ಅಮೆಜಾನ್ ಸೇಲ್‌ನಲ್ಲಿ ಈ ಅಗ್ಗದ ಬೆಲೆಯ ಫೋನ್‌ಗಳಿಗೂ ಭರ್ಜರಿ ಡಿಸ್ಕೌಂಟ್!
ಅಮೆಜಾನ್ ಪ್ಲಾಟ್‌ಫಾರ್ಮ್ ಗ್ರಾಹಕರನ್ನು ಸೆಳೆಯಲು ಒಂದಿಲ್ಲೊಂದು ವಿಶೇಷ ಸೇಲ್ ಆಯೋಜಿಸುತ್ತಲೇ ಸಾಗಿ ಬಂದಿದೆ. ಮುಖ್ಯವಾಗಿ ಹಬ್ಬದ ದಿನಗಳಂದು ಬೊಂಬಾಟ್ ಕೊಡುಗೆಗಳ ಸುರಿಮಳೆ ಸುರಿಸುತ್ತದೆ. ಸ್ಮಾರ್ಟ್ ಗ್ಯಾಡ್ಜೆಟ್ಸ್‌ಗಳಿಗೆ ಸ್ಪೆಷಲ್ ರಿಯಾಯಿತಿ ಸೇಲ್ ಅನ್ನು ಆಯೋಜಿಸಿ ಗಮನ ಸೆಳೆದಿದೆ. ಸದ್ಯದ ಸಾಲು ಸಾಲು ಹಬ್ಬಗಳ ಪ್ರಯುಕ್ತ ಅಮೆಜಾನ್ ಇದೀಗ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್ 2021 ಸೇಲ್ ಅನ್ನು ಘೋಷಿಸಿದೆ. ಈ ಹಬ್ಬದ ಸೇಲ್‌ನಲ್ಲಿ ಆಯ್ದ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ರಿಯಾಯಿತಿಗಳನ್ನು ತಿಳಿಸಿದೆ.

ಹೌದು, ಅಮೆಜಾನ್ ಇ ಕಾಮರ್ಸ್ ತಾಣವು ಆಯೋಜಿಸಿರುವ ಗ್ರೇಟ್ ಇಂಡಿಯನ್ ಸೇಲ್ 2021 ಸೇಲ್ ಇದೇ ಅಕ್ಟೋಬರ್ 3 ರಂದು ಶುರುವಾಗಲಿದೆ. ಇನ್ನು ಈ ಗ್ರೇಟ್ ಇಂಡಿಯನ್ ಸೇಲ್ 2021 ಮಾರಾಟವು ಪ್ರತಿಷ್ಠಿತ ಬ್ರ್ಯಾಂಡ್‌ನ ಮೊಬೈಲ್ ಫೋನ್‌ಗಳು, ಸ್ಪೀಕರ್‌ಗಳು, ಸ್ಮಾರ್ಟ್‌ವಾಚ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಇತರ ಸ್ಮಾರ್ಟ್ ಉತ್ಪನ್ನಗಳಿಗೆ ಸ್ಪೆಷಲ್ ಕೊಡುಗೆ ನೀಡುತ್ತದೆ. ಮುಖ್ಯವಾಗಿ ಗ್ರಾಹಕರ ಸ್ನೇಹಿ ಬೆಲೆಯ ಸ್ಮಾರ್ಟ್‌ಫೋನ್‌ಗಳು ಈ ಹಬ್ಬದ ಆಫರ್‌ನಲ್ಲಿ ಇನ್ನಷ್ಟು ಕಡಿಮೆ ಬೆಲೆಗೆ ಲಭ್ಯವಾಗಲಿವೆ.

ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಟೆಕ್ನೋ, ರಿಯಲ್‌ಮಿ ಕಂಪನಿಯ ಆಯ್ದ ಕೆಲವು ಅಗ್ಗದ ಪ್ರೈಸ್‌ನ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ್ ದೊರೆಯಲಿದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದಲೂ ಇನ್‌ಸ್ಟಂಟ್ ರಿಯಾಯಿತಿ ಸಿಗಲಿದೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಕಡಿಮೆ ದರದಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರಿಯಲ್‌ಮಿ ನಾರ್ಜೊ 50i
ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸೋಕ್ 9863 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ 8 ಮೆಗಾ ಪಿಕ್ಸೆಲ್ AI ರಿಯರ್ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ 5 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್
ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಅಲ್ಲದೇ ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನಿನ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದರೊಂದಿಗೆ ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ರಿಯಲ್‌ಮಿ ನಾರ್ಜೊ 50A
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
ಒಪ್ಪೊ A31 ಸ್ಮಾರ್ಟ್‌ಫೋನ್
ಒಪ್ಪೊ A31 ಸ್ಮಾರ್ಟ್‌ಫೋನ್ 1600 x 720 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 9 ಪೈ ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ 4GB+64GB ವೇರಿಯಂಟ್ ಮತ್ತು 6GB +128GB ವೇರಿಯಂಟ್ ಆಯ್ಕೆ ಹೊಂದಿದೆ. ತ್ರಿವಳಿ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 12ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಫೋನ್ 4,230 mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ.


Click it and Unblock the Notifications