Amazon: ಈ ಸೊಗಸಾದ ಫೋನ್‌ಗಳಿಗೆ ಧಮಾಕಾ ಆಫರ್.. ಹೊಸ ಬೆಲೆ, ರಿಯಾಯಿತಿ ಎಷ್ಟು? ಇಲ್ಲಿದೆ ವಿವರ
ಅಮೆಜಾನ್ ತನ್ನ ಗ್ರಾಹಕರಿಗಾಗಿ ವಿಶೇಷ ಸೇಲ್ ಆರಂಭಿಸಿದೆ. ನೀವು ಬೊಂಬಾಟ್ ರಿಯಾಯಿತಿ ದರದಲ್ಲಿ ನಿಮ್ಮ ನೆಚ್ಚಿನ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದು. ಹೌದು, ಅಮೆಜಾನ್ ಎಲೆಕ್ಟ್ರಾನಿಕ್ಸ್ ಪ್ರೀಮಿಯರ್ ಲೀಗ್ ಮಾರಾಟ (Amazon Electronics Premier League Sale) ಪ್ರಾರಂಭವಾಗಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಸ್ಮಾರ್ಟ್ ಟಿವಿಗಳು, ಮನೆ ಮತ್ತು ಅಡುಗೆ ಸಲಕರಣೆಗಳು ಸೇರಿದಂತೆ ಹಲವು ಗ್ಯಾಜೆಟ್‌ಗಳ ಮೇಲೆ ಉತ್ತಮ ರಿಯಾಯಿತಿಗಳನ್ನು ಘೋಷಿಸಲಾಗಿದೆ. ಈ ಸೇಲ್‌ನಲ್ಲಿ ನೀವು Samsung, Apple, Redmi, OnePlus, iQOO ಮತ್ತು Realme ಸೇರಿದಂತೆ ಹಲವು ಕಂಪನಿಗಳ ಫೋನ್‌ಗಳನ್ನು ಅತ್ಯಂತ ಕಡಿಮೆ ಬೆಲೆಗೆ ಕೊಳ್ಳಬಹುದು.
ಹೌದು, ಈ ಕೊಡುಗೆಗಳ ಹೊರತಾಗಿ, ಅಮೆಜಾನ್ ಐಸಿಐಸಿಐ ಮತ್ತು ಆಕ್ಸಿಸ್ ಬ್ಯಾಂಕ್ ಕಾರ್ಡ್‌ದಾರರಿಗೆ ಹೆಚ್ಚುವರಿ ಶೇ.7.5 ರಷ್ಟು ರಿಯಾಯಿತಿ ಲಭ್ಯವಿದೆ. ಅಮೆಜಾನ್ ಪೇ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಕೆದಾರರು ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಪಡೆಯಬಹುದು. ಅಮೆಜಾನ್ ಪೇ ಲೇಟರ್ ಬಳಸುವ ಗ್ರಾಹಕರು 60,000 ರೂ.ಗಳ ವರೆಗೆ ಕ್ರೆಡಿಟ್ ಪಡೆಯಬಹುದು. ನಿಮ್ಮ ಮೊಬೈಲ್ ಅನ್ನು ಅಪ್‌ಗ್ರೇಡ್ ಮಾಡಲು ಬಯಸಿದರೆ, ಈ ಸೇಲ್‌ನಲ್ಲಿ ಶಾಪಿಂಗ್ ಮಾಡಬಹುದು. ನಿಮಗೆ ಅಪ್‌ಗ್ರೇಡ್ ಬೋನಸ್ ಸಹ ಸಿಗುತ್ತದೆ. ಈ ಸೇಲ್‌ನಲ್ಲಿ ಲಭ್ಯವಿರುವ ಕೆಲವು ಅತ್ಯುತ್ತಮ ಸ್ಮಾರ್ಟ್‌ಫೋನ್ ಡೀಲ್‌ಗಳ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ. ನೀವು ನಿಮ್ಮ ನೆಚ್ಚಿನ ಫೋನನ್ನು ಬುಕ್ ಮಾಡಬಹುದು.

ರೆಡ್ಮಿ A4 5G: 11,999 ರೂ.
= ರಿಯಾಯಿತಿ ಬೆಲೆ: 8,999 ರೂ.
