Home
Deal of the day

ಅಮೆಜಾನ್ ಸೇಲ್: ಈ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ಕೊಡುಗೆ!

ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್ ಏನಾದರೊಂದು ವಿಶೇಷ ಕೊಡುಗೆಗಳನ್ನು ಆಯೋಜಿಸುವ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಸೇಲ್‌ನಲ್ಲಿ ಲ್ಯಾಪ್‌ಟಾಪ್, ಕ್ಯಾಮೆರಾ ಹಾಗೂ ಸ್ಮಾರ್ಟ್‌ಫೋನ್‌ ಸೇರಿದಂತೆ ಗ್ಯಾಡ್ಜೆಟ್ಸ್‌ಗಳಿಗೆ ಅಧಿಕ ಡಿಸ್ಕೌಂಟ್ ಘೋಷಿಸುತ್ತದೆ. ಈ ಮೂಲಕ ಅಮೆಜಾನ್ ಗ್ರಾಹಕರಿಗೆ ನೆಚ್ಚಿನ ಶಾಪಿಂಗ್ ಇ ಕಾಮರ್ಸ್‌ ತಾಣ ಆಗಿ ಕಾಣಿಸಿಕೊಂಡಿದೆ. ಸದ್ಯ ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌ ಸೇಲ್ ಆಯೋಜಿಸಿದ್ದು, ಪ್ರೀಮಿಯಂ ಫೋನ್‌ಗಳಿಗೆ ವಿಶೇಷ ಕೊಡುಗೆ ನೀಡಿದೆ.

ಅಮೆಜಾನ್ ಸೇಲ್: ಈ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ಕೊಡುಗೆ!

ಹೌದು, ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌ ಸೇಲ್‌ ಸದ್ಯ ಲೈವ್ ಇದೆ. ಈ ವಿಶೇಷ ಸೇಲ್ ಇದೇ ಮಾರ್ಚ್ 14ರ ವರೆಗೂ (ಇಂದು) ಇರುತ್ತದೆ. ಈ ಮಾರಾಟ ಮೇಳದಲ್ಲಿ ಅಮೆಜಾನ್ ಎಲ್ಲ ಬಗೆಯ ಫೋನ್‌ಗಳಿಗೂ ಕೊಡುಗೆ ತಿಳಿಸಿದ್ದು, ಮುಖ್ಯವಾಗಿ ಕೆಲವು ಆಯ್ದ ಪ್ರೀಮಿಯಂ ದರದ ಫೋನ್‌ಗಳಿಗೆ ಹೆಚ್ಚಿನ ಡಿಸ್ಕೌಂಟ್‌ ಘೋಷಿಸಿದೆ. ಪ್ರಮುಖ ಬ್ರ್ಯಾಂಡ್‌ಗಳ ಫೋನ್‌ಗಳು ಸಹ ಕೊಡುಗೆಯ ಪಟ್ಟಿಯಲ್ಲಿ ಕಾಣಿಸಿಕೊಂಡಿವೆ. ಹಾಗೆಯೇ ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ರಿಯಾಯಿತಿ ಲಭ್ಯ ಆಗಲಿದೆ. ಹಾಗಾದರೇ ಅಮೆಜಾನ್‌ನಲ್ಲಿ ಸದ್ಯ ಆಫರ್‌ನಲ್ಲಿ ಕಾಣಿಸಿಕೊಂಡಿರುವ ಪ್ರೀಮಿಯಂ ಬೆಲೆಯ ಮೊಬೈಲ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಫೋನ್ 13 ಫೋನ್‌
ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ.

iQOO 7 5G ಲೆಜೆಂಡ್ ಸ್ಮಾರ್ಟ್‌ಫೋನ್‌
iQOO 7 ಲೆಜೆಂಡ್ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ iQoo 7 ಲೆಜೆಂಡ್ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 128GB ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ ಐಎಂಎಕ್ಸ್ 598 ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಹಾಗೆಯೇ ಈ ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ವಿವೋ V21 5G ಸ್ಮಾರ್ಟ್‌ಫೋನ್‌
ವಿವೋ V21 5G ಸ್ಮಾರ್ಟ್‌ಫೋನ್‌ 1,080 x 2,404 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.44 ಇಂಚಿನ ಫುಲ್‌ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಫಂಟೌಚ್ ಓಎಸ್ 11.1 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. 44 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ ಈ ಫೋನ್‌ 4,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್‌
ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್‌ 6.7 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತಮ ರೆಸಲ್ಯೂಶನ್ ಪಡೆದಿದೆ. ಸೂಪರ್ ರೆಟೀನಾ XDR ಡಿಸ್‌ಪ್ಲೇ ಮಾದರಿಯಲ್ಲಿದೆ. ಹೈ ಎಂಡ್‌ ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ ಸಹ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್‌ ಲೆನ್ಸ್ ನಲ್ಲಿವೆ. ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ನೈಟ್‌ ಮೋಡ್‌ ಆಯ್ಕೆ ಇದ್ದು, ಮಂದ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಬಹುದಾಗಿದೆ. ಹಾಗೆಯೇ ವಿಡಿಯೋಗಾಗಿ ಸಿನಿಮ್ಯಾಟಿಕ್ ಮೋಡ್ ಆಯ್ಕೆ ಇದ್ದು, ಅತ್ಯುತ್ತಮ ವಿಡಿಯೋ ರೆಕಾರ್ಡ್‌ ಬೆಂಬಲಿಸಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ.

ಮಿ 11X ಪ್ರೊ ಸ್ಮಾರ್ಟ್‌ಫೋನ್‌
ಶಿಯೋಮಿ ಮಿ 11X ಪ್ರೊ ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ AMOLED 120Hz ರಿಫ್ರೆಶ್ ರೇಟ್‌, 360Hz ಟಚ್ ಸ್ಯಾಂಪ್ಲಿಂಗ್ ರೇಟ್‌, 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ.ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 4,520mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಮತ್ತು 2.5W ನಲ್ಲಿ ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

English summary
Amazon Fab Phones Fest Sale 2022: Amazing Discount On These Premium Mobiles.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+