ಜನಪ್ರಿಯ ಮೀಡ್‌ರೇಂಜ್ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ರಿಯಾಯಿತಿ!
ಇ ಕಾಮರ್ಸ್ ದೈತ್ಯ ಪ್ಲಾಟ್‌ಫಾರ್ಮ್ ಎನಿಸಿಕೊಂಡಿರುವ ಅಮೆಜಾನ್ ಬೊಂಬಟ್ ಕೊಡುಗೆಗಳ ಮೂಲಕ ಗ್ರಾಹಕರನ್ನು ತನ್ನತ್ತ ಆಕರ್ಷಿಸಿದೆ. ಮುಖ್ಯವಾಗಿ ವಿಶೇಷ ಮಾರಾಟ ಮೇಳಗಳನ್ನು ಆಯೋಜಿಸುವ ಮೂಲಕ ಆನ್‌ಲೈನ್ ಶಾಪಿಂಗ್ ಗ್ರಾಹಕರ ನೆಚ್ಚಿನ ತಾಣ ಆಗಿ ಕಾಣಿಸಿಕೊಂಡಿದೆ. ಅದರಲ್ಲಿಯೂ ಸ್ಮಾರ್ಟ್‌ಫೋನ್ ಗಳಿಗೆ ಆಕರ್ಷಕ ಆಫರ್ ಲಭ್ಯ ಮಾಡಿ ಮೊಬೈಲ್ ಪ್ರಿಯರನ್ನು ಸೆಳೆಯುವ ಪ್ರಯತ್ನ ಮಾಡುತ್ತದೆ. ಈ ದೈತ್ಯ ಇ ಕಾಮರ್ಸ್ ಸದ್ಯ ಅಮೆಜಾನ್ ಫ್ಯಾಬ್ ಫೋನ್ ಫೆಸ್ಟ್ ಸೇಲ್ ಆಯೋಜಿಸಿದೆ.

ಹೌದು, ಪ್ರಸ್ತುತ ಅಮೆಜಾನ್ ತಾಣದಲ್ಲಿ ಸದ್ಯ ಅಮೆಜಾನ್ ಫ್ಯಾಬ್ ಫೋನ್ ಫೆಸ್ಟ್ ಸೇಲ್ ಚಾಲ್ತಿ ಇದೆ. ಈ ಸೇಲ್ ಇದೇ ಫೆಬ್ರುವರಿ 28ರ (ಇಂದು) ವರೆಗೂ ಲೈವ್ ಇರಲಿದೆ. ಈ ಮಾರಾಟ ಮೇಳದ ವೇಳೆ ಅಮೆಜಾನ್ ತಾಣವು ಕೆಲವು ಪ್ರಮುಖ ಕಂಪನಿಗಳ ಮೀಡ್ ರೇಂಜ್ ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ ಲಭ್ಯ ಮಾಡಿದೆ. ಹಾಗೆಯೇ ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ರಿಯಾಯಿತಿ ಲಭ್ಯ ಆಗಲಿದೆ. ಹಾಗೆಯೇ ಇತ್ತೀಚಿಗೆ ಬಿಡುಗಡೆ ಆಗಿರುವ ಫೋನ್ ಗಳಿಗೂ ಭರ್ಜರಿ ರಿಯಾಯಿತಿ ಲಭ್ಯ ಇದೆ. ಹಾಗಾದರೇ ಅಮೆಜಾನ್‌ನಲ್ಲಿ ಸದ್ಯ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿರುವ ಮೀಡ್ ರೇಂಜ್ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080 x 2,400 ಪಿಕ್ಸಲ್ ರೆಸಲ್ಯೂಶನ್ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409 ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯ ದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್ ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128 GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನ ವನ್ನು ಬೆಂಬಲಿಸುತ್ತದೆ.
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64 GB ಮತ್ತು 6GB + 128 GB ಆಗಿವೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಒನ್‌ಪ್ಲಸ್ ನಾರ್ಡ್ CE 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್ ನಾರ್ಡ್ CE 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128 GB, 8GB RAM ಮತ್ತು 128 GB ಹಾಗೂ 12GB RAM + 256 GB ಇಂಟರ್ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ 4,500 mAh ಬ್ಯಾಟರಿ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಜೊತೆಗೆ 30W Warp ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.
ಲಾವಾ ಅಗ್ನಿ 5G ಫೋನ್
ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ ಅಧಿಕ ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 90Hz ರೀಫೇಶ್ ರೇಟ್ ಅನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್ Dimensity 810 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಅವುಗಳಲ್ಲಿ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದ್ದುದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 30W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.


Click it and Unblock the Notifications