ಅಮೆಜಾನ್ ಸೇಲ್‌ನಲ್ಲಿ ರೆಡ್ಮಿ A4 5G (Redmi A4 5G) ಫೋನ್ ಅಗ್ಗದ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಈ ಫೋನ್ ಸ್ನಾಪ್‌ಡ್ರಾಗನ್ 4s ಜೆನ್ 2 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಪ್ರೊಸೆಸರ್ ಕಡಿಮೆ ಬಜೆಟ್‌ನಲ್ಲಿಯೂ ಸಹ ಉತ್ತಮ ಕಾರ್ಯಕ್ಷಮತೆಗೆ ಹೆಸರುವಾಸಿಯಾಗಿದೆ. ಇದು 8GB RAM + 128GB ಸ್ಟೋರೇಜ್ ಆಯ್ಕೆ ಹೊಂದಿದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು. ಈ ಫೋನಿನಲ್ಲಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು 5G ಬೆಂಬಲ ಪಡೆದಿದೆ.
ರೆಡ್ಮಿ A4 5G ಫೋನ್ 6.88 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ದರವನ್ನು ಹೊಂದಿದೆ. ಈ ಡಿಸ್ಪ್ಲೇಯು TUV ಪ್ರಮಾಣೀಕೃತವಾಗಿದ್ದು, ಕಣ್ಣಿನ ರಕ್ಷಣೆಯನ್ನು ಖಚಿತಪಡಿಸುತ್ತದೆ. ಕ್ಯಾಮೆರಾ ಸೆಟಪ್ ಬಗ್ಗೆ ಹೇಳುವುದಾದರೆ, ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಲಭ್ಯವಿದೆ. ಜೊತೆಗೆ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಮೊಬೈಲ್ 5160mAh ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ.
ಒನ್‌ಪ್ಲಸ್ ನಾರ್ಡ್ 4: 32,999 ರೂ.
= ರಿಯಾಯಿತಿ ಬೆಲೆ: 28,980 ರೂ.
ಮಧ್ಯಮ ಬಜೆಟ್‌ನ ಒನ್‌ಪ್ಲಸ್ ನಾರ್ಡ್ 4 (OnePlus Nord 4) ಫೋನ್ ತುಂಬಾ ಶಕ್ತಿಶಾಲಿಯಾಗಿದೆ. ಇದು ಅದ್ಭುತ ವಿನ್ಯಾಸದೊಂದಿಗೆ ಶಕ್ತಿಯುತ ಕಾರ್ಯಕ್ಷಮತೆಯನ್ನು ಪಡೆದಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7+ ಜೆನ್ 3 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಇದು ಸುಗಮ ಗೇಮಿಂಗ್ ಅನುಭವ ಮತ್ತು ಲ್ಯಾಗ್ ಮುಕ್ತ ಬಳಕೆದಾರ ಅನುಭವಕ್ಕೆ ಹೆಸರುವಾಸಿಯಾಗಿದೆ. ಈ ಫೋನ್ ಲೋಹದ ಯುನಿಬಾಡಿ ವಿನ್ಯಾಸ ಪಡೆದಿದೆ. ಇದು ಪ್ರೀಮಿಯಂ ನೋಟವನ್ನು ನೀಡುತ್ತದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದೆ.
ಒನ್‌ಪ್ಲಸ್ ನಾರ್ಡ್ 4 5G ಮೊಬೈಲ್ 6.74 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 2,772 × 1,240 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಈ ಸ್ಕ್ರೀನ್ 120Hz ರಿಫ್ರೆಶ್ ದರ ಮತ್ತು 2,150 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ. ಈ ಫೋನ್ 5500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 100W ಸೂಪರ್‌ವೂಕ್ ವೇಗದ ಚಾರ್ಜಿಂಗ್ ಸೌಲಭ್ಯ ಪಡೆದಿದೆ.
ಸ್ಯಾಮ್‌ಸಂಗ್ M35 5G: 24,499 ರೂ.
= ರಿಯಾಯಿತಿ ಬೆಲೆ: 16,999 ರೂ.
ಸ್ಯಾಮ್‌ಸಂಗ್ M35 5G (Samsung Galaxy M35 5G) 6.6 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1080×2340 ಪಿಕ್ಸೆಲ್‌ಗಳ ರೆಸಲ್ಯೂಶನ್, 120 Hz ರಿಫ್ರೆಶ್ ದರ ಮತ್ತು 1,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆಯನ್ನು ಹೊಂದಿದೆ. ಈ ಫೋನ್ Exynos 1380 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ ಫೋನ್ 6GB, 8GB RAM ಮತ್ತು 128GB, 256GB ಸ್ಟೋರೇಜ್ ಆಯ್ಕೆ ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ, 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಈ ಮೊಬೈಲ್ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಐಕ್ಯೂ Z9s 5G: 25,499 ರೂ.
= ರಿಯಾಯಿತಿ ಬೆಲೆ: 18,999 ರೂ.
ಐಕ್ಯೂ Z9s 5G (iQOO Z9s 5G) ಮೊಬೈಲ್ 6.77 ಇಂಚಿನ 3D ಕರ್ವ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1800 ನಿಟ್ಸ್ ಬ್ರೈಟ್‌ನೆಸ್, 120Hz ರಿಫ್ರೆಶ್ ದರದೊಂದಿಗೆ ಬರುತ್ತದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಆಕ್ಟಾ-ಕೋರ್ ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಇದು 7 ಲಕ್ಷಕ್ಕೂ ಹೆಚ್ಚು AnTuTu ಸ್ಕೋರ್ ಪಡೆದಿದೆ. ಈ ಫೋನ್ 12GB RAM ಮತ್ತು 12GB ವಿಸ್ತೃತ RAM ಹೊಂದಿದೆ. ಇದರಲ್ಲಿ 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ.
ಕ್ಯಾಮೆರಾ ಸೆಟಪ್ ಬಗ್ಗೆ ಹೇಳುವುದಾದರೆ, ಇದು OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಎರಡನೇ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಇದು 5500mAh ಬ್ಯಾಟರಿ ಮತ್ತು 44W ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಈ ಮೊಬೈಲ್ IP64 ರೇಟಿಂಗ್, ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್, ಡ್ಯುಯಲ್ ಸ್ಟೀರಿಯೊ ಸ್ಪೀಕರ್‌ಗಳು ಮತ್ತು 5G ಸಂಪರ್ಕದೊಂದಿಗೆ ಬರುತ್ತದೆ. ಈ ಫೋನ್ ಆಂಡ್ರಾಯ್ಡ್ 14 ಆಧಾರಿತ ಫನ್‌ಟಚ್ ಓಎಸ್ 14 ಜೊತೆಗೆ ಕೆಲಸ ನಿರ್ವಹಿಸುತ್ತದೆ. ಇದು 2 ವರ್ಷಗಳ ಓಎಸ್ ಅಪ್‌ಗ್ರೇಡ್‌ಗಳು ಮತ್ತು 3 ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ.
ಐಕ್ಯೂ ನಿಯೋ 10R 5G: 31,999 ರೂ.
= ರಿಯಾಯಿತಿ ಬೆಲೆ: 26,998 ರೂ.
ಐಕ್ಯೂ ನಿಯೋ 10R (iQOO Neo 10R) ಮೊಬೈಲ್ ಇತ್ತೀಚೆಗೆ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಫೋನ್ 6.78 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 2800 × 1260 ಪಿಕ್ಸೆಲ್‌ಗಳ ರೆಸಲ್ಯೂಶನ್ ಹೊಂದಿದೆ. ಹಾಗೆಯೇ 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 144Hz ರಿಫ್ರೆಶ್ ದರದ ಬೆಂಬಲದೊಂದಿಗೆ ಬರುತ್ತದೆ. ಈ ಫೋನಿನಲ್ಲಿ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಸಹ ಲಭ್ಯವಿದೆ. ಈ ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8S ಜೆನ್ 3 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 15 ಆಧಾರಿತ Funtouch ಓಎಸ್ 15 ಜೊತೆಗೆ ಕೆಲಸ ನಿರ್ವಹಿಸುತ್ತದೆ. ಈ ಫೋನ್ 8GB RAM, 12GB RAM ಮತ್ತು 128GB ಸ್ಟೋರೇಜ್ ಒಳಗೊಂಡಿದೆ.
ಐಕ್ಯೂ ನಿಯೋ 10R ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಈ ಮೊಬೈಲ್ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಸ್ಮಾರ್ಟ್‌ಫೋನ್ 6400mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದರೊಂದಿಗೆ ಬೈಪಾಸ್ ಚಾರ್ಜಿಂಗ್ ತಂತ್ರಜ್ಞಾನ ಸಹ ಲಭ್ಯವಿದೆ.


Click it and Unblock the Notifications








