Home
Deal of the day

ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌: ಈ ಹೊಸ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ!

ಜನಪ್ರಿಯ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಅಮೆಜಾನ್ ಆನ್‌ಲೈನ್‌ ಶಾಪಿಂಗ್ ಗ್ರಾಹಕರ ಅಚ್ಚು ಮೆಚ್ಚಿನ ತಾಣ ಎನಿಸಿಕೊಂಡಿದೆ. ಅಮೆಜಾನ್ ಪ್ಲಾಟ್‌ಫಾರ್ಮ್ ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ವಿಶೇಷ ಕೊಡುಗೆ ನೀಡಿ ಮೊಬೈಲ್ ಪ್ರಿಯರನ್ನು ಸೆಳೆಯುವ ಪ್ರಯತ್ನ ಮಾಡುತ್ತಲ್ಲೇ ಮುನ್ನಡೆದಿದೆ. ಹಬ್ಬದ ವಿಶೇಷ ಸೇಲ್ ಇಲ್ಲದ ಸಂದರ್ಭಗಳಲ್ಲಿಯೂ ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ.

ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌: ಈ ಹೊಸ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ!

ಹೌದು, ಅಮೆಜಾನ್‌ನಲ್ಲಿ ಸದ್ಯ ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌ ಸೇಲ್‌ ಚಾಲ್ತಿ ಇದೆ. ಈ ಸೇಲ್ ಇದೇ ನವೆಂಬರ್ 28ರ ವರೆಗೂ ಇರಲಿದೆ. ಈ ವೇಳೆ ಅಮೆಜಾನ್ ತಾಣವು ಕೆಲವು ಪ್ರಮುಖ ಬ್ರ್ಯಾಂಡ್‌ಗಳ ಜನಪ್ರಿಯ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯ ಮಾಡಿದೆ. ಹಾಗೆಯೇ ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ಡಿಸ್ಕೌಂಟ್ ಸಹ ಸಿಗಲಿದೆ. ಹಾಗಾದರೇ ಅಮೆಜಾನ್‌ನಲ್ಲಿ ಸದ್ಯ ರಿಯಾಯಿತಿ ದರದಲ್ಲಿ ಗಮನ ಸೆಳೆದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಶಿಯೋಮಿ 11 ಲೈಟ್ 5G NE ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE 5G ಸ್ಮಾರ್ಟ್‌ಫೋನ್‌
ಗ್ಯಾಲಕ್ಸಿ S20 FE 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗೇಯೇ 8GB RAM + 128 GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ ವೈಡ್ ಆಂಗಲ್ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ. ಹಾಗೆಯೇ ಈ ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM+64GB ಮತ್ತು 6GB RAM+128GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಹಾಗೆಯೇ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

iQOO Z3 5G ಸ್ಮಾರ್ಟ್‌ಫೋನ್‌
iQOO Z3 5G ಸ್ಮಾರ್ಟ್‌ಫೋನ್‌ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌+ ಎಲ್‌ಸಿಡಿ ಡಿಸ್‌ಪ್ಲೇ ಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ನಲ್ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್‌ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

ಟೆಕ್ನೋ ಸ್ಮಾರ್ಕ್‌ 7 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 2GB RAM ರೂಪಾಂತರವು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದ್ದರೆ, 3GB RAM ರೂಪಾಂತರವು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೊ A25 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

English summary
Amazon Fab Phones Fest Sale: Attractive Discount On These Popular Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+