Home
Deal of the day

ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌; ಬಜೆಟ್‌ ಮೊಬೈಲ್‌ಗಳಿಗೆ ಭಾರೀ ಡಿಸ್ಕೌಂಟ್‌!

ಪ್ರಮುಖ ಇ ಕಾಮರ್ಸ್ ತಾಣ ಅಮೆಜಾನ್ ಒಂದಿಲ್ಲೊಂದು ವಿಶೇಷ ಕೊಡುಗೆಗಳನ್ನು ಆಯೋಜಿಸುವ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಸೇಲ್‌ನಲ್ಲಿ ಲ್ಯಾಪ್‌ಟಾಪ್, ಕ್ಯಾಮೆರಾ ಹಾಗೂ ಮೊಬೈಲ್‌ ಸೇರಿದಂತೆ ಗ್ಯಾಡ್ಜೆಟ್ಸ್‌ ಗಳಿಗೆ ಅಧಿಕ ಡಿಸ್ಕೌಂಟ್ ಘೋಷಿಸುತ್ತದೆ. ಈ ಮೂಲಕ ಅಮೆಜಾನ್ ಗ್ರಾಹಕರಿಗೆ ನೆಚ್ಚಿನ ಶಾಪಿಂಗ್ ಇ ಕಾಮರ್ಸ್‌ ತಾಣ ಆಗಿ ಕಾಣಿಸಿಕೊಂಡಿದೆ. ಸದ್ಯ ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌ ಸೇಲ್ ಆಯೋಜಿಸಿದ್ದು, ಪ್ರೀಮಿಯಂ ಫೋನ್‌ಗಳಿಗೆ ವಿಶೇಷ ಕೊಡುಗೆ ನೀಡಿದೆ.

ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌; ಬಜೆಟ್‌ ಮೊಬೈಲ್‌ಗಳಿಗೆ ಭಾರೀ ಡಿಸ್ಕೌಂಟ್‌!

ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌ ಸೇಲ್‌ ಸದ್ಯ ಚಾಲ್ತಿ ಇದೆ. ಈ ವಿಶೇಷ ಸೇಲ್ ಇದೇ ಏಪ್ರಿಲ್‌ 14 ರ ವರೆಗೂ ಇರುತ್ತದೆ. ಈ ಮಾರಾಟ ಮೇಳದಲ್ಲಿ ಅಮೆಜಾನ್ ಎಲ್ಲ ಬಗೆಯ ಫೋನ್‌ಗಳಿಗೂ ಕೊಡುಗೆ ತಿಳಿಸಿದ್ದು, ಮುಖ್ಯವಾಗಿ ಕೆಲವು ಆಯ್ದ ಬಜೆಟ್‌ ದರದ ಫೋನ್‌ಗಳಿಗೆ ಅಧಿಕ ರಿಯಾಯಿತಿ ತಿಳಿಸಿದೆ. ಪ್ರಮುಖ ಬ್ರ್ಯಾಂಡ್‌ಗಳ ಫೋನ್‌ಗಳು ಸಹ ಕೊಡುಗೆಯ ಪಟ್ಟಿ ಯಲ್ಲಿ ಕಾಣಿಸಿಕೊಂಡಿವೆ. ಹಾಗೆಯೇ ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ರಿಯಾಯಿತಿ ಲಭ್ಯ ಆಗಲಿದೆ. ಹಾಗಾದರೇ ಅಮೆಜಾನ್‌ನಲ್ಲಿ ಸದ್ಯ ಆಫರ್‌ನಲ್ಲಿ ಕಾಣಿಸಿಕೊಂಡಿರುವ ಬಜೆಟ್‌ ಬೆಲೆಯ ಮೊಬೈಲ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080 x 2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409 ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್‌ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯ ದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64 GB ಮತ್ತು 6GB + 128 GB ಆಗಿವೆ.‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಆಕ್ಟಾ ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128 GB, 8GB RAM ಮತ್ತು 128 GB ಹಾಗೂ 12GB RAM + 256 GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ 4,500 mAh ಬ್ಯಾಟರಿ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಜೊತೆಗೆ 30W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

ಲಾವಾ ಅಗ್ನಿ 5G ಫೋನ್
ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 90Hz ರೀಫೇಶ್‌ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್ Dimensity 810 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಅವುಗಳಲ್ಲಿ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದ್ದುದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 30W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ವನ್ನು ಸಹ ಒಳಗೊಂಡಿದೆ. 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

English summary
Amazon Fab Phones Fest 2022: Best Deals On These Budget Price Mobiles.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+