ಅಮೆಜಾನ್ ಸೇಲ್: ಅತ್ಯುತ್ತಮ ಡಿಸ್‌ಪ್ಲೇಯ ಈ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಆಫರ್!
ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್ ಅತ್ಯುತ್ತಮ ಕೊಡುಗೆಗಳ ಮೂಲಕ ಆನ್‌ಲೈನ್ ಶಾಪಿಂಗ್ ಪ್ರಿಯರ ಗಮನ ಸೆಳೆದಿದೆ. ಆ ಪೈಕಿ ಮೊಬೈಲ್, ಲ್ಯಾಪ್‌ಟಾಪ್ ಸೇರಿದಂತೆ ಎಲೆಕ್ಟ್ರಾನಿಕ್ ಉತ್ಪನ್ನಗಳು ಹಾಗೂ ಇತರೆ ವಸ್ತುಗಳಿಗೂ ಅಧಿಕ ಡಿಸ್ಕೌಂಟ್ ತಿಳಿಸುತ್ತದೆ. ಹಬ್ಬದ ಸೇಲ್ ಹಾಗೂ ಸ್ಪೆಷಲ್ ಸೇಲ್ ಗಳಲ್ಲಿ ಅಧಿಕ ಕೊಡುಗೆಗಳನ್ನು ಗ್ರಾಹಕರಿಗೆ ಲಭ್ಯ ಮಾಡುತ್ತದೆ.

ಉತ್ಪನ್ನಗಳಿಗೆ ನೇರ ಆಫರ್ ಜೊತೆಗೆ ಅಮೆಜಾನ್ ಗ್ರಾಹಕರಿಗೆ ಅತ್ಯುತ್ತಮ ವಿನಿಮಯ ಕೊಡುಗೆಗಳನ್ನು ಸಹ ನೀಡುತ್ತದೆ. ಇನ್ನು ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಬಜೆಟ್ ಬೆಲೆಯ ಫೋನ್‌ಗಳಿಂದ, ಹೈ ಎಂಡ್ ಮಾದರಿಯ ಮೊಬೈಲ್ ಫೋನ್‌ಗಳಿಗೂ ಆಫರ್ ಲಭ್ಯ ಮಾಡಿರುತ್ತದೆ. ಸದ್ಯ AMOLED ಮಾದರಿಯ ಡಿಸ್‌ಪ್ಲೇ ಹೊಂದಿರುವ ಸ್ಮಾರ್ಟ್‌ಫೋನ್‌ಗಳಿಗೂ ಅಮೆಜಾನ್ ಬೆಸ್ಟ್ ಕೊಡುಗೆಯನ್ನು ಘೋಷಿಸಿದೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ರಿಯಾಯಿತಿ ಬೆಲೆಯಲ್ಲಿ ಲಭ್ಯ ಇರುವ AMOLED ಮಾದರಿಯ ಡಿಸ್‌ಪ್ಲೇ ಸ್ಮಾರ್ಟ್‌ಫೋನ್‌ಗಳ ಕೊಡುಗೆ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.
ರೆಡ್ಮಿ ನೋಟ್ 10S ಫೋನ್
ರೆಡ್ಮಿ ನೋಟ್ 10s ಸ್ಮಾರ್ಟ್ ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಒನ್‌ಪ್ಲಸ್ ನಾರ್ಡ್ CE 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್ ನಾರ್ಡ್ CE 5G ಸ್ಮಾರ್ಟ್ ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB, 8GB RAM ಮತ್ತು 128GB ಹಾಗೂ 12GB RAM + 256GB ಇಂಟರ್ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಈ ಫೋನಿನ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ ಈ ಫೋನ್ 4,500mAh ಬ್ಯಾಟರಿ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಅದಕ್ಕೆ ಪೂರಕವಾಗಿ 30W Warp ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ವನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್ ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನ ವನ್ನು ಬೆಂಬಲಿಸುತ್ತದೆ.
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB ಮತ್ತು 6GB + 128GB ಆಗಿವೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications