Home
Deal of the day

ಈ ಬಜೆಟ್‌ ಬೆಲೆಯ ಫೋನ್‌ಗಳಿಗೆ ಈಗ ಜಬರ್ದಸ್ತ್ ಡಿಸ್ಕೌಂಟ್‌!

ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್ ಏನಾದರೊಂದು ವಿಶೇಷ ಕೊಡುಗೆಗಳನ್ನು ಆಯೋಜಿಸುವ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಸೇಲ್‌ನಲ್ಲಿ ಲ್ಯಾಪ್‌ಟಾಪ್, ಕ್ಯಾಮೆರಾ ಹಾಗೂ ಸ್ಮಾರ್ಟ್‌ಫೋನ್‌ ಸೇರಿದಂತೆ ಗ್ಯಾಡ್ಜೆಟ್ಸ್‌ಗಳಿಗೆ ಹೆಚ್ಚಿನ ರಿಯಾಯಿತಿ ಘೋಷಿಸುತ್ತದೆ. ಈ ಮೂಲಕ ಅಮೆಜಾನ್ ಗ್ರಾಹಕರಿಗೆ ನೆಚ್ಚಿನ ಶಾಪಿಂಗ್ ಇ ಕಾಮರ್ಸ್‌ ತಾಣ ಆಗಿ ಕಾಣಿಸಿಕೊಂಡಿದೆ. ಸದ್ಯ ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌ ಸೇಲ್ ಆಯೋಜಿಸಿದ್ದು, ಬಜೆಟ್‌ ಫೋನ್‌ಗಳಿಗೆ ಬೊಂಬಾಟ್ ಕೊಡುಗೆ ನೀಡಿದೆ.

ಈ ಬಜೆಟ್‌ ಬೆಲೆಯ ಫೋನ್‌ಗಳಿಗೆ ಈಗ ಜಬರ್ದಸ್ತ್ ಡಿಸ್ಕೌಂಟ್‌!

ಹೌದು, ಅಮೆಜಾನ್‌ ಫ್ಯಾಬ್‌ ಫೋನ್‌ ಫೆಸ್ಟ್‌ ಸೇಲ್‌ ಸದ್ಯ ಲೈವ್ ಇದೆ. ಈ ಸೇಲ್ ಇದೇ ಮಾರ್ಚ್ 14ರ ವರೆಗೂ ಚಾಲ್ತಿ ಇರಲಿದೆ. ಈ ಮಾರಾಟ ಮೇಳದಲ್ಲಿ ಅಮೆಜಾನ್ ಕೆಲವು ಆಯ್ದ ಬಜೆಟ್‌ ದರದ ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ್‌ ಘೋಷಿಸಿದೆ. ಪ್ರಮುಖ ಬ್ರ್ಯಾಂಡ್‌ಗಳ ಫೋನ್‌ಗಳು ಸಹ ಕೊಡುಗೆಯ ಪಟ್ಟಿಯಲ್ಲಿ ಕಾಣಿಸಿಕೊಂಡಿವೆ. ಹಾಗೆಯೇ ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ರಿಯಾಯಿತಿ ಲಭ್ಯ ಆಗಲಿದೆ. ಹಾಗಾದರೇ ಅಮೆಜಾನ್‌ನಲ್ಲಿ ಸದ್ಯ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿರುವ ಬಜೆಟ್‌ ದರದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌
ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌ 720x1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ HD+ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ A22 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 Go-ಆಧಾರಿತ HiOS 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 2021 ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ.

ರೆಡ್ಮಿ 10 ಪ್ರೈಮ್
ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್‌ 6.5 ಇಂಚಿನ LCD ಪ್ಯಾನಲ್ ಅನ್ನು 90Hz ರಿಫ್ರೆಶ್ ದರವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ ಜಿ 88 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಜೊತೆಗೆ 6000mAh ಬ್ಯಾಟರಿಯನ್ನು ಹೊಂದಿದೆ.

ಒಪ್ಪೊ A31 ಸ್ಮಾರ್ಟ್‌ಫೋನ್
ಒಪ್ಪೊ A31 ಸ್ಮಾರ್ಟ್‌ಫೋನ್ 1600 x 720 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 9 ಪೈ ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ 4GB+64GB ವೇರಿಯಂಟ್ ಮತ್ತು 6GB +128GB ವೇರಿಯಂಟ್ ಆಯ್ಕೆ ಹೊಂದಿದೆ. ತ್ರಿವಳಿ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 12ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಫೋನ್ 4,230 mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ.

English summary
Amazon Fab Phones Fest Sale: Best Deals On these Customer Friendly Price Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+