ಅಮೆಜಾನ್ ಫ್ಯಾಬ್ ಫೋನ್ ಫೆಸ್ಟ್: ಈ ಫೋನ್‌ಗಳ ಬೆಲೆಯಲ್ಲಿ ಭಾರೀ ಕಡಿತ!
ಇ ಕಾಮರ್ಸ್ ದಿಗ್ಗಜ ಪ್ಲಾಟ್‌ಫಾರ್ಮ್ ಅಮೆಜಾನ್ ಆನ್‌ಲೈನ್ ಶಾಪಿಂಗ್ ಗ್ರಾಹಕರ ಫೇವರೇಟ್ ತಾಣವಾಗಿ ಗುರುತಿಸಿಕೊಂಡಿದೆ. ಅಮೆಜಾನ್ ಪ್ಲಾಟ್‌ಫಾರ್ಮ್ ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ವಿಶೇಷ ಕೊಡುಗೆ ನೀಡಿ ಮೊಬೈಲ್ ಪ್ರಿಯರನ್ನು ಸೆಳೆಯುವ ಪ್ರಯತ್ನ ಮಾಡುತ್ತಲ್ಲೇ ಮುಂದೆ ಸಾಗಿದೆ. ಹಬ್ಬದ ವಿಶೇಷ ಸೇಲ್ ಇಲ್ಲದ ಸಂದರ್ಭಗಳಲ್ಲಿಯೂ ಆಕರ್ಷಕ ಡಿಸ್ಕೌಂಟ್ ಲಭ್ಯ ಮಾಡುತ್ತದೆ.

ಅಮೆಜಾನ್ ಪ್ಲಾಟ್‌ಫಾರ್ಮ್ ಸದ್ಯ ಅಮೆಜಾನ್ ಫ್ಯಾಬ್ ಫೋನ್ ಫೆಸ್ಟ್ ಸೇಲ್ ಚಾಲ್ತಿ ಇದೆ. ಈ ಸೇಲ್ ಇದೇ ಫೆಬ್ರುವರಿ 28ರ ವರೆಗೂ ಇರಲಿದೆ. ಈ ವೇಳೆ ಅಮೆಜಾನ್ ತಾಣವು ಕೆಲವು ಪ್ರಮುಖ ಕಂಪನಿಗಳ ಜನಪ್ರಿಯ ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ ಲಭ್ಯ ಮಾಡಿದೆ. ಹಾಗೆಯೇ ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ರಿಯಾಯಿತಿ ಸಹ ಸಿಗಲಿದೆ. ಹಾಗಾದರೇ ಅಮೆಜಾನ್‌ನಲ್ಲಿ ಸದ್ಯ ರಿಯಾಯಿತಿ ದರದಲ್ಲಿ ಗಮನ ಸೆಳೆದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE 5G ಸ್ಮಾರ್ಟ್‌ಫೋನ್
ಗ್ಯಾಲಕ್ಸಿ S20 FE 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗೇಯೇ 8GB RAM + 128 GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್ ವೈಡ್ ಆಂಗಲ್ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ. ಹಾಗೆಯೇ ಈ ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಪಡೆದಿದೆ.
ಶಿಯೋಮಿ 11 ಲೈಟ್ 5G NE ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
ಟೆಕ್ನೋ ಸ್ಪಾರ್ಕ್ 8T ಸ್ಮಾರ್ಟ್‌ಫೋನ್
ಟೆಕ್ನೋ ಸ್ಪಾರ್ಕ್ 8T ಸ್ಮಾರ್ಟ್‌ಫೋನ್ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ಅನುಪಾತವನ್ನು ಒಳಗೊಂಡಿದ್ದು, 401ppi ಪಿಕ್ಸಲ್ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ 500 nits ಬ್ರೈಟ್ನೆಸ್ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಸಪೋರ್ಟ್ ಸಹ ಪಡೆದಿದೆ. ಜೊತೆಗೆ 4GB RAM + 64GB ವೇರಿಯಂಟ್ ಆಯ್ಕೆಯನ್ನು ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಟೆಕ್ನೋ ಸ್ಪಾರ್ಕ್ 8T ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಉತ್ತಮ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಿದೆ.
ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 64 GB ಮತ್ತು 6GB RAM + 128 GB ಆಂತರಿಕ ಸ್ಟೋರೇಜ್ ಆಯ್ಕೆಯಗಳನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.


Click it and Unblock the Notifications