆ. ಈ ಮೂಲಕ ಗ್ರಾಹಕರನ್ನು ಸೆಳೆಯುತ್ತಿದೆ. ಹೌದು, ಅಮೆಜಾನ್‌ನಲ್ಲಿ ರಿಪಬ್ಲಿಕ್ ಡೇ ಸೇಲ್ 2025 (Amazon Republic Day Sale 2025) ನಡೆಯುತ್ತಿದೆ. ಈ ಸೇಲ್‌ನಲ್ಲಿ ರೆಡ್ಮಿ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್ ನೀಡಲಾಗುತ್ತಿದೆ. ಅದರಂತೆ ರೆಡ್ಮಿ ನೋಟ್ 13 5G (Redmi Note 13 5G) ಫೋನ್ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ನೀವು 6,700 ರೂ. ಉಳಿತಾಯ ಮಾಡಬಹುದು. ಬನ್ನಿ, ಈ ಫೋನಿನ ವಿಶೇಷತೆಗಳನ್ನು ತಿಳಿಯೋಣ.
ರೆಡ್ಮಿ ನೋಟ್ 13 5G ಸ್ಮಾರ್ಟ್‌ಫೋನ್ ಕಳೆದ ವರ್ಷ ಜನವರಿಯಲ್ಲಿ ಬಿಡುಗಡೆಯಾಗಿತ್ತು. ಇದು ಕಂಪನಿಯ ಹಗುರ ಮತ್ತು ತೆಳ್ಳಗಿನ 5G ಮೊಬೈಲ್ ಆಗಿದೆ. ಈ ಫೋನಿನಲ್ಲಿ 108 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6080 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 5000mAh ಬ್ಯಾಟರಿ ಮತ್ತು 33W ವೇಗದ ಚಾರ್ಜಿಂಗ್ ಒಳಗೊಂಡಿದೆ. ಬನ್ನಿ, ಈ ಫೋನಿನ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.

ರೆಡ್ಮಿ ನೋಟ್ 13 5G ಬೆಲೆ ಮತ್ತು ಆಫರ್‌ಗಳು
ರೆಡ್ಮಿ ನೋಟ್ 13 5G ಫೋನ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ 6GB RAM + 128GB ಸ್ಟೋರೇಜ್ ರೂಪಾಂತರವನ್ನು 17,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಅಮೆಜಾನ್‌ನಲ್ಲಿ 6,700 ರೂ. ರಿಯಾಯಿತಿ ಬೆಲೆಯಲ್ಲಿ ಮಾರಾಟವಾಗುತ್ತಿದೆ. 6GB RAM + 128GB ಸ್ಟೋರೇಜ್ ಆಯ್ಕೆಯ ಮೇಲೆ ಶೇ.32 ರಷ್ಟು ಡಿಸ್ಕೌಂಟ್ ಲಭ್ಯವಿದೆ. ನೀವು 20,999 ರೂ. MRP ಬೆಲೆಯ ಬದಲಿಗೆ ಕೇವಲ 14,299 ರೂ.ಗೆ ಖರೀದಿಸಬಹುದು. ಈ ಮೊಬೈಲ್ ಸ್ಟೆಲ್ತ್ ಬ್ಲಾಕ್, ಆರ್ಕ್ಟಿಕ್ ವೈಟ್, ಕ್ರೋಮ್ಯಾಟಿಕ್ ಪರ್ಪಲ್ ಮತ್ತು ಪ್ರಿಸ್ಮ್ ಗೋಲ್ಡ್ ಬಣ್ಣಗಳಲ್ಲಿ ಲಭ್ಯವಿದೆ.
ರೆಡ್ಮಿ ನೋಟ್ 13 5G ಫೀಚರ್ಸ್
ಡಿಸ್ಪ್ಲೇ ಹೇಗಿದೆ
ರೆಡ್ಮಿ ನೋಟ್ 13 5G ಸ್ಮಾರ್ಟ್‌ಫೋನ್ 6.67 ಇಂಚಿನ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಹೊಂದಿದೆ.
ಪ್ರೊಸೆಸರ್ ಯಾವುದು?
ರೆಡ್ಮಿ ನೋಟ್ 13 5G ಮೊಬೈಲ್ ಮೀಡಿಯಾಟೆಕ್‌ನ ಡೈಮೆನ್ಸಿಟಿ 6080 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ 12GB RAM ಮತ್ತು 128GB ಸ್ಟೋರೇಜ್ ಆಯ್ಕೆ ಹೊಂದಿದೆ.
ಟ್ರಿಪಲ್ ಕ್ಯಾಮೆರಾ ಸೆಟಪ್
ರೆಡ್ಮಿ ನೋಟ್ 13 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಇದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.
ಬೊಂಬಾಟ್ ಬ್ಯಾಟರಿ
ರೆಡ್ಮಿ ನೋಟ್ 13 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 33W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ. ಈ ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP54 ರೇಟಿಂಗ್ ಪಡೆದಿದೆ. ಹಾಗೆಯೇ ಸೈಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಸಹ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್ ಸಂಪರ್ಕ, 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಐಆರ್ ಬ್ಲಾಸ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








