ಅಮೆಜಾನ್‌ನಲ್ಲಿ ಈ ಬಜೆಟ್‌ ದರದ ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ್‌!

ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಅಮೆಜಾನ್ ಆನ್‌ಲೈನ್‌ ಶಾಪಿಂಗ್ ಗ್ರಾಹಕರಿಗೆ ನೆಚ್ಚಿನ ತಾಣ ಆಗಿದೆ. ಅಮೆಜಾನ್ ಇ ಕಾಮರ್ಸ್‌ ತಾಣವು ಫೋನ್‌ಗಳಿಗೆ ಆಕರ್ಷಕ ಕೊಡುಗೆ ನೀಡಿ ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಯತ್ನ ಮಾಡುತ್ತಲ್ಲೇ ಸಾಗಿದೆ. ಪ್ರಮುಖ ಹಬ್ಬದ ಹಾಗೂ ಸ್ಪೆಷಲ್ ಸೇಲ್ ಇಲ್ಲದ ಸಂದರ್ಭಗಳಲ್ಲಿಯೂ ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ.

ಅಮೆಜಾನ್‌ನಲ್ಲಿ ಈ ಬಜೆಟ್‌ ದರದ ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ್‌!

ಹೌದು, ಸದ್ಯ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌ ಸೇಲ್‌ ಲೈವ್ ಇದೆ. ಈ ಸೇಲ್ ಇದೇ ನವೆಂಬರ್ 28 ರಂದು ಮುಕ್ತಾಯವಾಗಲಿದೆ. ಈ ಮಾರಾಟದಲ್ಲಿ ಅಮೆಜಾನ್ ತಾಣವು ಕೆಲವು ಪ್ರಮುಖ ಕಂಪನಿಗಳ ಬಜೆಟ್‌ ದರದ ಫೋನ್‌ಗಳಿಗೆ ಬೊಂಬಾಟ್ ರಿಯಾಯಿತಿ ಲಭ್ಯ ಮಾಡಿದೆ. ಹಾಗೆಯೇ ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ಡಿಸ್ಕೌಂಟ್ ಸಹ ಸಿಗಲಿದೆ. ಹಾಗಾದರೇ ಅಮೆಜಾನ್‌ನಲ್ಲಿ ಸದ್ಯ ರಿಯಾಯಿತಿ ದರದಲ್ಲಿ ಗಮನ ಸೆಳೆದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌
ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಸ್ಕ್ರೀನ್ ಟು ಬಾಡಿ ಅನುಪಾತ 90.5 ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಪಿಕ್ಸೆಲ್ ಸಾಂದ್ರತೆಯು 405 ಪಿಪಿಐ ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G95 ಪ್ರೊಸೆಸರ್ ಹೊಂದಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ. ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಸಿ ಪೋರ್ಟ್ ಮೂಲಕ 30W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಅನ್ನು ಬೆಂಬಲಿಸಲಿದೆ.

ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ಫೋನ್
ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಕ್ಯಾಮೆರಾ ಮಾದರಿಯಲ್ಲಿದ್ದು, 20:9 ಅನುಪಾತವನ್ನು ಪಡೆದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರ ವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB + 64GB ಮತ್ತು 6GB + 128GB ಸ್ಟೋರೇಜ್ ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಇದರೊಂದಿಗೆ ಈ ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಎಂಪಿ ಸೆನ್ಸಾರ್‌ ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 2 ಎಂಪಿಯ ಸೆನ್ಸಾರ್ ಕ್ಯಾಮೆರಾ ಹೊಂದಿದೆ. ಹಾಗೆಯೇ ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆ ಯನ್ನು ಒಳಗೊಂಡಿದೆ.

ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್‌
ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್‌ ಅಮೆಜಾನ್‌ ಸೇಲ್‌ನಲ್ಲಿ 6GB RAM ಮತ್ತು 128GB ಆಯ್ಕೆ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಇಂಚಿನ LCD ಪ್ಯಾನಲ್ ಅನ್ನು 90Hz ರಿಫ್ರೆಶ್ ದರವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ ಜಿ 88 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಜೊತೆಗೆ 6000mAh ಬ್ಯಾಟರಿಯನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM+64GB ಮತ್ತು 6GB RAM+128GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಹಾಗೆಯೇ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರಿಯಲ್‌ಮಿ ನಾರ್ಜೊ 50A
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.

Best Deals and Discounts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X