Home
Deal of the day

ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌; ಈ ಸ್ಯಾಮ್‌ಸಂಗ್‌ ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್‌!

ಜನಪ್ರಿಯ ಅಮೆಜಾನ್ ಒಂದಿಲ್ಲೊಂದು ವಿಶೇಷ ಮಾರಾಟಗಳನ್ನು ಆಯೋಜಿಸುವ ಮೂಲಕ ಶಾಪಿಂಗ್ ಪ್ರಿಯರನ್ನು ಸೆಳೆಯುತ್ತದೆ. ಈ ಸೇಲ್‌ನಲ್ಲಿ ಫೋನ್‌, ಲ್ಯಾಪ್‌ಟಾಪ್ ಹಾಗೂ ಇತರೆ ಸೇರಿದಂತೆ ಗ್ಯಾಡ್ಜೆಟ್ಸ್‌ ಗಳಿಗೆ ಅಧಿಕ ಡಿಸ್ಕೌಂಟ್ ಘೋಷಿಸುತ್ತದೆ. ಈ ಮೂಲಕ ಅಮೆಜಾನ್ ಗ್ರಾಹಕರಿಗೆ ನೆಚ್ಚಿನ ಶಾಪಿಂಗ್ ಇ ಕಾಮರ್ಸ್‌ ತಾಣ ಆಗಿ ಕಾಣಿಸಿಕೊಂಡಿದೆ. ಸದ್ಯ ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌ ಸೇಲ್ ಆಯೋಜಿಸಿದ್ದು, ಸ್ಯಾಮ್‌ಸಂಗ್‌ ಫೋನ್‌ಗಳಿಗೆ ವಿಶೇಷ ಕೊಡುಗೆ ನೀಡಿದೆ.

ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌; ಈ ಸ್ಯಾಮ್‌ಸಂಗ್‌ ಫೋನ್‌ಗಳಿಗೆ ಡಿಸ್ಕೌಂಟ್‌!

ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌ ಸೇಲ್‌ ಸದ್ಯ ಲೈವ್ ಇದೆ. ಈ ವಿಶೇಷ ಸೇಲ್ ಇದೇ ಏಪ್ರಿಲ್‌ 14 ರ ವರೆಗೂ ಇರುತ್ತದೆ. ಈ ಮಾರಾಟ ಮೇಳದಲ್ಲಿ ಅಮೆಜಾನ್ ಎಲ್ಲ ಬಗೆಯ ಫೋನ್‌ಗಳಿಗೂ ಕೊಡುಗೆ ತಿಳಿಸಿದ್ದು, ಮುಖ್ಯವಾಗಿ ಕೆಲವು ಆಯ್ದ ಬಜೆಟ್‌ ದರದ ಫೋನ್‌ಗಳಿಗೆ ಅಧಿಕ ರಿಯಾಯಿತಿ ತಿಳಿಸಿದೆ. ಸ್ಯಾಮ್‌ಸಂಗ್‌ ಬ್ರ್ಯಾಂಡ್‌ಗಳ ಫೋನ್‌ಗಳು ಸಹ ಕೊಡುಗೆಯ ಪಟ್ಟಿ ಯಲ್ಲಿ ಕಾಣಿಸಿಕೊಂಡಿವೆ. ಹಾಗೆಯೇ ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ರಿಯಾಯಿತಿ ಲಭ್ಯ ಆಗಲಿದೆ. ಹಾಗಾದರೇ ಅಮೆಜಾನ್‌ನಲ್ಲಿ ಸದ್ಯ ಆಫರ್‌ನಲ್ಲಿ ಕಾಣಿಸಿಕೊಂಡಿರುವ ಸ್ಯಾಮ್‌ಸಂಗ್‌ ಮೊಬೈಲ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ ಫೋನ್ 2400 x 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನ ವನ್ನು ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್‌ ಮೀಡಿಯಾ ಟೆಕ್‌ ಹಿಲಿಯೊ P35 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಒಂದು ಯುಐ ಕೋರ್ 2.5 ರೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ ಈ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ 4G LTE, ವೈ-ಫೈ, ಬ್ಲೂಟೂತ್, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌-ಹೆಚ್‌ಡಿ + ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒನ್ ಯುಐ ಕೋರ್ 3.1 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 6GB RAM + 128GB ಮತ್ತು 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಯನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನಿನ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದ್ದು, ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

English summary
Amazon Fab Phones Fest 2022: Great Deals On These Samsung Mobile.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+